ನಾಗಮಂಗಲ ಕೋಮುಗಲಭೆ ಪ್ರಕರಣ:  ಗೃಹಸಚಿವರ ಉಡಾಫೆ ಹೇಳಿಕೆಗೆ ಬಿಕೆ ಹರಿಪ್ರಸಾದ್ ಆಕ್ಷೇಪ

Published : Sep 12, 2024, 03:06 PM ISTUpdated : Sep 12, 2024, 03:37 PM IST
ನಾಗಮಂಗಲ ಕೋಮುಗಲಭೆ ಪ್ರಕರಣ:  ಗೃಹಸಚಿವರ ಉಡಾಫೆ ಹೇಳಿಕೆಗೆ ಬಿಕೆ ಹರಿಪ್ರಸಾದ್ ಆಕ್ಷೇಪ

ಸಾರಾಂಶ

ಕೋಮು ಗಲಭೆಗೆ ಮಂಡ್ಯ ಜನರು ಆಸ್ಪದ ನೀಡುತ್ತಿರಲಿಲ್ಲ. ಮಂಡ್ಯ ಜಿಲ್ಲೆಗೆ ಬಿಜೆಪಿ ಕಾಲಿಟ್ಟ ಬಳಿಕ ಕೋಮುಗಲಭೆ ಸೃಷ್ಟಿ ಮಾಡಲು ನಿರಂತರ ಪ್ರಯತ್ನ ಮಾಡುತ್ತಿದ್ದರು. ಈಗ ಯಶಸ್ವಿಯಾಗಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಆರೋಪಿಸಿದರು. 

ಬೆಂಗಳೂರು (ಸೆ.12): ಕೋಮು ಗಲಭೆಗೆ ಮಂಡ್ಯ ಜನರು ಆಸ್ಪದ ನೀಡುತ್ತಿರಲಿಲ್ಲ. ಮಂಡ್ಯ ಜಿಲ್ಲೆಗೆ ಬಿಜೆಪಿ ಕಾಲಿಟ್ಟ ಬಳಿಕ ಕೋಮುಗಲಭೆ ಸೃಷ್ಟಿ ಮಾಡಲು ನಿರಂತರ ಪ್ರಯತ್ನ ಮಾಡುತ್ತಿದ್ದರು. ಈಗ ಯಶಸ್ವಿಯಾಗಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಆರೋಪಿಸಿದರು. 

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಎಷ್ಟೇ ದೊಡ್ಡವರು ಆಗಿದ್ದರೂ, ಯಾವುದೇ ಪಕ್ಷದವರಾಗಿದ್ದರು ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಾನು ಒತ್ತಾಯ ಮಾಡುತ್ತೇನೆ. ಕಾನೂನು ಚೌಕಟ್ಟು ಮೀರಿ ಹೋದವರಿಗೆ ಕಾನೂನು ಬುದ್ಧಿ ಕಲಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ, ಸಿಎಂಗೆ ಒತ್ತಾಯ ಮಾಡುತ್ತೇನೆ ಎಂದರು.

ನಾಗಮಂಗಲ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ; ಇದೊಂದು ಆಕಸ್ಮಿಕ ಘಟನೆ ಎಂದ ಗೃಹ ಸಚಿವ!

ಸರ್ಕಾರಕ್ಕೂ ತುಷ್ಟೀಕರಣಕ್ಕೂ ಸಂಬಂಧವಿಲ್ಲ. ಈ ಘಟನೆ ಸರ್ಕಾರದ ವೈಫಲ್ಯ ಅಲ್ಲ, ಕೆಲ ಸಂಘಟನೆಗಳು ಕೋಮುಗಲಭೆ ಮಾಡಲು ಹುಟ್ಟಿಕೊಂಡಿವೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿವೆ. ಯಾವ ಕಾಲಕ್ಕೆ ಯಾವ ರೀತಿ ಬಣ್ಣ ಬದಲಾಯಿಸಬೇಕೆಂದು ಗೋಸುಂಬೆ ರೀತಿ ಬಣ್ಣ ಬದಲಾಯಿಸಿಕೊಂಡು ಮಾತನಾಡುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಟ್ವಿಟ್‌ ಉಲ್ಲೇಖಿಸಿ ತಿರುಗೇಟು ನೀಡಿದರು.

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: ಪೊಲೀಸ್, ಸರ್ಕಾರದ ವಿರುದ್ಧ ಮುತಾಲಿಕ್ ಕೆಂಡ!

ಗೃಹ ಸಚಿವ ಹೇಳಿಕೆಗೆ ಹೇಳಿಕೆ ಬಿಕೆ ಹರಿಪ್ರಸಾದ್ ಆಕ್ಷೇಪ

ಯಾವುದೇ ಕೋಮು ಗಲಭೆಯನ್ನ ಸಣ್ಣದು ಎಂದು ತೆಗೆದುಕೊಳ್ಳಬಾರದು. ಗಂಭೀರವಾಗಿ ತೆಗೆದುಕೊಂಡು ಕ್ರಮ ಜರುಗಿಸಬೇಕು. ಈ ಘಟನೆಯಲ್ಲಿ ಕಲ್ಲು ತೂರಿದವರು, ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಗೃಹಸಚಿವರಿಗೆ ಮನವಿ ಮಾಡುತ್ತೇನೆ. ಬಿಜೆಪಿ ಅವರಿಗೆ ರೋಟಿ, ಕಪಡಾ, ಮಕಾನ್, ಅನ್ನ, ಬಟ್ಟೆ, ಇರೋಕೆ ಸೂರು ಕೋಮು ಗಲಭೆಗಳೇ ಬೇಕು ಎಂದು ಹರಿಹಾಯ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ