ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ಮಿತಿ ಮೀರುತ್ತಿದೆ. ಸೋಮವಾರ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಕೊರೋನಾಗೆ ಬಲಿಯಾಗಿದ್ರೆ, ಈಗ ಬಿಜೆಪಿ ಸಂಸದರರೊಬ್ಬರ ಆಪ್ತ ಕಾರ್ಯದರ್ಶಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಮೈಸೂರು, (ಏ.20): ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಆಪ್ತ ಕಾರ್ಯದರ್ಶಿ ಶಂಕರ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಇಂದು (ಮಂಗಳವಾರ) ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಶಂಕರ್(78) ಕೊನೆಯುಸಿರೆಳೆದಿದ್ದಾರೆ. ಕಳೆದ 40 ವರ್ಷಗಳಿಂದ ಶ್ರೀನಿವಾಸ್ ಪ್ರಸಾದ್ ಬಳಿ ಆಪ್ತ ಸಹಾಯಕರಾಗಿದ್ದ ಶಂಕರ್ ಅವರಿಗೆ ಒಂದು ವಾರದ ಹಿಂದೆ ಕೊವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಬಳಿಕ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಂಕರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸುರೇಶ್ ಕುಮಾರ್ ಆಪ್ತ ಸಹಾಯಕ ನಿಧನ
ಹೌದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರ ಆಪ್ತ ಕಾರ್ಯದರ್ಶಿ ಹೆಜ್.ಜೆ. ರಮೇಶ್ (53) ಕೊರೋನಾ ಸೋಂಕಿಗೆ ಬಲಿಯಾಗಿದ್ದರು. ಮಡಿವಾಳದ ಸಮೀಪದ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೆ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ರಮೇಶ್ ಸಾವಿಗೀಡಾಗಿದ್ದನ್ನು ಇಲ್ಲಿ ಸ್ಮರಿಸಬಹುದು.