
ಬೆಂಗಳೂರು (ಜು.23) ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ನೀಡಿರುವ ಬೇಸರದ ಹೇಳಿಕೆÜಯನ್ನೇ ಬಿಜೆಪಿ ಮುಖಂಡರು ಅಸ್ತ್ರವನ್ನಾಗಿ ಬಳಸಿಕೊಂಡು ಟೀಕಾ ಪ್ರಹಾರ ನಡೆಸಿದ್ದಾರೆ.
ವಿಧಾನಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ, ಬಿ.ಕೆ.ಹರಿಪ್ರಸಾದ್(BK Hariprasad) ಅವರು ಕಾಂಗ್ರೆಸ್‌ನ ಹಿರಿಯ ನಾಯಕರು ಮತ್ತು ಬದ್ಧತೆಯುಳ್ಳ ನಾಯಕ. ದೇವಾಲಯ ಕಟ್ಟಡಕ್ಕೆ ಹಣ ಕೇಳಿದ್ದರೂ ಹಣ ಕೊಡಲಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದು ಅನೇಕರಿಗೆಇಷ್ಟವಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar) ಅವರಿಗೂ ಸಹ ಇಷ್ಟವಿಲ್ಲ. ಕಾಂಗ್ರೆಸ್‌ನಲ್ಲಿನ ಬೆಳವಣಿಗೆಗಳನ್ನು ಗಮನಿಸಿದರೆ ಸಿದ್ದರಾಮಯ್ಯ(Siddaramaiah) ಎಷ್ಟುದಿನ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಪ್ರಶ್ನೆ ನಮ್ಮ ಮುಂದಿದೆ ಎಂದು ಹೇಳಿದರು.
ಸಿದ್ದರಾಮಯ್ಯ ದಲಿತ ಪ್ರೀತಿ ಎನ್ನುತ್ತಾರೆ. ಅವರಿಗೆ ನಿಜವಾಗಿಯೂ ದಲಿತರ ಮೇಲೆ ಪ್ರೀತಿ, ಪ್ರೇಮ ಇದ್ದರೆ ಗೃಹ ಸಚಿವ ಪರಮೇಶ್ವರ್ ಅಥವಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೊಡಲಿ. ಸಿದ್ದರಾಮಯ್ಯ ಒಬ್ಬ ಬಡವರ ವಿರೋಧಿ. ಬಡವರ ಬದುಕು ಪುಟ್ಪಾತ್ ಆಗಿದೆ. ಮನೆ ಯಜಮಾನನಿಗೆ ನಾವು ಬೇರೆ ಬೇರೆ ರೂಪದಲ್ಲಿ ಎರಡು ಸಾವಿರ ರು. ಕೊಡುತ್ತಿದ್ದೆವು. ಆದರೆ, ಇವರು ಮನೆ ಒಡೆಯುವ ಕೆಲಸ ಮಾಡಿದ್ದಾರೆ ಎಂದು ಟೀಕಿಸಿದರು.
ಬಿಕೆ ಹರಿಪ್ರಸಾದ್ ಸಿಡಿಗುಂಡಿಗೆ ಪತರುಗುಟ್ಟಿದ ಕಾಂಗ್ರೆಸ್, ಅಲುಗಾಡಿತಾ ಸಿಎಂ ಸಿದ್ದು ಕುರ್ಚಿ?
ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ(Dr CN ashwath narayana) ಮಾತನಾಡಿ, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರೇ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಬೇಕು. ಅವರು ನಿಜವಾಗಿಯೂ ಮುಖ್ಯಮಂತ್ರಿಗಳನ್ನು ಕಿತ್ತೆಸೆಯುವ ಕೆಲಸ ಮಾಡಿದರೆ ಒಳ್ಳೆಯದು. ಈ ಭ್ರಷ್ಟಸರ್ಕಾರವನ್ನು ಕಿತ್ತೊಗೆಯುವ ಕೆಲಸವಾಗಲಿ ಎಂದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಮಾತನಾಡಿ, ಕಾಂಗ್ರೆಸ್‌ನ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆಯು ಒಂದು ತಿರುವು ಕೊಡಲಿದೆ. ಸಿದ್ದರಾಮಯ್ಯ ಬಜೆಟ್‌ನಲ್ಲಿ ಸಣ್ಣ ಸಣ್ಣ ಸಮುದಾಯ, ಹಿಂದುಳಿದ ವರ್ಗಕ್ಕೆ ಅನುದಾನ ನೀಡಿಲ್ಲ ಎಂದು ಸತ್ಯದ ಮಾತನಾಡಿದ್ದಾರೆ. ಅಧಿಕಾರ ಇಲ್ಲದಾಗ ಸಿದ್ದರಾಮಯ್ಯಗೆ ಅಹಿಂದ ಜ್ಞಾಪಕಕ್ಕೆ ಬರುತ್ತದೆ. ಅಧಿಕಾರ ಬಂದಾಗ ತಳ ಸಮುದಾಯ, ಸಣ್ಣ ಸಣ್ಣ ಸಮುದಾಯ , ಅಹಿಂದ ನೆನಪಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ನನಗೆ ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಗೊತ್ತು:ಬಿ.ಕೆ. ಹರಿಪ್ರಸಾದ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ