
ಬೆಂಗಳೂರು(ನ.11) ಶಿರಾ ಹಾಗೂ ರಾಜರಾಜೇಶ್ವರಿ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಬಂದಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಎರಡೂ ಕ್ಷೇಢತ್ರದ ಅಭ್ಯರ್ಥಿಗಳು ಭಾರೀ ಅಂತರದಿಂದ ತಮ್ಮ ಪ್ರತಿಸ್ಪರ್ಧಿಗಳನ್ನು ಸೋಲಿಸಿದ್ದು ಕಮಲ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಹೀಗಿರುವಾಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡಾ ಈ ಗೆಲುವಿನ ಖುಷಿಯನ್ನು ಹಂಚಿಕೊಂಡಿದ್ದಾರೆ. ಕರುನಾಡಿನ ಕ್ಷೇತ್ರಗಳಲ್ಲಿ ಸಿಕ್ಕ ಗೆಲುವಿಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ.
ಈ ಎರಡೂ ಕ್ಷೇತ್ರದ ಗೆಲುವಿನ ಬೆನ್ನಲ್ಲೇ ಟ್ವೀಟ್ ಮಾಡಿರುವ ಪಿಎಂ ಮೋದಿ 'ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಯಡಿಯೂರಪ್ಪ ಜೀ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ: ದೃಢೀಕರಿಸುತ್ತದೆ' ಎಂದಿದ್ದಾರೆ.
ಇನ್ನು ಕಾರ್ಯಕರ್ತರ ಹಾಗೂ ಜನರ ಬೆಂಬಲವನ್ನೂ ಶ್ಲಾಘಿಸಿರುವ ಪ್ರಧಾನಿ ಮೋದಿ 'ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು' ಎಂದಿದ್ದಾರೆ.
ಅತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಕೂಡಾ ಟ್ವೀಟ್ ಮಾಡುತ್ತಾ 'ನಿಮ್ಮ ಸಾಟಿಯಿಲ್ಲದ ಬೆಂಬಲಕ್ಕೆ ಧನ್ಯವಾದಗಳು. ಈ ಚುನಾವಣೆಯು ಕರ್ನಾಟಕ ಮಂದಿ ಬಿಜೆಪಿ ಹಾಗೂ ಪಿಎಂ ಮೋದಿ ಮೇಲಿರಿಸಿದ ಅಚಲ ನಂಬಿಕೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ' ಎಂದಿದ್ದಾಯರೆ. ಅಲ್ಲದೇ ಈ ಗೆಲುವಿಗೆ ಸಿಎಂ ಬಿಎಸ್‌ವೈ ಹಘಾಊ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರಿಗೆ ಶುಭಾಶಯ ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ