
ಮೈಸೂರು(ಜು.13): ದೇವನೂರು ಮಹಾದೇವ ಅವರ ಆ ಕೃತಿ ಕೃತಿಯಲ್ಲ ಅದೊಂದು ವಿಕೃತಿ ಅಂತ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ. ಇಂದು(ಬುಧವಾರ) ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು, ಸಾಹಿತಿ ದೇವನೂರು ಮಹದೇವ ಕಾಂಗ್ರೆಸ್‌ಗೆ ಆಳಾಗಿ ಕೃತಿ ರಚಿಸಿದ್ದು, ಅವರಿಗೆ ಆರ್‌ಎಸ್‌ಎಸ್‌ನ ಆಳ ಅಗಲ ತಿಳಿದುಕೊಳ್ಳಲು ಸಾಧ್ಯವಿಲ್ಲ ಎಂದರು.
ದೇವನೂರು ಮಹಾದೇವಗೆ ಕುಸುಮ ಬಾಲೆ ಕೃತಿ ರಚನೆ ನಂತರ ಒಂದಷ್ಟು ಸೃಜನ ಶೀಲತೆ ಉಳಿದುಕೊಂಡಿದೆ ಎಂದು ಕೊಂಡಿದ್ದೆ. ಆದರೆ ಅಷ್ಟೇ ಆರ್‌ಎಸ್‌ಎಸ್ ಆಳ ಅಗಲ ಪುಸ್ತಕ ಬರೆಯಲು ಹೋಗಿ ಅವರ ಘನತೆಯನ್ನು ಕಳೆದುಕೊಂಡಿದ್ದಾರೆ ಎಂದಿದ್ದಾರೆ. ಅವರು ಚತುರ್ವರ್ಣ ಪದ್ಧತಿ ಬಗ್ಗೆ ಬರೆಯಲು ಹೋಗಿದ್ದಾರೆ. ಒಂದು ಧರ್ಮ, ಒಬ್ಬ ನಾಯಕ, ಒಂದು ದೇಶವನ್ನ ಆರ್‌ಎಸ್‌ಎಸ್ ಪ್ರತಿಪ್ರಾದಿಸುತ್ತದೆ ಎಂದು ಬರೆದಿದ್ದಾರೆ. ಆದರೆ ಒಬ್ಬ ವ್ಯಕ್ತಿ, ಒಂದು ಪುಸ್ತಕ, ಒಂದು ದೇಶದಿಂದ ಇಡೀ ಪ್ರಪಂಚದಲ್ಲಿ ಭಯೋತ್ಪಾದನೆ ಹೆಚ್ಚಾಗಿದೆ. ಈ ಬಗ್ಗೆ ದೇವನೂರು ಮಹಾದೇವ ಯಾಕೆ ಮಾತನಾಡಲ್ಲ.? ಎಂದು ಪ್ರಶ್ನೆ ಮಾಡಿದ್ದಾರೆ.
ನನ್ನ ಕತೆ ಪಾಠ ಮಾಡೋದು ಬೇಡ: ಸರ್ಕಾರಕ್ಕೆ ಪತ್ರ ಬರೆದ ದೇವನೂರ ಮಹದೇವ
ಚತುರ್ವರ್ಣ ಪದ್ಧತಿ ಕೇವಲ ಹಿಂದೂ ಧರ್ಮದಲ್ಲಿಲ್ಲ. ಕ್ರಿಶ್ಚಿಯನ್ ಧರ್ಮದಲ್ಲೂ ಖ್ಯಾತಲೀಕ್ ಪ್ರಾಟಸ್ಟೆಂಟ್, ನಿಗ್ರೋ ಮುಂತಾದ ಪಂಥಗಳಿವೆ. ಇಸ್ಲಾಂ ಧರ್ಮದಲ್ಲೂ ಸುನ್ನಿ, ಸಿಯಾ, ಪಠಾಣ್, ಮೊಗಲ್ ಜಾತಿಗಳಿವೆ. ದೇವನೂರು ಮಹಾದೇವ ಅವರು ಚತುರ್ವರ್ಣ ವಿರೋಧಿಸುವುದಾದರೆ ಎಲ್ಲಾ ಧರ್ಮಗಳ ಬಗ್ಗೆಯೂ ಮಾತನಾಡಲಿ ಅಂತ ತಿಳಿಸಿದ್ದಾರೆ.
ಅಂಬಾನಿ, ಅದಾನಿ ಆದಾಯ ಜಾಸ್ತಿಯಾಗಿದೆ, ಬ್ಯಾಂಕ್‌ಗಳ ಸಾಲ ರೈಟ್ ಆಫ್ ಬಗ್ಗೆ ಏನೇನೋ ಬರೆದಿದ್ದಾರೆ. ಇದೆಲ್ಲವನ್ನ ಗಮನಿಸಿದರೆ ಒಬ್ಬ ಕಾಂಗ್ರೆಸ್‌ನ ಕಾರ್ಯಕರ್ತ ರಾಹುಲ್ ಗಾಂಧಿ ಭಾಷಣದಿಂದ ಪ್ರೇರಿತನಾಗಿ ಬರೆದಂತಿದೆ. ಸಿದ್ದರಾಮಯ್ಯ ಅವರು ದೇವನೂರು ಮಹದೇವ ಜೊತೆ ಮಾತನಾಡಿ ಅವರ ಹೆಸರನ್ನ ಹಾಕಿಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ