
ಕೊಡಗು (ನ.25): ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟ್ ಹಾಕಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆ ಮೈಸೂರು, ಕೊಡಗು ಸಂಸದ ಪ್ರತಾಪ ಸಿಂಹ ವಿರಾಜಪೇಟೆ ಠಾಣೆಗೆ ತೆರಳಿ ಪೊಲೀಸರನ್ನ ತರಾಟೆ ತೆಗೆದುಕೊಂಡರು.
ಫೇಸ್‌ಬುಕ್‌ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತ ರೋಷನ್ ಕಾರ್ಯಪ್ಪ. ಠಾಣೆಗೆ ಕರೆಯಿಸಿ ಮುಚ್ಚಳಿಕೆ ಬರೆಸಿಕೊಂಡಿದ್ದ ಪೊಲೀಸರು. ಸಾಮಾಜಿಕ ಜಾಲತಾಣದಲ್ಲಿ ಪಕ್ಷಗಳ ವಿರುದ್ಧ ಪೋಸ್ಟ್ ಹಾಕುವುದು ಸಹಜ. ಹಾಗಂತ ಹೀಗೆ ಕೇಸ್ ಹಾಕಿ ತೊಂದರೆ ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಸಂಸದ, ಬಿಜೆಪಿ ಕಾರ್ಯಕರ್ತರನ್ನು ಠಾಣೆಗೆ ಕರೆಯಿಸಿ ಮುಚ್ಚಳಿಕೆ ಬರೆಸಿಕೊಳ್ಳಲು ನಿಮಗೇನು ಪವರ್ ಇದೆ ಎಂದು ಪೊಲೀಸರ ವಿರುದ್ಧ ಆಕ್ರೋಶಗೊಂಡರು.
ಎಂಪಿ ಎಲೆಕ್ಷನ್‌ಗೂ, ರಾಜ್ಯಾಧ್ಯಕ್ಷರ ನೇಮಕಕ್ಕೂ ಸಂಬಂಧವಿಲ್ಲ: ಪ್ರತಾಪ ಸಿಂಹ
ಚುನಾವಣೆ ಸಂದರ್ಭ ಪೇ ಸಿಎಂ, ಸಿಎಂ ಸೀಟು ಮಾರಾಟಕ್ಕೆ ಇದೆ ಎಂದೆಲ್ಲಾ ಕಾಂಗ್ರೆಸ್‌ನವರು ಪೋಸ್ಟ್ ಹಾಕಿದ್ದರು. ಅವರು ಸಾಮಾಜಿಕ ಮಾಧ್ಯಮಗಳಲ್ಲೇ ಪ್ರಚಾರ ಮಾಡಿದರು. ಹಾಗಾದರೆ ಅವರ ಮೇಲೆ ಕ್ರಮ ತೆಗೆದುಕೊಂಡಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡರು.
ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡುವಂಥ ಘಟನೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸ್ ವರಿಷ್ಟಾಧಿಕಾರಿಗೆ ಎಚ್ಚರಿಕೆ ನೀಡಿದ್ದೇನೆ. ಆದರೂ ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡಲಾಗುತ್ತಿದೆ. ಸರ್ಕಾರದ ವಿರುದ್ಧ ಪೋಸ್ಟ್ ಹಾಕಿದರೆ, ಪ್ರಶ್ನಿಸಿದರೆ ಠಾಣೆಗೆ ಕರೆದು ಕಿರುಕುಳ ನೀಡಲಾಗುತ್ತಿದೆ. ಇಂಥ ಪೊಲೀಸ್ ದೌರ್ಜನ್ಯವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಪೊಲೀಸ್ ಠಾಣೆಯಲ್ಲೇ ಪೊಲೀಸರಿಗೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಸಂಸದರ ಜೊತೆಯಲ್ಲೇ ಇದ್ದ ಮಾಜಿ ಶಾಸಕ ಕೆಜಿ ಬೋಪಯ್ಯ.
ನನಗೀಗ ರಾಜಕೀಯದ 20-20 ಮ್ಯಾಚ್ ಆಡುವ ಜವಾಬ್ದಾರಿ ಪಕ್ಷ ವಹಿಸಿದೆ: ಬಿವೈ ವಿಜಯೇಂದ್ರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ