2006ರಲ್ಲಿ ಯಡಿಯೂರಪ್ಪ-ಕುಮಾರಸ್ವಾಮಿ ಕೆಲಸದ ಮಾದರಿಯಲ್ಲೇ ನಿಖಿಲ್-ವಿಜಯೇಂದ್ರ ಒಟ್ಟಾಗಿ ಕೆಲಸ ಮಾಡ್ತಾರೆ!

By Sathish Kumar KH  |  First Published Nov 26, 2023, 3:56 PM IST

ಲೋಕಸಭಾ ಚುನಾವಣೆಯಲ್ಲಿ ನಿಖಿಲ್, ವಿಜಯೇಂದ್ರ ಸಹೋದರ ಮನೋಭಾವದಲ್ಲಿ ಒಟ್ಟಾಗಿ ಹೋಗ್ತಾರೆ. ಉತ್ತಮ ಬಾಂಧವ್ಯ ಜೊತೆಗೆ ಚುನಾವಣೆ ಮಾಡ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.


ಬೆಂಗಳೂರು (ನ.26): ಯುವ ರಾಜ್ಯಾಧ್ಯಕ್ಷರ ನೇಮಕದಿಂದ ಕಾರ್ಯಕರ್ತರ ಹುರುಪು ಹೆಚ್ಚಾಗಿದೆ. 2006-07 ರಲ್ಲಿ ಯಡಿಯೂರಪ್ಪ ನಾನು ಸರ್ಕಾರ ನಡೆಸಿದ್ದೋ, ಇವತ್ತೂ ಸಹ ಅಂತಹ ಸರ್ಕಾರ ಬರಬೇಕು ಅನ್ನೋದು ಜನರ ಅಭಿಪ್ರಾಯ ಇದೆ. ನಿಖಿಲ್, ವಿಜಯೇಂದ್ರ ಸಹೋದರ ಮನೋಭಾವದಲ್ಲಿ ಒಟ್ಟಾಗಿ ಹೋಗ್ತಾರೆ. ಉತ್ತಮ ಬಾಂಧವ್ಯ ಜೊತೆಗೆ ಚುನಾವಣೆ ಮಾಡ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. 

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಚರ್ಚೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಯುವ ರಾಜ್ಯಾಧ್ಯಕ್ಷರ ನೇಮಕದಿಂದ ಕಾರ್ಯಕರ್ತರ ಹುರುಪು ಹೆಚ್ಚಾಗಿದೆ. ಅದಕ್ಕಾಗಿ ವಿಜಯೇಂದ್ರ ಅವರ ಶ್ರಮ ಹಾಕುತ್ತಿರುವುದನ್ನ ನೋಡ್ತಿದ್ದೇನೆ. 2006-07 ರಲ್ಲಿ ಯಡಿಯೂರಪ್ಪ ನಾನು ಸರ್ಕಾರ ನಡೆಸಿದ್ದೋ, ಇವತ್ತೂ ಸಹ ಅಂತಹ ಸರ್ಕಾರ ಬರಬೇಕು ಅನ್ನೋದು ಜನರ ಅಭಿಪ್ರಾಯ ಇದೆ. ಅವತ್ತು ನಾವು ಅಭಿವೃದ್ಧಿ ಫೌಂಡೇಷನ್ ಕೊಟ್ಟಿದ್ದೆವು. ನಿಖಿಲ್, ವಿಜಯೇಂದ್ರ ಸಹೋದರ ಮನೋಭಾವದಲ್ಲಿ ಒಟ್ಟಾಗಿ ಹೋಗ್ತಾರೆ. ಉತ್ತಮ ಬಾಂಧವ್ಯ ಜೊತೆಗೆ ಚುನಾವಣೆ ಮಾಡ್ತಾರೆ ಎಂದು ಹೇಳಿದರು. 

Tap to resize

Latest Videos

ಜೆಡಿಎಸ್‌ ಬಿಜೆಪಿ ಮೈತ್ರಿ ಪರಿಣಾಮ ಹೆಚ್ಚಾಗಿ ಬೀರಿದ್ದು ನನ್ನಮೇಲೆ: ಮಾಜಿ ಶಾಸಕ ಪ್ರೀತಮ್‌ಗೌಡ!

ಬಹಳ ದಿನಗಳ ಹಿಂದೆಯೇ ವಿಜಯೇಂದ್ರ ಭೇಟಿ ಮಾಡಬೇಕಿತ್ತು. ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಆಗಿರಲಿಲ್ಲ. ಇವತ್ತು ನಮ್ಮ ಭೇಟಿಯ ಉದ್ದೇಶ ರಾಜ್ಯದ ಅಭಿವೃದ್ಧಿ ದೃಷ್ಟಿಯಾಗಿದೆ. ಮೋದಿ ಮತ್ತೆ ದೇಶದ ಪ್ರಧಾನಮಂತ್ರಿ ಆಗುವ ನಿಟ್ಟಿನಲ್ಲಿ ಕೂತು ಚರ್ಚೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರ ಬಗ್ಗೆ ಮಾತಾಡಿಲ್ಲ. ಆ ಬಗ್ಗೆ ಕೇಂದ್ರ ನಾಯಕರು ಕೂತು ಚರ್ಚೆ ಮಾಡ್ತಾರೆ.  ಇನ್ನು ಸಿಎಂ ಸಿದ್ದರಾಮಯ್ಯ ಜನತಾ ದರ್ಶನಕ್ಕಾಗಿ ದೊಡ್ಡ ದೊಡ್ಡ ಜಾಹಿರಾತು ಕೊಟ್ಟಿದ್ದಾರೆ. ನಾವು ಅಂದೇ ಜನತಾ ದರ್ಶನ ಯಶಸ್ವಿಯಾಗಿ ಮಾಡಿ ತೋರಿಸಿದ್ದೆವು. ಈಗ ಕೇವಲ ಪ್ರಚಾರದ ಕೆಲಸ ಅಷ್ಟೇ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ದೆಹಲಿಯಲ್ಲಿ ಕೂತು ಚರ್ಚೆ ಮಾಡಿದ ನಂತರ ರಾಜ್ಯದ ಹಿತದೃಷ್ಟಿಯಿಂದ ಹೊಂದಾಣಿಕೆ ಆಗಿ ಸಾಕಷ್ಟು ದಿನಗಳು ಕಳೆದಿವೆ. ದೇಶದ ಮಾಜಿ ಪ್ರಧಾನಿ ದೇವೇಗೌಡರ ಜೊತೆ ಸಹ ಭೇಟಿಮಾಡಿ ಚರ್ಚೆ ಮಾಡಿದ್ದೆನು. ಇದೀಗ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಕುಮಾರಸ್ವಾಮಿ ಅವರನ್ನ ಭೇಟಿಮಾಡಿದ್ದೇನೆ. ಮುಂಬರುವ 28 ಲೋಕಸಭಾ ಕ್ಷೇತ್ರ ಗೆಲ್ಲಬೇಕು. ರೈತ ವಿರೋಧಿ, ರಾಜ್ಯ ವಿರೋಧಿ ಈ ಸರ್ಕಾರಕ್ಕೆ ಬುದ್ದಿ ಕಲಿಸಬೇಕು. ಆ ನಿಟ್ಟಿನಲ್ಲಿ ಕೂತು ಎಲ್ಲಾ ವಿಚಾರ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದರು.

ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರವಾಗಿ ನಮ್ಮ ಕೇಂದ್ರ ನಾಯಕರು ಮಾತಾಡುತ್ತಾರೆ. ನಮ್ಮಲ್ಲಿ ಏನೇ ಗೊಂದಲ ಇದ್ರೂ ಕೂಡ ಬಗ್ಗೆ ಚರ್ಚೆ ಮಾಡ್ತೀವಿ. ನಮ್ಮ ಗುರಿ ಇರೋದು ಮತ್ತೊಮ್ಮೆ ದೇಶದ ಪ್ರಧಾನಿ ಆಗಿ ನರೇಂದ್ರ ಮೋದಿಯವರನ್ನ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ.ವಿಜಯೇಂದ್ರ ಹೇಳಿದರು.

ಯಾವುದೇ ಸಮಾಜಕ್ಕೆ ನೋವುಂಟಾಗುವುದಿದ್ದರೆ ಜಾತಿಗಣತಿ ವರದಿ ಬಿಡುಗಡೆ ಮಾಡಬೇಡಿ: ದಿಂಗಾಲೇಶ್ವರ ಸ್ವಾಮೀಜಿ

ಮೈತ್ರಿ ಬಳಿಕ ಮೊದಲ ಭೇಟಿಯಾದ ದ್ವಿಪಕ್ಷ ರಾಜ್ಯಾಧ್ಯಕ್ಷರು: ಲೋಕಸಭಾ ಚುನಾವಣೆಗೂ ಮುನ್ನವೇ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದಕ್ಕೆ ಸಿದ್ಧವಾಗಿವೆ. ಮೈತ್ರಿ ಮಾತುಕತೆ ಬಳಿಕ ಇದೇ ಮೊಟ್ಟ ಮೊದಲ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಪರಸ್ಪರ ಭೇಟಿ ಮಾಡಿ ಚರ್ಚೆ ನಡೆಸಿದರು. ಜೆಡಿಎಸ್‌ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೇ ಭೇಟಿ ಮಾಡಿದರು. ಈ ವೇಳೆ ಇಬ್ಬರೂ ನಾಯಕರು ಮೈತ್ರಿ ನಂತರ ಪರಸ್ಪರ ಚರ್ಚೆ ಮಾಡಿದರು. ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ. ವಿಜಯೇಂದ್ರ ಅವರು ಈಗಾಗಲೇ ಜೆಡಿಎಸ್‌ ರಾಷ್ಷ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಆಗ ರಾಜಕೀಯ ಮಾರ್ಗದರ್ಶನ ಮಾಡುವಂತೆ ವಿಜಯೇಂದ್ರ ಮನವಿ ಮಾಡಿದ್ದರು.

click me!