ಟಿಕೆಟ್‌ ಆಕಾಂಕ್ಷಿಗಳ ಸಿಟ್ಟು ತಣಿಸಲು ಬಿಜೆಪಿ ಯತ್ನ

Published : Oct 24, 2019, 12:01 PM IST
ಟಿಕೆಟ್‌ ಆಕಾಂಕ್ಷಿಗಳ ಸಿಟ್ಟು ತಣಿಸಲು ಬಿಜೆಪಿ ಯತ್ನ

ಸಾರಾಂಶ

ದಕ್ಷಿಣ ಕರ್ನಾಟಕದ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆ ಆರಂಭಿಸಿರುವ ಆಡಳಿತಾರೂಢ ಬಿಜೆಪಿಯ ಹಿರಿಯ ನಾಯಕರು ಬುಧವಾರ ಆ ಕ್ಷೇತ್ರಗಳ ಮುಖಂಡರೊಂದಿಗೆ ಮುಖಾಮುಖಿ ಮಾತುಕತೆ ನಡೆಸಿ ಟಿಕೆಟ್‌ ಆಕಾಂಕ್ಷಿಗಳ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.

ಬೆಂಗಳೂರು(ಅ.24): ದಕ್ಷಿಣ ಕರ್ನಾಟಕದ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆ ಆರಂಭಿಸಿರುವ ಆಡಳಿತಾರೂಢ ಬಿಜೆಪಿಯ ಹಿರಿಯ ನಾಯಕರು ಬುಧವಾರ ಆ ಕ್ಷೇತ್ರಗಳ ಮುಖಂಡರೊಂದಿಗೆ ಮುಖಾಮುಖಿ ಮಾತುಕತೆ ನಡೆಸಿ ಟಿಕೆಟ್‌ ಆಕಾಂಕ್ಷಿಗಳ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.

ಒಟ್ಟು ಎಂಟು ಕ್ಷೇತ್ರಗಳ ಪೈಕಿ ಚಿಕ್ಕಬಳ್ಳಾಪುರ ಹೊರತುಪಡಿಸಿ ಇನ್ನುಳಿದ ಏಳು ಕ್ಷೇತ್ರಗಳ ಮುಖಂಡರು ಸಭೆಗೆ ಆಗಮಿಸಿದ್ದರು. ಖುದ್ದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರೇ ಸಮಾಲೋಚನೆ ನಡೆಸಿ ಆಕಾಂಕ್ಷಿಗಳ ಕೋಪ ತಣ್ಣಗಾಗುವಂತೆ ಮಾಡುವಲ್ಲಿ ಬಹುತೇಕ ಯಶಸ್ವಿಯಾದರು ಎಂದು ತಿಳಿದು ಬಂದಿದೆ.

ಡಿ.ಕೆ.ಶಿಕುಮಾರ ಬಿಡು​ಗ​ಡೆ​ : ಬಿಜೆ​ಪಿ ನಾಯ​ಕರ ಲೆಕ್ಕಾ​ಚಾರಗಳೆ​ಲ್ಲವೂ ಉಲ್ಟಾ!

ಬುಧವಾರ ಪಕ್ಷದ ಕಚೇರಿಯಲ್ಲಿ ನಡೆದ ಸುದೀರ್ಘ ಸಭೆಯಲ್ಲಿ ಹೊಸಕೋಟೆ, ಕೆ.ಆರ್‌.ಪುರ, ಮಹಾಲಕ್ಷ್ಮಿ ಲೇಔಟ್‌, ಯಶವಂತಪುರ, ಶಿವಾಜಿನಗರ, ಹುಣಸೂರು, ಕೆ.ಆರ್‌.ಪೇಟೆ ಕ್ಷೇತ್ರಗಳ ಬಿಜೆಪಿ ಮುಖಂಡರು ಸಭೆಗೆ ಆಗಮಿಸಿದ್ದರು. ನ್ಯಾಯಾಲಯದ ತೀರ್ಪು ಆಧರಿಸಿ ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಾಗಬಹುದು ಎಂಬ ಮುನ್ಸೂಚನೆಯನ್ನು ಸಭೆಯಲ್ಲಿ ನೀಡಲಾಯಿತು ಎನ್ನಲಾಗಿದೆ. ಹೊಸಕೋಟೆ ಮತ್ತು ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರಗಳ ಕೆಲವು ಆಕಾಂಕ್ಷಿಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ತಮ್ಮ ಪಟ್ಟು ಸಡಿಲಿಸಿಲ್ಲ. ಆ ಕ್ಷೇತ್ರಗಳ ಮುಖಂಡರೂ ಪಕ್ಷದ ನಿರ್ಧಾರಕ್ಕೆ ಬದ್ಧರಾಗುತ್ತಾರೆ ಎಂಬ ವಿಶ್ವಾಸವನ್ನು ಬಿಜೆಪಿ ನಾಯಕರು ವ್ಯಕ್ತಪಡಿಸಿದ್ದಾರೆ.

26ರಂದು ಹುಬ್ಬಳ್ಳಿಯಲ್ಲಿ ಸಭೆ

ಉತ್ತರ ಕರ್ನಾಟಕ ಭಾಗದ ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇದೇ ತಿಂಗಳ 26ರಂದು ಸಭೆ ನಡೆಯಲಿದೆ. ಆ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಕೋರ್‌ ಕಮಿಟಿ ಸಭೆಯೂ ನಡೆಯಲಿದೆ.

5 ಸಾವಿರ ಮನೆ ನಿರ್ಮಿಸಲು ವಸತಿ ಇಲಾಖೆಗೆ 96 ಎಕ್ರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!