
ಬೆಂಗಳೂರು(ಮಾ.10): ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸದ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಶನಿವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಆರಂಭವಾಗಿದ್ದರೂ, ಕಾಂಗ್ರೆಸ್ ಸರ್ಕಾರ ಕುಂಭಕರ್ಣನ ನಿದ್ರೆ ಮಾಡುತ್ತಿದೆ. ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಮಾನವನ್ನು ಸರ್ಕಾರ ಹರಾಜು ಹಾಕಿದೆ. ಬರಗಾಲದ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸದ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟಿಸಲಾಗುವುದು ಎಂದು ಹೇಳಿದರು.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿದ ಗೋ ಬ್ಯಾಕ್ ಅಭಿಯಾನ, ಶೋಭಾ ಬಳಿಕ ಹೆಗ್ಡೆ ಟಾರ್ಗೆಟ್
ಯಾವುದೇ ಖಾಸಗಿ ಬೋರ್‌ವೆಲ್‌ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗೆ ಅಧಿಕಾರವಿದೆ. ಅದನ್ನು ಮಾಡಲು ಸರ್ಕಾರಕ್ಕೆ ಮನಸ್ಸಿಲ್ಲದಿರುವುದರಿಂದ ಟ್ಯಾಂಕರ್‌ಗಳು ಕಾಳಸಂತೆ ಸೃಷ್ಟಿಸಿವೆ. ಕಲುಷಿತ ನೀರನ್ನು ಜನರಿಗೆ ನೀಡುತ್ತಿದ್ದರೂ ಆರೋಗ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಎಲ್ಲಿಯೂ ತಪಾಸಣೆ ಮಾಡುತ್ತಿಲ್ಲ. ಯಾವ ಬೋರ್‌ವೆಲ್‌ನಲ್ಲಿ ಎಷ್ಟು ಕಲುಷಿತ ಅಂಶ ಇದೆ ಎಂಬುದನ್ನು ತಪಾಸಣೆ ಮಾಡುತ್ತಿಲ್ಲ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ