ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ನಾವಿಲ್ಲ ಉಳಿಯಲು ಸಾಧ್ಯ. ನಾನು ಮುಖ್ಯಮಂತ್ರಿ ಆಗಿದ್ದೇ ಸಂವಿಧಾನದಿಂದ. ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ ಎಂದು ಕೆಲವರಿಗೆ ಹೊಟ್ಟೆಯುರಿ ಇದೆ. ಆದರೆ, ಜನರ ಆಶೀರ್ವಾದ ಇರುವವರೆಗೆ ನನ್ನನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು (ನ.27): ಬಿಜೆಪಿ ಮತ್ತು ಆರೆಸ್ಸೆಸ್‌ನವರು ಸಾಮಾಜಿಕ ನ್ಯಾಯದ ವಿರೋಧಿಗಳು, ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸುವ ಮನುಸ್ಮೃತಿಯ ಪರವಾಗಿರುವವರು. ಹಾಗಾಗಿಯೇ ಅವರು ಸಂವಿಧಾನ ವನು ವಿರೋಧಿಸುವ, ಬದಲಾವಣೆ ಮಾಡುವ ಮಾತು, ಪ್ರಯತ್ನ ನಡೆಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದರು.
ವಿಧಾನಸೌಧ, ಅಂಬೇಡ್ಕರ್ ಭವನ ಹಾಗೂ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪ್ರತ್ಯೇಕವಾಗಿ ನಡೆದ ಸಂವಿಧಾನ ದಿನದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರೆಸ್ಸೆಸ್, ಬಿಜೆಪಿ ವಿರುದ್ಧ ತೀವ್ರ ವಾಕ್ ಪ್ರಹಾರ ನಡೆಸಿದರು.
Breaking: ಮುಡಾ ಕೇಸ್ ಸಿಬಿಐ ತನಿಖೆ ಆಗುತ್ತಾ? ಡಿಸೆಂಬರ್ 10ಕ್ಕೆ ನಿರ್ಧಾರ
ಸಂವಿಧಾನ ಅಂಗೀಕಾರವಾಗುವಾಗ ಅದನ್ನು ಬಿಜೆಪಿಯ ಮಾತೃಸಂಸ್ಥೆ ಆರೆಸ್ಸೆಸ್‌ನ ಅಧ್ಯಕ್ಷರಾಗಿದ್ದ ಗೋಳ್ವಾಲ್ಕರ್, ಹಿಂದೂ ಮಹಾಸಭಾದ ಅಧ್ಯಕ್ಷ ಸಾವರ್ಕರ್ ವಿರೋಧಿಸಿದ್ದರು. ವಾಜಪೇಯಿ ಪ್ರಧಾನಿಯಾಗಿ ದ್ದಾಗ ಸಂವಿಧಾನ ಪುನರ್‌ರಚ ನೆಗೆ ವೆಂಕಟಾಚಲಯ್ಯ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ವಾಗ್ದಾಳಿ ಮಾಡಿದ್ದರು. ಇಷ್ಟೆಲ್ಲ ವೈರುಧ್ಯಗಳು ನಮ್ಮ ನಡುವೆ ಇದೆ. ಸಂವಿಧಾನವನ್ನು ಪ್ರೀತಿಸುವ ವರ ನಡುವೆ ವಿರೋಧಿಸುವವರೂ ನಮ್ಮ ನಡುವೆ ಇದ್ದಾರೆ. ಅವರ ಬಗ್ಗೆ ಎಚ್ಚರದಿಂದಿ ರಬೇಕು ಎಂದರು.
ಇನ್ನು, ಈಗಿನ ಮೋದಿ ಅಧಿಕಾರಕ್ಕೆ ಬಂದರೆ ಅವರ ಹಿಂದಿನ ಸರ್ಕಾರದ ಸಂಪುಟದಲ್ಲಿ ಸಚಿವರಾಗಿದ್ದ ಅನಂತಕುಮಾರ್ ಹೆಗಡೆ ನಾವು ಅಧಿಕಾರಕ್ಕೆ ಬಂದಿದ್ದೇ ಸಂವಿಧಾನ ಬದಲಿಸಲು ಎಂದು ಹೇಳಿದ್ದರು. ಅವರ ವಿರುದ್ಧ ಕ್ರಮ ಕೈಗೊಂಡರಾ? ಅವರನ್ನು ಸಂಪುಟದಿಂದ ಕೈಬಿಟ್ಟರಾ? ಅಂದಮೇಲೆ, ಮೋದಿ ಒಪ್ಪಿಗೆ ಇದ್ದೇ ಅನಂತ್ ಹೆಗಡೆ ಅಂತಹ ಹೇಳಿಕೆ ಕೊಟ್ಟರು ಎಂದಾಯಿತಲ್ಲ, ಪಾರ್ಲಿಮೆಂಟ್ ಪ್ರವೇಶಿಸುವಾಗ ಸಂಸತ್ತಿನ ಮೆಟ್ಟಲಿಗೆ, ಸಂವಿಧಾನಕ್ಕೆ ನಮಸ್ಕಾರ ಮಾಡಿದ ಮೋದಿ ಅವರು ಹೇಳುವುದೇ ಒಂದು ಮಾಡುವುದೇ ಇನ್ನೊಂದು ಎಂದು ಕಿಡಿ ಕಾರಿದರು.
ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ನಾವಿಲ್ಲ ಉಳಿಯಲು ಸಾಧ್ಯ. ನಾನು ಮುಖ್ಯಮಂತ್ರಿ ಆಗಿದ್ದೇ ಸಂವಿಧಾನದಿಂದ. ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ ಎಂದು ಕೆಲವರಿಗೆ ಹೊಟ್ಟೆಯುರಿ ಇದೆ. ಆದರೆ, ಜನರ ಆಶೀರ್ವಾದ ಇರುವವರೆಗೆ ನನ್ನನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಸಂವಿಧಾನ ಜಾರಿಗೂ ಮೊದಲು ಅಲಿಖಿತ ಸಂವಿಧಾನ ಇತ್ತು. ಅಸಮಾನತೆ, ತಾರತಮ್ಯ, ಶೂದ್ರ ರನ್ನು ಕೀಳಾಗಿಕಾಣುವ, ಶಿಕ್ಷಣ, ಸಂಪತ್ತಿನ ಸಮಾನತೆಯೇ ಇಲ್ಲದ ವಿಚಾರಗಳು ಅಂದು ಸಮಾಜದಲ್ಲಿದ್ದವು. ಅದನ್ನು ಮನುಸ್ಮೃತಿ ಎಂದು ನಾವು ಕರೆಯುತ್ತೇವೆ. ಇಂತ ಅಲಿಖಿತ ಸಂವಿಧಾನವನ್ನು ಆರೆಸ್ಸೆಸ್ ನವರು ಪೋಷಣೆ ಮಾಡುತ್ತಿದ್ದರು. ಅಂಬೇಡ್ಕರ್ ಅವರು ಹಿಂದೂ ಕೋಡ್ ತಂದು ಮಹಿಳೆಯರಿಗೆ ಸಮಾನ ಅವಕಾಶ ಕೊಡಲು ಮುಂದಾದಾಗ ಇದರಿಂದ ಪುರುಷರು ಖಿನ್ನತೆಗೆ ಒಳಗಾಗುತ್ತಾರೆ ಎಂದು ಕೆಲವರು ಹೇಳಿದರು. ಇದನ್ನೆಲ್ಲ ನಾವು ಸೂಕ್ಷ್ಮವಾಗಿ ತಿಳಿದುಕೊಳ್ಳಬೇಕು ಎಂದರು
ಪೇಜಾವರಶ್ರೀ ಬಗ್ಗೆ ಸಿಎಂ ಕಿಡಿ
ಬೆಂಗಳೂರು: ಸಂವಿಧಾನ ಬದಲಾವಣೆ ವಿಚಾರವಾಗಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸ್ವಾಮೀಜಿ ಅದನ್ನು ಹೇಳುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಕೊಟ್ಟ ಮಾತಿನಂತೆ, ಅಜೀಮ್ ಪೀರ್ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷ ಸ್ಥಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯವನ್ನು ಒಳ ಗೊಂಡಿರುವಸಂವಿಧಾನವನ್ನುವಿರೋಧಿ ಸುವವರು ಅದರ ಬದಲಾವಣೆಯಾಗಬೇಕೆಂಬ ಮಾತುಗಳನ್ನಾಡಿದ್ದಾರೆ ಎಂದರು. ಪೇಜಾವರ ಶ್ರೀಗಳೂ ಈ ಕುರಿತು ಹೇಳಿಕೆ ನೀಡಿದ್ದಾರಲ್ಲಾ ಎಂಬ ಪ್ರಶ್ನೆಗೆ, ಅವರು ಯಾಕೆ ಹಾಗೆ ಹೇಳಿದರೋ ಗೊತ್ತಿಲ್ಲ. ಆದರೆ, ನಮ್ಮ ಸರ್ಕಾರ ಸಂವಿಧಾನದ ರಕ್ಷಣೆಗೆ ಬದ್ದವಾಗಿದೆ ಎಂದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು ಪೇಜಾವರ ಸ್ವಾಮೀಜಿ ಅವರು ಕೂಡ ಸಂವಿಧಾನ ಬದಲಾವಣೆ ಕುರಿತು ಮಾತನಾಡಿದ್ದಾರೆ. ಅದನ್ನು ಹೇಳುವ ಅವಶ್ಯಕತೆ ಏನಿತ್ತು. ಮನುಸ್ಮೃತಿ ಇರಬೇಕು ಎಂದು ಸ್ವಾಮೀಜಿ ಪ್ರತಿಪಾದಿಸುತ್ತಾರೆ ಎಂದರು.