ತೇಜಸ್ವಿ ಯುವ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ?

By Suvarna NewsFirst Published Jan 6, 2020, 8:35 AM IST
Highlights

ರಾಷ್ಟ್ರೀಯ ಪ್ರ. ಕಾರ‍್ಯದರ್ಶಿ?| ರಾಷ್ಟ್ರ ರಾಜಕಾರಣಕ್ಕೆ ಬಳಸಿಕೊಳ್ಳಲು ಬಿಜೆಪಿಯಲ್ಲಿ ಚರ್ಚೆ| ರಾಜ್ಯ ಯುವಮೋರ್ಚಾ ಅಧ್ಯಕ್ಷರಾಗಲು ತೇಜಸ್ವಿ ಹಿಂದೇಟು

ಬೆಂಗಳೂರು[ಜ.06]: ಉತ್ತಮ ವಾಕ್ಚಾತುರ್ಯ ರೂಢಿಸಿಕೊಂಡಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಸಂಸದ ತೇಜಸ್ವಿ ಸೂರ್ಯ ಅವರನ್ನು ರಾಷ್ಟ್ರ ರಾಜಕಾರಣದಲ್ಲಿ ಬಳಸಿಕೊಳ್ಳುವ ಬಗ್ಗೆ ಚರ್ಚೆ ನಡೆದಿದ್ದು, ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾದಲ್ಲಿ ಪ್ರಮುಖ ಸ್ಥಾನ ಲಭಿಸುವ ಸಾಧ್ಯತೆಯಿದೆ.

ಈ ಬಗ್ಗೆ ಪಕ್ಷದ ಪಾಳೆಯದಲ್ಲಿ ಗಂಭೀರ ಚಿಂತನೆ ನಡೆದಿದ್ದು, ರಾಷ್ಟ್ರೀಯ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವ ಬಗ್ಗೆ ಪ್ರಯತ್ನ ನಡೆಯುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಎದೆ ಬಗೆದರೆ ಎರಡಕ್ಷರ ಇಲ್ಲದವರಿಂದ ಪ್ರತಿಭಟನೆ : ಪೌರತ್ವದ ಕಿಚ್ಚಿಗೆ ತೇಜಸ್ವಿ ತುಪ್ಪ!

ತೇಜಸ್ವಿ ಸೂರ್ಯ ಅವರಿಗೆ ರಾಜ್ಯ ಯುವ ಮೋರ್ಚಾದ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆಯೂ ಪ್ರಸ್ತಾಪವಾಗಿದೆ. ಆದರೆ, ಇದಕ್ಕೆ ಸ್ವತಃ ತೇಜಸ್ವಿ ಸೂರ್ಯ ಅವರೇ ಹಿಂದೇಟು ಹಾಕಿದ್ದು, ಸದ್ಯಕ್ಕೆ ರಾಜ್ಯ ಘಟಕದಲ್ಲಿ ಯಾವುದೇ ಸ್ಥಾನಮಾನ ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ, ರಾಷ್ಟ್ರೀಯ ಘಟಕದಲ್ಲಿ ಸ್ಥಾನಮಾನ ಕಲ್ಪಿಸುವ ಬಗ್ಗೆ ಪರಿಶೀಲನೆ ನಡೆದಿದೆ ಎಂದು ತಿಳಿದು ಬಂದಿದೆ.

click me!