ಬಿಜೆಪಿಯಿಂದ ಸೆಲ್ಫಿ ವಿತ್‌ ತಿರಂಗಾ ಅಭಿಯಾನ!

By Kannadaprabha NewsFirst Published Jan 25, 2020, 10:20 AM IST
Highlights

ಬಿಜೆಪಿಯಿಂದ ಸೆಲ್ಫಿ ವಿತ್‌ ತಿರಂಗಾ| ವರ್ಣ ಧ್ವಜಗಳೊಂದಿಗೆ ತೆಗೆಸಿಕೊಂಡ ಚಿತ್ರಗಳನ್ನು ಮುಖಂಡರು ಹಾಗೂ ಕಾರ್ಯಕರ್ತರು ‘ಸೆಲ್ಪಿ ವಿತ್‌ ತಿರಂಗ’ ಹೆಸರಿನ ಹ್ಯಾಶ್‌ ಟ್ಯಾಗ್‌ನಲ್ಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಟ್ವಿಟರ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಬೇಕು 

ಬೆಂಗಳೂರು[ಜ.25]: ಗಣರಾಜ್ಯೋತ್ಸವದ ಅಂಗವಾಗಿ ರಾಜ್ಯ ಬಿಜೆಪಿ ಘಟಕವು ಸಾಮಾಜಿಕ ಜಾಲತಾಣಗಳಲ್ಲಿ ‘ಸೆಲ್ಫಿ ವಿತ್‌ ತಿರಂಗಾ’ ಅಭಿಯಾನ ಆಯೋಜಿಸಿದೆ. ತ್ರಿವರ್ಣ ಧ್ವಜಗಳೊಂದಿಗೆ ತೆಗೆಸಿಕೊಂಡ ಚಿತ್ರಗಳನ್ನು ಮುಖಂಡರು ಹಾಗೂ ಕಾರ್ಯಕರ್ತರು ‘ಸೆಲ್ಪಿ ವಿತ್‌ ತಿರಂಗ’ ಹೆಸರಿನ ಹ್ಯಾಶ್‌ ಟ್ಯಾಗ್‌ನಲ್ಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಟ್ವಿಟರ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಹೇಳಿದ್ದಾರೆ.

ಈ ಅಭಿಯಾನದ ಕುರಿತು ಹೆಚ್ಚಿನ ಮಾಹಿತಿಗೆ ಭಾರತಿ ಮುಗದಮ್‌ (98865 14004) ಹಾಗೂ ಕರುಣಾಕರ್‌ (99868 84555) ಅವರನ್ನು ಸಂಪರ್ಕಿಸಬಹುದು. ಪ್ರತಿ ಬೂತ್‌ಗೆ ಅಗತ್ಯವಿರುವ ಧ್ವಜಗಳನ್ನು ಮತ್ತು ‘ಉಟ್ಟಬಟ್ಟೆಯಲ್ಲಿ ಹೊರಟು ಬಂದವರು’ ಎಂಬ ಪುಸ್ತಕವನ್ನು ತಲುಪಿಸಲಾಗುತ್ತದೆ ಎಂದು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಗಣರಾಜ್ಯೋತ್ಸವ : ಬೆಂಗಳೂರಿನ ಈ ಮಾರ್ಗದಲ್ಲಿ ಹೋಗ್ಬೇಡಿ

ಶುಕ್ರವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪಕ್ಷದ ಕಚೇರಿಯಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌ ಹಾಗೂ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಅವರು ಎಲ್ಲ ಜಿಲ್ಲೆಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ಜಿಲ್ಲೆ ಮತ್ತು ಮಂಡಲಗಳಲ್ಲಿ ಜ.26 ರಂದು ತ್ರಿವರ್ಣ ಧ್ವಜ ಹಾರಿಸುವ ಸಂಬಂಧ ಸಿದ್ಧತೆಗಳ ಕುರಿತು ಸಮಾಲೋಚನೆ ನಡೆಸಲಾಗಿದೆ.

ಪ್ರತಿ ಬೂತ್‌ನಲ್ಲಿ ಭಾಷಣಕಾರರ ಕುರಿತು, ಧ್ವಜ ಇಳಿಸುವ ಕುರಿತು, ಮಂಡಲಗಳಲ್ಲಿ ಎಲ್ಲ ಕಾರ್ಯಕರ್ತರು ದ್ವಿಚಕ್ರ ವಾಹನಗಳಲ್ಲಿ ಓಡಾಡುವ ಕುರಿತು ರಾಜ್ಯದ 37 ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪಕ್ಷದ ಪ್ರಮುಖರೊಂದಿಗೆ ವಿಡಿಯೋ ಸಂವಾದದ ಮೂಲಕ ಯೋಜನೆ ರೂಪಿಸಲಾಯಿತು. ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಭಿಯಾನ ಕುರಿತು ಯಾವುದೇ ಮಾಹಿತಿ ಪಡೆಯಲು ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಪ್ರತ್ಯೇಕ ವಿಭಾಗವನ್ನು ಸ್ಥಾಪಿಸಲಾಗಿದೆ. ಕಾರ್ಯಕರ್ತರು ಈ ವಿಭಾಗವನ್ನು ಸಂಪರ್ಕಿಸಬಹುದು ಎಂದು ರವಿಕುಮಾರ್‌ ತಿಳಿಸಿದ್ದಾರೆ.

ಗಣರಾಜ್ಯೋತ್ಸವ ಸಂಭ್ರಮಾಚರಣೆ ರದ್ದುಗೊಳಿಸಿದ ಚೀನಾದ ಭಾರತೀಯ ರಾಯಭಾರ ಕಚೇರಿ!

click me!