
ಬೆಂಗಳೂರು : ಆಡಳಿತಾರೂಢ ಮೈತ್ರಿ ಸರ್ಕಾರಕ್ಕೆ ಟಾಂಗ್ ಕೊಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೋಮವಾರದಿಂದ ಎರಡು ದಿನಗಳ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ.
ಮೊದಲ ದಿನ ಸೋಮವಾರದಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಬರ ಸ್ಥಳಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಮೊದಲಿಗೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣೇಶ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಜಿಲ್ಲಾಧಿಕಾರಿ ಮತ್ತು ಇತರೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಬಳಿಕ ಚಿಕ್ಕಬಳ್ಳಾಪುರ ಜಿಲ್ಲೆಯ ಬರ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಅಲ್ಲಿನ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಿದ್ದಾರೆ.
ಮಂಗಳವಾರ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಯಡಿಯೂರಪ್ಪ ಅವರ ಜೊತೆ ವಿಧಾನಪರಿಷತ್ ಸದಸ್ಯ ರವಿಕುಮಾರ್, ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಇತರರು ಸಾಥ್ ನೀಡಲಿದ್ದಾರೆ. ಶನಿವಾರ ದೆಹಲಿಯಿಂದ ಆಗಮಿಸಿದ ಬಳಿಕ ಪಕ್ಷದ ಶಾಸಕರೊಂದಿಗೆ ಚರ್ಚಿಸಿ ಕಾಂಗ್ರೆಸ್‌ಗೆ ತಿರುಗೇಟು ನೀಡಲು ಈ ನಿರ್ಧಾರ ಕೈಗೊಂಡರು ಎಂದು ಮೂಲಗಳು ಹೇಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ