
ಮಂಗಳೂರು(ಸೆ.01): ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀರು ಕೊಡದೆ ರಾತ್ರೋರಾತ್ರಿ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿದೆ. ರಾಜ್ಯದ ರೈತರ ಇಚ್ಛೆ ಪೂರೈಸದೆ, ನ್ಯಾಯ ಕೊಡದೆ ತಮಿಳುನಾಡಿಗೆ ನೀರು ಬಿಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.
ರಾಜ್ಯದಲ್ಲಿ ನೀರಿನ ಸಮಸ್ಯೆ ಇದ್ದು, ಬರ ಪರಿಸ್ಥಿತಿ ಎದುರಾಗಿದೆ. ಇದರ ನಡುವೆ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಇಲ್ಲದೆ ರೈತರು ತತ್ತರಿಸಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದರು.
ಘರ್ ವಾಪಸಿ ತಡೆಗೆ ಇಂದು ಬಿಜೆಪಿ ಕೋರ್ ಕಮಿಟಿ ಸಭೆ
ಚುನಾವಣಾ ಪೂರ್ವ ಕಾಂಗ್ರೆಸ್ ಘೋಷಣೆ ಮಾಡಿದ್ದ ಗ್ಯಾರಂಟಿಗಳಿಗೆ ಮಾನದಂಡ ಇರಲಿಲ್ಲ. ಈವರೆಗೆ ಘೋಷಿಸಿದ ನಾಲ್ಕು ಗ್ಯಾರಂಟಿಗಳಿಗೆ ಮಾನದಂಡ ಹಾಕಲಾಗಿದೆ. ಗೃಹ ಜ್ಯೋತಿ ಹೆಸರಲ್ಲಿ ಇಡೀ ರಾಜ್ಯವನ್ನು ಕತ್ತಲಿನಲ್ಲಿಡಲಾಗಿದೆ. ಝೀರೋ ಬಿಲ್ ಜೊತೆಗೆ ವಿದ್ಯುತ್ ಕಡಿತದಿಂದಾಗಿ ಈಗ ಝೀರೋ ಕರೆಂಟ್ ಎಂಬಂತಾಗಿದೆ ಎಂದು ಟೀಕಿಸಿದರು.
ಇಂದಿರಾ ಗಾಂಧಿ ಕಾಲದ ಗತವೈಭವ ಮರುಕಳಿಸುತ್ತಿದೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಆ ಗತವೈಭವದಲ್ಲಿ ತುರ್ತು ಪರಿಸ್ಥಿತಿಯನ್ನೂ ಹೇರಲಾಗಿತ್ತು ಎಂಬುದನ್ನು ಮರೆಯಬಾರದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ