
ಗದಗ (ಜ.4): ಗೋದ್ರಾ ಮಾದರಿಯಲ್ಲಿ ಘಟನೆಯಾಗುತ್ತದೆ ಎನ್ನುವುದರ ಬಗ್ಗೆ ಬಿ.ಕೆ. ಹರಿಪ್ರಸಾದ ಅವರಿಗೆ ಮಾಹಿತಿ ಇದೆ. ಎಲ್ಲೊ ಇವರಿಗೆ ಮಾಹಿತಿ ಸಿಕ್ಕಿದೆ. ತಕ್ಷಣ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ ಹೇಳಿಕೆ ಖಂಡನೀಯ. ಗಂಡಾಂತರ ನಿರ್ಮಾಣ ಮಾಡಿ, ಪ್ರಚೋದನೆ ಕೊಡುವ ಹೇಳಿಕೆ ಇದಾಗಿದೆ. ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ದೇವಸ್ಥಾನ ನಿರ್ಮಾಣವಾಗುತ್ತಿರುವುದು ಕಾಂಗ್ರೆಸ್‌ಗೆ ಹೊಟ್ಟೆ ಉರಿ ಹೆಚ್ಚಿಸಿದೆ. ಹೊಟ್ಟೆ ಕಿಚ್ಚಿನಿಂದ ಹತಾಶರಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ರಾಮ ಮಂದಿರ ಉದ್ಘಾಟನೆ ಮಾಡಲು ಮೋದಿ ಯಾರು? ಕೆರಳಿದ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್!
ಗೋದ್ರಾ ಘಟನೆಯಲ್ಲಿ 57 ಮುಸ್ಲಿಮರನ್ನು ಜೀವಂತ ಸುಟ್ಟು ಹಾಕಲಾಗಿದೆ. ಇಂತಹ ಹೇಳಿಕೆ ನೀಡಿ ಮುಸ್ಲಿಮರಿಗೆ ಪ್ರಚೋದನೆ ಕೊಡುತ್ತಿದ್ದಾರಾ? ಅಥವಾ ಮುಸ್ಲಿಮರು ಮಾಡುವ ಕೆಲಸ ಹರಿಪ್ರಸಾದ ಅವರಿಗೆ ಗೊತ್ತಾಗಿದೆಯಾ? ಕಾಂಗ್ರಸ್‌ನವರೇ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಗೃಹ ಸಚಿವರು ಬಿ.ಕೆ. ಹರಿಪ್ರಸಾದ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಮುಂದೆ ಏನಾದರೂ ಅಹಿತಕರ ಘಟನೆ ನಡೆದರೆ ಗೃಹ ಮಂತ್ರಿ ಹಾಗೂ ಸಿಎಂ ಸಿದ್ದರಾಮಯ್ಯನವರೆ ಕಾರಣವಾಗುತ್ತಾರೆ ಎಂದು ಹೇಳಿದರು.
ಕರ್ನಾಟಕದಲ್ಲಿ ಗೋಧ್ರಾ ರೀತಿ ದುರಂತಕ್ಕೆ ಹುನ್ನಾರ, ಮಾಹಿತಿ ಇದೆ: ಕಿಚ್ಚು ಹಚ್ಚಿದ ಬಿಕೆ ಹರಿಪ್ರಸಾದ್ ಹೇಳಿಕೆ
ರಾಮಮಂದಿರ ಉದ್ಘಾಟನೆಗೆ ಇನ್ನೂ 20 ದಿನ ಬಾಕಿ ಇದೆ. ಜನ ಸಂತೋಷದಲ್ಲಿದ್ದಾರೆ. ಇದನ್ನು ಕಾಂಗ್ರೆಸ್‌ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹರಿಪ್ರಸಾದ ಅವರ ಹೇಳಿಕೆ ನೋಡಿದರೆ ಇವರೇ ಗಲಭೆಗೆ ಪ್ಲಾನ್ ಮಾಡುತ್ತಿದ್ದಾರೆ ಎನ್ನುವ ಬಲವಾದ ಸಂಶಯ ಕಾಡುತ್ತದೆ. ಕೂಡಲೇ ಬಿ.ಕೆ. ಹರಿಪ್ರಸಾದ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ