
ಬೆಂಗಳೂರು(ಏ.14): ಗುತ್ತಿಗೆದಾರ ಸಂತೋಷ್ ಪಾಟೀಲ್(Santosh Patil) ಆತ್ಮಹತ್ಯೆ ಪ್ರಕರಣವು ಬಿಜೆಪಿಗೆ ನುಗ್ಗಲಾರದ ತುತ್ತಾಗಿ ಪರಿಣಮಿಸಿದ್ದು, ಪ್ರಕರಣ ಕುರಿತು ವಾಸ್ತವ ವರದಿಯನ್ನು ನೀಡುವಂತೆ ರಾಜ್ಯ ನಾಯಕತ್ವಕ್ಕೆ ಹೈಕಮಾಂಡ್ ತಾಕೀತು ಮಾಡಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾಮಗಾರಿಯಲ್ಲಿ ಶೇ.40ರಷ್ಟು ಕಮಿಷನ್ ಆರೋಪವು ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳಿಗೆ ಅಸ್ತ್ರವಾಗಿರುವುದು ಬಿಜೆಪಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ. ಕಾಂಗ್ರೆಸ್ ವಿರುದ್ಧ ಶೇ.10ರಷ್ಟು ಕಮಿಷನ್ ಆರೋಪ ಮಾಡಿದ್ದ ಬಿಜೆಪಿ ಇದೀಗ ಶೇ.40ರಷ್ಟು ಕಮಿಷನ್(Commission) ಆರೋಪದ ಸುಳಿಗೆ ಸಿಲುಕಿಕೊಂಡಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಹೈಕಮಾಂಡ್(BJP High Command), ವರದಿ ನೀಡುವಂತೆ ಸೂಚಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ಅವರಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಅವರು ವರದಿ ಕೇಳಿದ್ದಾರೆ.
ಬೊಮ್ಮಾಯಿ ಸರ್ಕಾರಕ್ಕೆ ಸೂಸೈಡ್ ಇಕ್ಕಟ್ಟು: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ
ಚುನಾವಣೆಗೆ ಸಿದ್ಧತೆ ಕೈಗೊಂಡಿರುವ ರಾಜ್ಯ ಬಿಜೆಪಿ ಈಗಾಗಲೇ ಮೂರು ತಂಡಗಳಾಗಿ ಪ್ರವಾಸ ಕೈಗೊಂಡಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಳಗಾವಿಯಲ್ಲಿದ್ದು, ಅಲ್ಲಿಂದಲೇ ಪ್ರಾಥಮಿಕ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಮತ್ತು ಇತರರ ಮೂಲಕ ಪ್ರಕರಣದ ಕುರಿತು ಪ್ರಾಥಮಿಕ ಹಂತದ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ(KS Eshwarappa) ಅವರಿಂದಲೂ ಪ್ರತ್ಯೇಕ ಮಾಹಿತಿ ಪಡೆದುಕೊಂಡಿದ್ದಾರೆ. ಎಲ್ಲವನ್ನೂ ಪಕ್ಷದ ಹೈಕಮಾಂಡ್‌ಗೆ ರವಾನಿಸಿದ್ದಾರೆ.
ರಾಜ್ಯ ಬಿಜೆಪಿ ಉಸ್ತುವಾರಿಯಿಂದ ಮಾಹಿತಿ ಪಡೆದುಕೊಂಡರೂ ಪ್ರತಿಪಕ್ಷಗಳು ಟೀಕಾಪ್ರಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಾಸ್ತವಾಂಶದ ವರದಿಯನ್ನು ನೀಡುವಂತೆ ಹೈಮಾಂಡ್ ನಿರ್ದೇಶನ ನೀಡಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತನಾಗಿರುವುದರಿಂದ ಪ್ರಕರಣ ಮತ್ತಷ್ಟುಗಂಭೀರತೆ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಸಮಗ್ರ ವರದಿಗೆ ಸೂಚಿಸಿದೆ ಎಂದು ಹೇಳಲಾಗಿದೆ.
ಡಿವೈಎಸ್ಪಿ ಗಣಪತಿ ಪ್ರಕರಣಕ್ಕೂ ಈ ಕೇಸ್‌ಗೂ ವ್ಯತ್ಯಾಸ ಇದೆ: ಅಶೋಕ್
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸತ್ಯ ಹೊರಬರಲಿದೆ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ(Suicide) ಪ್ರಕರಣಕ್ಕೂ ಈ ಪ್ರಕರಣಕ್ಕೂ ಸಾಕಷ್ಟುವ್ಯತ್ಯಾಸವಿದೆ. ಆದರೆ ಕಾಗ್ರೆಸ್ ನಾಯಕರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಈಶ್ವರಪ್ಪರನ್ನ ಸಂಪುಟದಿಂದ ವಜಾಗೊಳಿಸಿ, ಒಳಗೆ ಹಾಕಿ: ಪ್ರಿಯಾಂಕ್ ಖರ್ಗೆ ಆಗ್ರಹ
ಕಮೀಷನ್ ಆರೋಪ ಸಂಬಂಧ ಸಚಿವ ಕೆ.ಎಸ್.ಈಶ್ವರಪ್ಪ ಅವರು ಈಗಾಗಲೇ ಸಂತೋಷ್ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ತನಿಖೆ ನಡೆದು ಸತ್ಯಾಂಶ ಹೊರಬರುವವರೆಗೂ ಕಾಂಗ್ರೆಸ್‌ನವರು ಕಾಯಬೇಕು. ಡಿವೈಎಸ್ಪಿಯಾಗಿದ್ದ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಿಡಿಯೋ ಮಾಡಿ ಅಂದು ಸಚಿವರಾಗಿದ್ದ ಕಾಂಗ್ರೆಸ್‌ನ ಕೆ.ಜೆ.ಜಾಜ್‌ರ್ ವಿರುದ್ಧ ಆರೋಪ ಮಾಡಿದ್ದರು. ಆದರೂ ಜಾಜ್‌ರ್ ತಕ್ಷಣ ರಾಜೀನಾಮೆ ನೀಡಿರಲಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ತರಾಟೆಗೆ ತೆಗೆದುಕೊಂಡಿದ್ದರಿಂದ ಜಾಜ್‌ರ್ ರಾಜೀನಾಮೆ ನೀಡಬೇಕಾಯಿತು. ಎರಡೂ ಪ್ರಕರಣಕ್ಕೂ ವ್ಯತ್ಯಾಸವಿದೆ ಎಂದರು.
ವಿಧಿ ವಿಜ್ಞಾನ ಪ್ರಯೋಗಾಲಯ(FSL) ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ ನಂತರ ಪೊಲೀಸರು(Police) ಕೊಠಡಿ ಒಳಗೆ ತೆರಳಬೇಕಿದೆ. ಸಂತೋಷ್ ಜತೆ ಸ್ನೇಹಿತರೂ ಇದ್ದರು ಎಂಬ ಮಾಹಿತಿ ಲಭಿಸಿದೆ. ಹಾಗಾಗಿ ಅವರನ್ನೂ ವಿಚಾರಣೆ ನಡೆಸಿದ ನಂತರವಷ್ಟೇ ಸ್ಪಷ್ಟಚಿತ್ರಣ ಸಿಗಲಿದೆ. ಸಂತೋಷ್ ಆತ್ಮಹತ್ಯೆಗೂ ಮುನ್ನ ಕೆಲವರಿಗೆ ಪತ್ರವನ್ನು ವಾಟ್ಸ್‌ಆ್ಯಪ್ ಮಾಡಿದ್ದಾರೆ ಎಂದು ತಿಳಿದುಬಂದಿದ್ದು, ಇದೆಲ್ಲವನ್ನೂ ಪರಿಶೀಲಿಸಬೇಕಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ