ಕೇಂದ್ರದ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಿ: ಸರ್ಕಾರಕ್ಕೆ ಸವಾಲು ಹಾಕಿದ ಆರ್.ಅಶೋಕ್

Published : Feb 03, 2024, 02:58 PM IST
ಕೇಂದ್ರದ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಿ: ಸರ್ಕಾರಕ್ಕೆ ಸವಾಲು ಹಾಕಿದ ಆರ್.ಅಶೋಕ್

ಸಾರಾಂಶ

ಕೇಂದ್ರದಲ್ಲಿ ಮನಮೋಹನ್ ಸಿಂಗ್ ಹಾಗೂ ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಾಗ ರಾಜ್ಯಕ್ಕೆ ಬಿಡುಗಡೆ ಮಾಡಿದ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಸವಾಲು ಹಾಕಿದ್ದಾರೆ.

ಬೆಂಗಳೂರು (ಫೆ.03): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕೇಂದ್ರ ಸರ್ಕಾರದಿಂದ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಹಾಗೂ ನರೇಂದ್ರ ಮೋದಿ ಅವರಿರುವಾಗ ರಾಜ್ಯಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಎಂಬುದರ ಬಗ್ಗೆ ಶ್ವೇತ ಪತ್ರವನ್ನು ಹೊರಡಿಸಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಅವರು ಸವಾಲು ಹಾಕಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಶನಿವಾರ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಒಂದು ವೈಟ್ ಪೇರ್ ಬಿಡುಗಡೆ ಮಾಡಿ. ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದಾಗ ಎಷ್ಟು ಬಿಡುಗಡೆ ಮಾಡಿದ್ದರು ಅಂತ. ಅದರ ಬಗ್ಗೆ ನಮಗೆ ಟೋಟಲ್ ಎಷ್ಟು ಬಿಡುಗಡೆ ಮಾಡಿದ್ದರು ಅಂತ ಹೇಳಿ. ಅವರು ಎಷ್ಟು ಬಿಡುಗಡೆ ಮಾಡಿದ್ರು ಮೋದಿ ಎಷ್ಟು ಬಿಡುಗಡೆ ಮಾಡಿದ್ದರು ಎಲ್ಲರಿಗೂ ಗೊತ್ತಾಗಲಿ. ಒಟ್ಟು ಎಷ್ಟು ಹಣ ಬಂದಿದೆ ಎಂದು ವೈಟ್ ಪೇಪರ್ ಬಿಡುಗಡೆ ಮಾಡಿ. ಜನರು ತೀರ್ಮಾನ ಮಾಡಲಿ. ಕರ್ನಾಟಕದಿಂದ ಜಾಸ್ತಿ ಟ್ಯಾಕ್ಸಿ ಕಟ್ಟುತ್ತಿದ್ದೇವೆ ಒಪ್ಪುತ್ತೇವೆ. ಇನ್ನು ಮಹಾರಾಷ್ಟ್ರ ಅತಿ ಹೆಚ್ಚು ಟ್ಯಾಕ್ಸ್ ಕಟ್ಟುತ್ತಿದೆ ಅಲ್ಲವೇ, ಅವರಿಗೆ ಎಷ್ಟು ಕೊಟ್ಟಿದ್ದಾರೆ? ದೆಹಲಿಗೆ ಎಷ್ಟು ಕೊಟ್ಟಿದ್ದಾರೆ? ಎಂಬುದು ಎಲ್ಲರಿಗೂ ತಿಳಿಯಲಿ ಎಂದು ಸವಾಲು ಹಾಕಿದರು.

ನೀವು ಅನುದಾನದ ವಿಚಾರವಾಗಿ ದೇಶಕ್ಕೆ ಹೋಗಬೇಡಿ, ಇಲ್ಲಿ ನಮ್ಮ ರಾಜ್ಯದ ವಿಷಯವನ್ನೇ ಹೇಳಿ. ಬೆಂಗಳೂರು ಒಂದರಿಂದಲ್ಲೇ ಶೇ. 65 ಟ್ಯಾಕ್ಸ್ ಕಟ್ಟುತ್ತಿದ್ದಾರೆ. ಹಾಗಿದ್ರೆ ಬೆಂಗಳೂರಿಗೆ ಎಷ್ಟು ಕೊಟ್ಟಿರೋದು? ಉಳಿದ ಕರ್ನಾಟಕದ ಜಿಲ್ಲೆಗಳಿಗೆ ಎಷ್ಟು ಅನುದಾನ ಕೊಟ್ಟಿದ್ದೀರಿ.? ಅನುದಾನ ತಾರತಮ್ಯಕ್ಕಾಗಿ ಕರ್ನಾಟಕದಲ್ಲಿ ಕೊಡಗು ಪ್ರತ್ಯೇಕ ರಾಜ್ಯವಾಗಬೇಕು ಅಂತ ಕೂಗಿತ್ತು. ಕರ್ನಾಟಕಕ್ಕೆ ನಾವು ನೀರು ಕೊಡ್ತಿವಿ, ನಾವು ಕಾಫಿ ಬೆಳೆಯುತ್ತೇವೆ. ನಾವು ಹೆಚ್ಚಿಗೆ ಟ್ಯಾಕ್ಸ್ ಕಟ್ಟೋದು ಎಂದು ಹೇಳುತ್ತಿದ್ದರು. ಆಗ ಸಿದ್ದರಾಮಯ್ಯ ಅವರೇ ಟ್ಯಾಕ್ಸ್ ಮೇಲೆ ರಾಜ್ಯ ಇಬ್ಬಾಗ ಮಾಡೋದಕ್ಕೆ ಆಗೊಲ್ಲಾ ಅಂತ ಹೇಳಿದ್ದರು. ಈಗ ತಮ್ಮ ಪಕ್ಷದವರೇ ಟ್ಯಾಕ್ಸ್ ಹಾಗೂ ಅನುದಾನದ ಆಧಾರದಲ್ಲಿ ದೇಶ ಇಬ್ಭಾಗ ಮಾಡಲು ಮುಂದಾಗಿರುವುದು ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯಗೆ ಕುಂಕುಮ ಹಚ್ಚಿದ್ರೆ ಅಳಿಸಿಕೊಳ್ತಾರೆ, ಮುಸ್ಲಿಮರಿಂದ ತಾವೇ ಟೋಪಿ ಹಾಕಿಸ್ಕೋತಾರೆ: ಆರ್.ಅಶೋಕ್

ರಾಜ್ಯಕ್ಕೆ ಬೆಂಗಳೂರಿನಿಂದ ಶೇ.65 ಟ್ಯಾಕ್ಸ್ ಬರುತ್ತದೆ. ಆದರೆ. ಸರ್ಕಾರದಿಂದ ಬೆಂಗಳೂರಿಗೆ ಶೇ.5 ಪರ್ಸೆಂಟ್ ಅನುದಾನವನ್ನೂ ಕೊಟ್ಟಿಲ್ಲ. ಯಾವ ಜಿಲ್ಲೆಯಿಂದ ಎಷ್ಟು ಬರುತ್ತದೆಯೋ, ಅಷ್ಟು ಅನುದಾನ ಕೊಡಲು ಸಾಧ್ಯನಾ.? ಎಲ್ಲಿ ಜನ ಕಷ್ಟದಲ್ಲಿದ್ದಾರೆ ಅಂತವರಿಗೆ ಸಹಾಯ ಮಾಡಬೇಕಂತಾ ಸಂವಿಧಾನದಲ್ಲಿ ಹೇಳಿದ್ದಾರೆ. ಅಭಿವೃದ್ಧಿ ಆಗದ ಕಡೆ, ಜನ ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಬೇಕು ಎಂದು ಸಂವಿಧಾನ ಹೇಳುತ್ತದೆ. ಮಕ್ಕಳು ಎಷ್ಟು ಸಂಪಾದನೆ ಮಾಡ್ತಾರೆ, ಎಂಬುದರ ಮೇಲೆ ತಾಯಿ ಊಟ ನೀಡಲ್ಲ. ಕಾಮನ್ ಸೆನ್ಸ್ ಬೇಕು ರೀ ಸಿದ್ದರಾಮಯ್ಯ.. ತೆರಿಗೆ ವಿಚಾರದಲ್ಲಿ ರಾಜ್ಯದ ಹೋಲಿಕೆ ಮಾಡಬಾರದು. ನೀವು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗ ರಾಜ್ಯಕ್ಕೆ ಎಷ್ಟು  ಅನುದಾನ ನೀಡಿದ್ರಿ? ಎಂದು ಕಿಡಿ ಕಾರಿದರು.

ಕೇಂದ್ರ ಸರ್ಕಾರದಿಂದ ಯಾವುದೇ ತಾರತಮ್ಯ ಆಗಿಲ್ಲ. ಕರ್ನಾಟಕಕ್ಕೆ ಬರಬೇಕಾದ ಎಲ್ಲಾ ಹಣ ರಾಜ್ಯಕ್ಕೆ ಬಂದಿದೆ. ಕರ್ನಾಟಕ ರಾಜ್ಯಕ್ಕೆ ಯಾವುದೇ ಬ್ಯಾಲೇನ್ಸ್ ಇಲ್ಲ ಎಂದು ನಿರ್ಮಾಲ ಸೀರಾಮನ್ ಹೇಳಿದ್ದಾರೆ. ಹಾಗೇನಾದರೂ ಬ್ಯಾಲೆನ್ಸ್ ತಾರತಮ್ಯ ಇದೆ, ಅನ್ನೋದಾಗಿದ್ರೆ ಖರ್ಗೆಯವರು ಹೇಳಬಹುದಾಗಿತ್ತು ಅಲ್ವಾ? ಡಿ.ಕೆ. ಸುರೇಶ್ ಗಿಂತ ಖರ್ಗೆ ಬುದ್ದಿವಂತರು ತಾನೇ. ಜೈರಾಮ್ ರಮೇಶ್ ಸಹ ಇದ್ದರು ಅಲ್ವಾ? ಅವರ್ಯಾರು ಯಾಕೆ ಮಾತನಾಡಿಲ್ಲ ಎಂದು ಹೇಳಿದರು.

'ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು'; ದೇವೇಗೌಡರ ಹೇಳಿಕೆಗೆ ಸಿಟಿ ರವಿ ಪ್ರತಿಕ್ರಿಯೆ ಏನು?

ಇನ್ನು ಕರ್ನಾಟಕಕ್ಕೆ ಬಜೆಟ್ ನಲ್ಲಿ ಏನಾದರೂ ಅನ್ಯಾಯವಾಗಿದೆ ಅಂದ್ರೆ ಅದಕ್ಕೆ ಒಂದು ವೇದಿಕೆ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ವೇದಿಕೆ ಕೊಟ್ಟಿದ್ದಾರೆ ಅಲ್ಲಿ ಮಾತಡಬೇಕು. ಅಲ್ಲಿ ಮಾತನಾಡೋದು ಬಿಟ್ಟು ಬೀದಿಯಲ್ಲಿ ಪ್ರತಿಭಟನೆ ಮಾಡುತ್ತಾರಂತೆ. ಅಲ್ಲಿ ಸೈಲೆಂಟ್ ಹೊರಗಡೆ ವೈಲೆಂಟ್, ಇದೇನಿದು ಕಾಂಗ್ರೆಸ್‌ ನಡೆ. 9 ವರ್ಷಗಳಿಂದ ಸೈಲೆಂಟ್ ಆಗಿದ್ದು, ಈಗ ಚುನಾವಣೆ ಬಂದಿದೆ ಅಂತ ನಾಟಕ ಶುರು ಮಾಡಿದ್ದಾರೆ. ಕೇಂದ್ರ ಸರ್ಕಾರದಿಂದ ಯಾವುದೇ ರಾಜ್ಯಕ್ಕೂ ಅನ್ಯಾಯಾವಾಗಿಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ರಾಮನಗರದ ರೇವಣಸಿದ್ದೇಶ್ವರ ಬೆಟ್ಟದಲ್ಲಿ ದುರಂತ - ದೇವರ ದರ್ಶನಕ್ಕೂ ಮುನ್ನವೇ ಕಂದಕ ಸೇರಿದ ಭಕ್ತ!