ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೀತಿದೆ . ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು . ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತೆ: ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ(ಜೂ.13): ದರ್ಶನ್ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಚುರುಕುತನ, ನಿಯತ್ತಿನ ತನಿಖೆ ನಡೀಬೇಕು. ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರದಲ್ಲಿ ಇರುವವರು ಇರಬಹುದು. ಸೆಲೆಬ್ರಿಟಿ ಆಗಬಹುದು. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು . ಕಾನೂನನ್ನು ಕೈಗೆ ತೆಗೆದುಕೊಳ್ಳುವುದೇ ಅಪರಾಧ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು(ಗುರುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಮರ್ಡರ್ ಆಗೋ ಮಟ್ಟಕ್ಕೆ ಹೋದರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಕೊಲೆಯಲ್ಲಿ ಹಲವಾರು ರೀತಿ ಇವೆ. ಇದು ಕಾನ್ಫರೆಸಿ ಮಾಡಿ ಮರ್ಡರ್ ಮಾಡಿರೋ ಪ್ರಕರಣವಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದೆ ಎಂದು ತಿಳಿಸಿದ್ದಾರೆ.
ಪವಿತ್ರಾ ಗೌಡ ತುಂಬಾ ಕೋಪಿಷ್ಠೆ, ಕೋಪ ಬಂದ್ರೆ ಏನ್ ಮಾಡ್ತಾಳೆ ಅವಳಿಗೂ ಗೊತ್ತಿಲ್ಲ: ಮಾಜಿ ಪತಿ ಸಂಜಯ್ ಹೇಳಿಕೆ ವೈರಲ್
ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೀತಿದೆ . ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು . ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತೆ ಎಂದು ತಿಳಿಸಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ದರ್ಶನ್ ಕೃಷಿ ರಾಯಭಾರಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವನು ಹೀಗೆ ಮಾಡ್ತಾನೆ ಅಂತ ನಮಗೇನು ಕನಸು ಬಿದ್ದಿರುತ್ತಾ? ಎಂದಷ್ಟೇ ಹೇಳಿದ್ದಾರೆ.
ಶಿಗ್ಗಾಂವಿಗೆ ಉಪಚುನಾವಣೆ ವಿಚಾರ ಬಗ್ಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಶಿಗ್ಗಾಂವಿ ಉಪಚುನಾವಣೆಯ ಪ್ರಕ್ರಿಯೆ ಇನ್ನೂ ಪ್ರಾರಂಭವಾಗಿಲ್ಲ. ನಾನಿನ್ನು ರಾಜೀನಾಮೆ ಕೊಟ್ಟಿಲ್ಲ. ಇಂದಿಗೂ ನಾನು ಶಿಗ್ಗಾಂವಿ ಕ್ಷೇತ್ರದ ಶಾಸಕನಾಗಿದ್ದೇನೆ. ನಾನು ರಾಜೀನಾಮೆ ಕೊಟ್ಟ ನಂತರ ಉಪಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದು ಹೇಳಿದ್ದಾರೆ.
ಪುತ್ರನಿಗೆ ಉಪ ಚುನಾವಣೆಯಲ್ಲಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬೊಮ್ಮಾಯಿ, ಟಿಕೆಟ್ ವಿಚಾರದಲ್ಲಿ ಪಕ್ಷ ತೀರ್ಮಾನ ಮಾಡುತ್ತೆ. ಪಕ್ಷ ಮಾಡೋ ತೀರ್ಮಾನಕ್ಕೆ ನಾವು ಬದ್ಧವಾಗಿರಬೇಕು. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.