ಕಾಂಗ್ರೆಸ್ ಸರ್ಕಾರವು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಯಾರಿಗೂ ಪೊಲೀಸ್ ವ್ಯವಸ್ಥೆ ಬಗ್ಗೆ ಭಯ ಇಲ್ಲದಂತಾಗಿದೆ. ಚನ್ನಗಿರಿಯಲ್ಲಿ ನಡೆದ ಲಾಕ್‌ಡೆತ್ ಬಗ್ಗೆ ಸ್ಪಷ್ಟನೆ ಬರಬೇಕಿದೆ. ಈ ನಡುವೆ ಸಾವಿರಾರು ಸಂಖ್ಯೆಯಲ್ಲಿ ಪೊಲೀಸ್ ಠಾಣೆಗೆ ನುಗ್ಗಿ ಕುರ್ಚಿಗಳನ್ನು ಧ್ವಂಸ ಮಾಡಿ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಕುಸಿದಿದೆ ಎಂದು ಹರಿಹಾಯ್ದ ಬಿ.ವೈ. ವಿಜಯೇಂದ್ರ
ಬೆಂಗಳೂರು(ಮೇ.26): ಚನ್ನಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಮುಖಂಡರು ಟೀಕಾಪ್ರಹಾರ ನಡೆಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇತರರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಚನ್ನಗಿರಿ ಪ್ರಕರಣವನ್ನು ಗಮನಿ ಸಿದರೆ ಹಿಂದೆ ಲಾಲೂ ಯಾದವ್ ಆಡಳಿತದ ಬಿಹಾರ ಯಾವ ರೀತಿಯಲ್ಲಿತ್ತೋ ಹಾಗೆ ಕರ್ನಾಟಕವೂ ಮಾರ್ಪಟ್ಟಿದೆ ಎಂದರು.
ಕಾಂಗ್ರೆಸ್ ಸರ್ಕಾರವು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಯಾರಿಗೂ ಪೊಲೀಸ್ ವ್ಯವಸ್ಥೆ ಬಗ್ಗೆ ಭಯ ಇಲ್ಲದಂತಾಗಿದೆ. ಚನ್ನಗಿರಿಯಲ್ಲಿ ನಡೆದ ಲಾಕ್‌ಡೆತ್ ಬಗ್ಗೆ ಸ್ಪಷ್ಟನೆ ಬರಬೇಕಿದೆ. ಈ ನಡುವೆ ಸಾವಿರಾರು ಸಂಖ್ಯೆಯಲ್ಲಿ ಪೊಲೀಸ್ ಠಾಣೆಗೆ ನುಗ್ಗಿ ಕುರ್ಚಿಗಳನ್ನು ಧ್ವಂಸ ಮಾಡಿ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಕುಸಿದಿದೆ ಎಂದು ಹರಿಹಾಯ್ದರು.
undefined
ಬಿಜೆಪಿಗರ ವಿರುದ್ಧ ಪೊಲೀಸ್ ದಬ್ಬಾಳಿಕೆ: ವಿಜಯೇಂದ್ರ ಕಿಡಿ
ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟರೆ, ರೌಡಿಗಳ ಕೈಯಲ್ಲಿ ಮಚ್ಚು ಲಾಂಗು, ಉಗ್ರರ ಕೈಯಲ್ಲಿ ಬಾಂಬು ಕೊಟ್ಟಂತಾಗಿದೆ. ಕಾನೂನು ಸುವ್ಯವಸ್ಥೆ, ಕಾನೂನು ಪರಿಪಾಲನೆಗೆ ಹೆಸರುವಾಸಿಯಾಗಿದ್ದ ರಾಜ್ಯವು ಕಾಂಗ್ರೆಸ್ ಅವಧಿಯಲ್ಲಿ ಅಕ್ಷರಶಃ ರೌಡಿ ರಾಜ್ಯವಾಗಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದೇ ತಡ, ಭಯೋತ್ಪಾದಕರು, ರೌಡಿ ಶೀಟರ್‌ಗಳು, ಕೊಲೆಗಡುಕರು, ಬಾಂಬು, ಮಚ್ಚು, ಲಾಂಗು ಹಿಡಿದು ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದಾರೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆ ಧ್ವಂಸ ಮಾಡಿರುವ ಘಟನೆ, ಉಡುಪಿಯಲ್ಲಿ ನಡುರಸ್ತೆಯಲ್ಲೇ ಗ್ಯಾಂಗ್ ವಾರ್ ನಡೆದಿರುವ ಘಟನೆ ಇವನ್ನೆಲ್ಲ ನೋಡುತ್ತಿದ್ದರೆ ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಕಿಡಿಕಾರಿದರು.
ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಬೇಕು ಎಂದು ರಾಜ್ಯಪಾಲರಿಗೆ ಆಗ್ರಹಿ ಸುತ್ತೇವೆ. ಇವರ ಪಾಪದ ಕೊಡ ತುಂಬಿದೆ. ಅಧಿಕಾರ ದುರ್ಬಳಕೆ, ನಮ್ಮ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಜಾಸ್ತಿಯಾಗಿದೆ. ಎಲ್ಲವನ್ನೂ ರಾಜ್ಯಪಾಲರ ಗಮನಕ್ಕೆ ತರುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.