ಒಂದು ಸಮುದಾಯದ ಓಲೈಕೆಗಾಗಿ ರೈತರ ಕಣ್ಣಲ್ಲಿ ನೀರು ಬರುವಂತೆ ಮಾಡುವುದು ಸರಿಯಲ್ಲ. ಅಧಿಕಾರದ ಮದದಿಂದ ರೈತರ ಕಣ್ಣಲ್ಲಿ ನೀರು ಬಂದರೆ ಸರ್ಕಾರಕ್ಕೆ ಶಾಪ ತಟ್ಟುತ್ತೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೀದರ್/ಹಾವೇರಿ(ಡಿ.05): ರೈತರು, ಬಡವರು, ಮಠ-ಮಂದಿರಗಳ ಜಮೀನು ಗಳನ್ನು ವಕ್ಫ್ ಮಂಡಳಿ ಅಕ್ರಮವಾಗಿ ಕಬಳಿಸುತ್ತಿದೆ ಎಂದು ಆರೋಪಿಸಿದ್ದ ಬಿಜೆಪಿ, ಈ ಸಂಬಂಧ ಮಾಹಿತಿ ಸಂಗ್ರಹ ಮತ್ತು ಜನಜಾಗೃತಿಗೆ ಬುಧವಾರದಿಂದ ಆಂದೋಲನಕ್ಕೆ ಚಾಲನೆ ನೀಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ತಂಡ ಬೀದರ್, ಕಲಬುರಗಿಯಲ್ಲಿ ಮತ್ತು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ಹುಬಳ್ಳಿ, ಹಾವೇರಿಯಲ್ಲಿ ಆಂದೋಲನದಲ್ಲಿ ಭಾಗಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿತು.
ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ 6 ಪುಟಗಳ ದೂರು!
ಒಂದು ಸಮುದಾಯದ ಓಲೈಕೆಗಾಗಿ ರೈತರ ಕಣ್ಣಲ್ಲಿ ನೀರು ಬರುವಂತೆ ಮಾಡುವುದು ಸರಿಯಲ್ಲ. ಅಧಿಕಾರದ ಮದದಿಂದ ರೈತರ ಕಣ್ಣಲ್ಲಿ ನೀರು ಬಂದರೆ ಸರ್ಕಾರಕ್ಕೆ ಶಾಪ ತಟ್ಟುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬುಧವಾರ ಬೀದರ್‌ನ ಗಾಂಧಿಗಂಜ್‌ನಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ 'ನಮ್ಮ ಭೂಮಿ ನಮ್ಮ ಹಕ್ಕು' ಕಾರ್ಯಕ್ರಮದಲ್ಲಿ ಮಾತನಾಡಿ, ವಕ್ಫ್ ಹೆಸರಿನಲ್ಲಿ ಹಿಂದುಗಳನ್ನು ರಸ್ತೆಗೆ ತರುವ ಕೆಲಸವನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ಹೀಗಾಗಿ ರೈತರ ಪರವಾಗಿ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದ್ದು, ರಾಜ್ಯದಲ್ಲಿ 3 ತಂಡಗಳ ಮೂಲಕ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ ಎಂದರು.
ಸಿದ್ದರಾಮಯ್ಯಗೆ ರೈತರ ಮೇಲೆ ಯಾಕಿಷ್ಟು ಸಿಟ್ಟು?
ಸಾವಿರಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಗಳಿಗೆ ವಕ್ಫ್ ನೋಟಿಸ್ ಕೊಡಿಸುತ್ತಿದ್ದಾರೆ. ಸಿದ್ದರಾಮಯ್ಯ ನಡುವಳಿಕೆ ನೋಡಿದರೆ ಅವರು ಕೇವಲ ಅಲ್ಪಸಂಖ್ಯಾತ ಮತಗಳಿಂದ ಗೆದ್ದಿದ್ದಾರೆ ಎನ್ನುವ ಭಾವನೆಯಲ್ಲಿದ್ದಾರೆ ಎಂದು ಕಿಡಿ ಕಾರಿದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಸ್ಪಿ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಲೂಟಿ ಹೊಡೆದಿದ್ದರೂ, ಅನುದಾನ ಲೂಟಿ ಆಗಿಲ್ಲ ಎಂದರು.
ಹೋರಾಟದ ಬಳಿಕ ಹಗರಣದ ಬಗ್ಗೆ ಸದನದಲ್ಲಿ ಸ್ವತಃ ಸಿದ್ದರಾಮಯ್ಯ ಅವರು ಒಪ್ಪಿಕೊಂಡರು, ಮುಡಾ ಹಗರಣದ ವಿರುದ್ಧ ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡಿದ್ದೇವೆ ಆಗಲೂ ಕೂಡ ಅಕ್ರಮ ನಡೆದಿಲ್ಲ ಎಂದರಾದರೆ, ನಿವೇಶನ ಬದಲಿಗೆ ₹52 ಕೋಟಿ ಕೊಡಿ ಎಂದು ಕೇಳಿದ್ದು ಯಾರು ಎಂದು ಸಿಎಂ ವಿರುದ್ಧ ವ್ಯಂಗ್ಯವಾಡಿದರು.
ಕಾಂಗ್ರೆಸ್ ಬಂದ ಮೇಲೆ ಹೇಯಕೃತ್ಯ ಹೆಚ್ಚು:
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕಲಬುರಗಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೇಯ ಕೃತ್ಯಗಳು ಹೆಚ್ಚುತ್ತಿವೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಅನೇಕ ಪ್ರಕರಣಗಳು ನಡೆದರೂ ಮುಚ್ಚಿ ಹಾಕುವ ಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ದ ವಿಜಯೇಂದ್ರ ಹರಿಹಾಯ್ದರು.
ರೈತರ ಪರ ಯಾರೇ ಹೋರಾಟ ಮಾಡಿದ್ರು ಸ್ವಾಗತಿಸ್ತೇವೆ: ಬಿವೈವಿ
ಬೀದರ್: ರಾಜ್ಯದ ಯಾವುದೇ ರೈತರಿಗೂ ಅನ್ಯಾಯವಾಗಬಾರದು ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ರಾಜ್ಯದ ರೈತರ ಪರವಾಗಿ ನಿಂತಿದ್ದೇವೆ. ನಮ್ಮಲ್ಲಿ ಯಾವುದೇ ಬಣವಿಲ್ಲ, ರೈತರ ಪರವಾಗಿ ಯಾರೇ ಹೋರಾಟ ಮಾಡಿದರೂ ಅದನ್ನು ನಾವು ಸ್ವಾಗತ ಮಾಡುತ್ತೇವೆ ಎಂದು ಪರೋಕ್ಷವಾಗಿ ಶಾಸಕ ಯತ್ನಾಳ ವಿರುದ್ಧ ಮಾತನಾಡಿದರು.
ಪಕ್ಷ ವಿರೋಧಿ ಕೆಲಸ ಮಾಡುತ್ತಿರುವ ವಿಜಯೇಂದ್ರಗೆ ನೋಟಿಸ್ ನೀಡಿ: ರಮೇಶ್ ಜಾರಕಿಹೊಳಿ
ಕಾಂಗ್ರೆಸ್ ಸರ್ಕಾರ ವಕ್ಫ್ ಮೂಲಕ ಮಠ ಮಾನ್ಯಗಳಿಗೆ ರೈತರನ್ನ ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಇಂತಹ ಹೇಯ ಕೃತ್ಯ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಜಯೇಂದ್ರ ವಿರುದ್ಧ ಯತ್ನಾಳ 6 ಪುಟಗಳ ಆರೋಪ ವರದಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ ಅವರು, ಯತ್ನಾಳಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಇವತ್ತು ವಕ್ಸ್ ವಿರುದ್ಧ ಹೋರಾಟ ಮಾಡಲು ಬಂದಿದ್ದೇವೆ. ಪ್ರತಿ ನಿತ್ಯ ಅವರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಈಗಾಗಲೇ ಅವರಿಗೆ ಬಿಜೆಪಿ ಪಕ್ಷದಿಂದ ನೋಟಿಸ್ ಕೊಡಲಾಗಿದೆ, ಆ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ ಬೇರೆ ವಿಚಾರ ನನಗೆ ಗೊತ್ತಿಲ್ಲ ಎಂದರು.