ಬಸ್ ಪ್ರಯಾಣ ದರ ಏರಿಕೆ ವಿರುದ್ಧ ಬಿಜೆಪಿ ಗಾಂಧಿಗಿರಿ

Published : Jan 04, 2025, 06:11 AM IST
ಬಸ್ ಪ್ರಯಾಣ ದರ ಏರಿಕೆ ವಿರುದ್ಧ ಬಿಜೆಪಿ ಗಾಂಧಿಗಿರಿ

ಸಾರಾಂಶ

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ರವಿಕುಮಾರ್ ಸೇರಿ ಹಲವು ನಾಯಕರು, ಕಾರ್ಯಕರ್ತರು ಭಾಗವಹಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಬೆಂಗಳೂರು(ಜ.04): ಹೊಸ ವರ್ಷದ ಆರಂಭದಲ್ಲೇ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ 'ಗಾಂಧಿಗಿರಿ' ನಡೆಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಶುಕ್ರವಾರ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮುಖವಾಡ ಧರಿಸಿ, ಗುಲಾಬಿ ಹೂವು ನೀಡಿ ಜನರಲ್ಲಿ ಕ್ಷಮೆ ಕೇಳುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಈ ಮೂಲಕ ಬಸ್ ಟಿಕೆಟ್ ದರ ಏರಿಕೆ ಖಂಡಿಸಿದರು. 

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ರವಿಕುಮಾರ್ ಸೇರಿ ಹಲವು ನಾಯಕರು, ಕಾರ್ಯಕರ್ತರು ಭಾಗವಹಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಬಡವನ ಬೆನ್ನ ಮೇಲೆ ಸರ್ಕಾರದ ಅಂಬಾರಿ, ರಾಜ್ಯದಲ್ಲಿ ಖಾಸಗಿ ಬಸ್‌ಗಿಂತ ಕೆಎಸ್‌ಆರ್‌ಟಿಸಿಯೇ ದುಬಾರಿ!

ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿ ಇತರರು ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕರ ಬಳಿ ಹೋಗಿ 'ಕಾಂಗ್ರೆಸ್ ಸರ್ಕಾರ ಬೆಲೆ ಹೆಚ್ಚಳ ಮಾಡುವುದಿಲ್ಲ ಎಂದು ಮತ ನೀಡಿದ್ದೀರಿ. ಆದರೆ, ಮಾತಿಗೆ ತಪ್ಪಿದ ಸರ್ಕಾರ ಹೊಸ ವರ್ಷಕ್ಕೆ ಟಿಕೆಟ್ ದರ ಹೆಚ್ಚಳ ಮಾಡಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಕ್ಷಮೆ ಕೇಳುತ್ತಿದ್ದೇವೆ' ಎಂದು ಹೇಳಿ ಗುಲಾಬಿ ಹೂವು ನೀಡಿದರು. 

ಮಾತನಾಡಿದ ಆ‌ರ್.ಅಶೋಕ್, ರಾಜ್ಯದ ಏಳು ಕೋಟಿ ಜನ ಹೊಸ ವರ್ಷದ ಉಡುಗೊರೆಗಾಗಿ ಕಾಯುತ್ತಿದ್ದರು. ಪ್ರಧಾನಿ ಮೋದಿ ಅವರು ಹೊಸ ವರ್ಷಕ್ಕೆ ರೈತರಿಗೆ ಯೋಜನೆಗಳನ್ನು ನೀಡುವ ಮೂಲಕ ನಿಜವಾದ ಕೊಡುಗೆ ಕೊಟ್ಟಿದ್ದಾರೆ. ಆದರೆ, ದಿ ಗ್ರೇಟ್ 14 ಬಜೆಟ್ ಚಾಂಪಿಯನ್ ಸಿದ್ದರಾಮಯ್ಯ ಬಸ್ ದರ ಏರಿಕೆಯ ಉಡುಗೊರೆ ನೀಡಿದ್ದಾರೆ ಎಂದು ವ್ಯಂಗ್ಯವಾಡಿದರು. 

ಹೊಸ ವರ್ಷದ ಉಡುಗೊರೆ: 

ಬಳಿಕ ಸುದ್ದಿಗಾರರ ಜತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತಿದಿನ ಒಂದಲ್ಲ ಒಂದು ರೀತಿಯಲ್ಲಿ ತೆರಿಗೆ ಹೆಚ್ಚಳ ಮಾಡುತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಶೂನ್ಯ ಸಾಧನೆ ಮಾಡಿದೆ ಎಂದು ಕಿಡಿಕಾರಿದರು. ಬಸ್‌ಗಳ ಟಿಕೆಟ್ ದರ ಮಾತ್ರವಲ್ಲದೆ, ಮುಂದಿನ ದಿನದಲ್ಲಿ ಹಾಲಿನ ದರ, ನೀರಿನ ದರವನ್ನೂ ಹೆಚ್ಚಳ ಮಾಡಲಾಗುತ್ತದೆ. ಎಲ್ಲಾ ವಸ್ತುಗಳ ಬೆಲೆಯನ್ನು ಗಗನಕ್ಕೆ ಮುಟ್ಟಿಸುವ ಶಪಥ ಮಾಡಲಾಗಿದೆ. ಸಿದ್ದರಾಮಯ್ಯ ಪರವಾಗಿ ಜನರಿಗೆ ತಿಳಿಸಿದ್ದೇನೆ. ಪ್ರಯಾಣಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಪತ್ನಿಗೆ ಉಚಿತ ಟಿಕೆಟ್ ನೀಡಿ ಪತಿಗೆ ಎರಡುಪಟ್ಟು ಮಾಡಿದರೆ ಜನರ ಹಣವೇ ಖರ್ಚಾಗುತ್ತದೆ. 2025ರಲ್ಲಿ ಎಲ್ಲ ತೆರಿಗೆ ಜಾಸ್ತಿ ಮಾಡುತ್ತೇವೆ. ನಿಮ್ಮ ಕಾಲಿಗೆ ಬೀಳುತ್ತೇವೆ. ಕೈ ಮುಗಿಯುತ್ತೇವೆ ಕ್ಷಮಿಸಿ ಬಿಡಿ ಎಂಬುದು ಸಿದ್ದರಾಮಯ್ಯ ಹೊಸ ಶ್ಲೋಗನ್ ಎಂದು ಲೇವಡಿ ಮಾಡಿದರು.

ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಹೆಣ್ಮಕ್ಕಳಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಿ, ಪುರುಷರಿಗೆ ಬರೆ ಹಾಕುವ ಸರ್ಕಾರ ಇದು. ಗ್ಯಾರಂಟಿ ಕಾರಣಗಳಿಂದ ಜನ ದುಬಾರಿ ಬೆಲೆ ತೆರಬೇಕಾಗಿದೆ. ಹಾಲಿನ ದರ, ವಿದ್ಯುತ್ ದರ ಸ್ಟ್ಯಾಂಪ್ ಡ್ಯೂಟಿ, ರಿಜಿಸ್ಟ್ರೇಶನ್ ಹೆಚ್ಚಳ ಮಾಡಲಾಗಿದೆ. ಸ್ನಾ ಶುಲ್ಕ ಮಾತ್ರವಲ್ಲದೆ ವಿವಿಧ ತೆರಿಗೆಗಳನ್ನೂ ಹೆಚ್ಚಿಸಲಾಗಿದೆ ಎಂದು ಟೀಕಿಸಿದರು.

ಮುಟ್ಟಿದರೆ ಹುಷಾರ್: ಪೊಲೀಸರ ವಿರುದ್ಧ ಅಶೋಕ್ ಗರಂ 

ಯಾರಾದರೂ ಮುಟ್ಟಿದರೆ ಹುಷಾರ್, ಕೋಟ್ ್ರನಲ್ಲಿ ನಿಲ್ಲಿಸಿ ಜೈಲಿಗೆ ಕಳುಹಿಸಬೇಕಾಗುತ್ತದೆ' ಎಂದು ಪ್ರತಿಪಕ್ಷ ನಾಯಕ ಅಶೋಕ್ ಪೊಲೀಸರಿಗೆ ಆವಾಜ್ ಹಾಕಿದ ಪ್ರಸಂಗ ಈ ವೇಳೆ ನಡೆಯಿತು. 

ಬಸ್ ಪ್ರಯಾಣ ದರ ಹೆಚ್ಚಳ ವಿರೋಧಿಸಿ ಮೆಜೆಸ್ಟಿಕ್‌ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಪ್ರಯಾಣಿಕರಿಗೆ ಹೂವು ನೀಡಲು ಮುಂದಾದಾಗ ಪೊಲೀಸರು ತಡೆಯುವ ಪ್ರಯತ್ನ ಮಾಡಿದರು. ಈ ವೇಳೆ ಪೊಲೀಸರ ವಿರುದ್ಧ ಗರಂ ಆದ ಆಶೋಕ್‌, 'ನೀವು ನನ್ನ ಮುಟ್ಟಿದರೆ ನೋಡಿ. ಇಲ್ಲಿ ಯಾರಿಗೂ ತೊಂದರೆ ಕೊಡುತ್ತಿಲ್ಲ. ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು. ಆದರೆ ಇಲ್ಲಿ ನಾವು ಪ್ರತಿಭಟನೆ ಮಾಡ ತ್ತಿಲ್ಲ. ಬದಲಿಗೆ ಜನರಿಗೆ ಹೂವು ನೀಡುತ್ತಿದ್ದೇವೆ. ಅದಕ್ಕೂ ಅಡ್ಡಿಪಡಿಸಿದರೆ ಹುಷಾರ್.. ನಿಮ್ಮ ವಿರುದ್ಧ ಕೇಸ್‌ ಹಾಕಿ ಕೋರ್ಟ್‌ನಲ್ಲಿ ನಿಲ್ಲಿಸುತ್ತೇನೆ' ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಜ.5ರಿಂದ ಹೊಸ ದರ ಅನ್ವಯ; ಮೈಸೂರು, ಬಳ್ಳಾರಿ, ಶಿವಮೊಗ್ಗಕ್ಕೆ ಪರಿಷ್ಕೃತ ದರ ಇಲ್ಲಿದೆ ನೋಡಿ!

'ಹೂವು ನೀಡಬಾರದು ಎಂಬುದನ್ನು ಬರವಣಿಗೆ ರೂಪದಲ್ಲಿ ಕೊಡಿ.ನೀವೇನು ಇಲ್ಲಿಯೇ ಇರುವುದಿಲ್ಲ. ನಾವು ಅಧಿಕಾರಕ್ಕೆ ಬಂದರೆ ಸುಮ್ಮನೆ ಬಿಡುವುದಿಲ್ಲ. ನಮಗೂ ರಾಜಕಾರಣ ಮಾಡಲು ಬರುತ್ತದೆ. ಪ್ರತಿ ಭಟನೆ ನಡೆಸುವುದು ನಮ್ಮ ಹಕ್ಕು. ನಾವು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದೇವೆ. ಈಗ ಯಾವ ನಿರ್ದೇಶನದ ಮೇರೆಗೆ ಅಡ್ಡಿಪಡಿ ಸುತ್ತಿದ್ದೀರಿ' ಎಂದು ತರಾಟೆಗೆ ತೆಗೆದುಕೊಂಡರು.

ಅಶೋಕ್ ಅವಧಿಯಲ್ಲಿ ಶೇ.48 ದರ ಹೆಚ್ಚಳ: ರಾಮಲಿಂಗಾರೆಡ್ಡಿ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.12ರಷ್ಟು ಬಸ್ ಪ್ರಯಾಣ ದರ ಹೆಚ್ಚಿಸಿದ್ದರು. ಅಲ್ಲದೆ, 2008-2013ರವರೆಗೆ ಅಶೋಕ್ ಸಾರಿಗೆ ಸಚಿವರಾಗಿದ್ದಾಗ ಶೇ.47.8ರಷ್ಟು ಪ್ರಯಾ ಣ ದರ ಹೆಚ್ಚಳ ಮಾಡಲಾಗಿತ್ತು. ಆಗ ಪ್ರಯಾಣ ದರ ಏರಿಕೆ ಮಾಡಿದ್ದೇಕೆ?' ಎಂಬುದನ್ನು ಸ್ಪಷ್ಟಪಡಿಸಿ ನಂತರ ಬಿಜೆಪಿಯವರು ಈಗ ನಮ್ಮ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದರು. 
ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಿಸುವ ಸಚಿವ ಸಂಪುಟದ ನಿರ್ಧಾರವಿರುದದ ಬಿಜೆಪಿನಾಯಕರ ಪ್ರತಿಭಟನೆಗೆ ತಿರುಗೇಟು ನೀಡಿದ ರಾಮಲಿಂ ಗಾರೆಡ್ಡಿ, ಬಸ್ ಪ್ರಯಾಣ ದರ ಹೆಚ್ಚಳದ ಅನಿವಾರೈತೆ ಹಾಗೂ ನಿಗಮಗಳ ಆರ್ಥಿಕ ಪರಿಸ್ಥಿತಿ ವಿವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್