ಗುತ್ತಿಗೆದಾರ ಆತ್ಮಹತ್ಯೆ: ಪ್ರಿಯಾಂಕ್ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

Published : Dec 27, 2024, 07:43 AM IST
ಗುತ್ತಿಗೆದಾರ ಆತ್ಮಹತ್ಯೆ: ಪ್ರಿಯಾಂಕ್ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ಸಾರಾಂಶ

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರನ ಕಿರುಕುಳ ಹಾಗೂ ಬೆದರಿಕೆಯಿಂದ ತತ್ತರಿಸಿದ್ದ ಬೀದರ್‌ನ ಗುತ್ತಿಗೆದಾರ ಸಚಿನ್ ಸುದೀರ್ಘ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ 

ಬೆಂಗಳೂರು(ಡಿ.27):  ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕೆಲ ಸಚಿವರು ತಮ್ಮ ಬಲಗೈ ಬಂಟರು ಹಾಗೂ ಆಪ್ತ ಸಹಾ ಯಕರಿಗೆ ಜನರಲ್ ಪವರ್‌ ಆಫ್ ಅಟಾರ್ನಿ ನೀಡಿದಂತಿದ್ದು, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. 

ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು, ಇತ್ತೀಚೆಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಆಪ್ತಸಹಾಯಕನ ಕಿರುಕುಳಕ್ಕೆ ತಹಸೀಲ್ದಾರ್‌ ಕಚೇರಿಯ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ವಿಧಾನ ಮಂಡಲದ ಸುವರ್ಣಸೌಧಕ್ಕೆ ನುಗ್ಗಿ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ್ದ ಸುದ್ದಿ ಹಸಿಯಾಗಿರುವಾಗಲೇ ಇದೀಗ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರನ ಕಿರುಕುಳ ಹಾಗೂ ಬೆದರಿಕೆಯಿಂದ ತತ್ತರಿಸಿದ್ದ ಬೀದರ್‌ನ ಗುತ್ತಿಗೆದಾರ ಸಚಿನ್ ಸುದೀರ್ಘ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Breaking News: ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ರೈಲಿಗೆ ತಲೆಕೊಟ್ಟು ಜೀವ ಬಿಟ್ಟ ಗುತ್ತಿಗೆದಾರ!

ನನ್ನ ಕುಗ್ಗಿಸುವ ಬಿಜೆಪಿ ಯತ್ನ ಫಲ ನೀಡಲ್ಲ 

ಬೀದ‌ರ್: ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ (28) ಸಾವು ದುರದೃಷ್ಟಕರ ವಾದುದು. ಸಚಿನ್ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿದ್ದಾರೆ. 
ಸಚಿನ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಆರೋಪಿಗಳ ಹೇಳಿಕೆಗಳು ಒಂದು ಬಗೆಯಲ್ಲಿವೆ, ಸಚಿನ್ ಬರೆದಿದ್ದೆನ್ನಲಾಗಿರುವ ಡೆತ್‌ನೋಟ್‌ನಲ್ಲಿ ಇನ್ನೊಂದು ಬಗೆಯ ವಿಷಯ ಕಂಡು ಬರುತ್ತವೆ. ಮಿಥ್ಯಾರೋಪ ಮಾಡುವುದು ಬಿಜೆಪಿಯವರ ಹಳೆಯ ಅಭ್ಯಾಸ, ಈ ಹಿಂದೆಯೂ ನನ್ನ ಮೇಲೆ ನಿರಾಧರ ಆರೋಪ ಮಾಡಿದ್ದರು, ಈಗಲೂ ಮಾಡುತ್ತಿದ್ದಾರೆ, ಮುಂದೆಯೂ ಮಾಡುತ್ತಿರುತ್ತಾರೆ. ಆದರೆ ಆಧಾರ ರಹಿತ ಆರೋಪಗಳಿಂದ ನನ್ನನ್ನು ಕುಗ್ಗಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗಲ್ಲ ಎಂದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!