ಪಿಎಸ್‌ಐ ಕೇಸಲ್ಲಿ ಆರಗ ಕೂಡ ಜೈಲಿಗೆ ಹೋಗ್ತಾರೆ: ಹರಿಪ್ರಸಾದ್‌

Published : Sep 13, 2022, 05:16 AM IST
ಪಿಎಸ್‌ಐ ಕೇಸಲ್ಲಿ ಆರಗ ಕೂಡ ಜೈಲಿಗೆ ಹೋಗ್ತಾರೆ: ಹರಿಪ್ರಸಾದ್‌

ಸಾರಾಂಶ

40 ಪರ್ಸೆಂಟ್‌ ಕಮಿಷನ್‌, ಪಿಎಸ್‌ಐ ನೇಮಕಾತಿ ಅಕ್ರಮದ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುತ್ತೇವೆ. ಪಿಎಸ್‌ಐ ಅಕ್ರಮದಲ್ಲಿ ಈಗಾಗಲೇ 46 ಮಂದಿ ಅಧಿಕಾರಿಗಳು ಜೈಲಿಗೆ ಹೋಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಜೈಲಿಗೆ ಹೋಗಲು ತಯಾರಿ ನಡೆಸಿದ್ದಾರೆ ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ. 

ಬೆಂಗಳೂರು (ಸೆ.13): 40 ಪರ್ಸೆಂಟ್‌ ಕಮಿಷನ್‌, ಪಿಎಸ್‌ಐ ನೇಮಕಾತಿ ಅಕ್ರಮದ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುತ್ತೇವೆ. ಪಿಎಸ್‌ಐ ಅಕ್ರಮದಲ್ಲಿ ಈಗಾಗಲೇ 46 ಮಂದಿ ಅಧಿಕಾರಿಗಳು ಜೈಲಿಗೆ ಹೋಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಜೈಲಿಗೆ ಹೋಗಲು ತಯಾರಿ ನಡೆಸಿದ್ದಾರೆ ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ. ಈ ಹಿಂದೆ ಸದನದಲ್ಲಿ ಪೊಲೀಸ್‌ ನೇಮಕಾತಿಯಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದರು. ನಂತರ ಹಿರಿಯ ಐಪಿಎಸ್‌ ಅಧಿಕಾರಿ ಬಂಧನ ಆಯಿತು. ತಾನು ತಪ್ಪಿಸಿಕೊಳ್ಳಲು ಐಪಿಎಸ್‌ ಅಧಿಕಾರಿಯನ್ನು ಬಲಿ ಕೊಟ್ಟರು. ಆದರೂ, ಪ್ರಕರಣ ಇನ್ನೂ ಮುಗಿದಿಲ್ಲ. 

ಪಿಎಸ್‌ಐ ಅಕ್ರಮಕ್ಕೆ ಸಂಬಂಧಿಸಿದಂತೆ 46 ಜನ ಅಧಿಕಾರಿಗಳು ಜೈಲಿಗೆ ಹೋಗಿದ್ದಾರೆ. ಈಗಾಗಲೇ ಆರಗ ಜ್ಞಾನೇಂದ್ರ ಅವರು ಪರಪ್ಪನ ಅಗ್ರಹಾರಕ್ಕೆ ಹೋಗಿ ಜೈಲು ಯಾವ ರೀತಿ ಇದೆ ಎಂದು ನೋಡಿಕೊಂಡು ಬಂದಿದ್ದಾರೆ ಎಂದು ಲೇವಡಿ ಮಾಡಿದರು. ಇನ್ನು ಮಳೆಗಾಲದ ಅಧಿವೇಶನದಲ್ಲಿ ಮಳೆ ಅನಾಹುತ, ಸರ್ಕಾರದ ವೈಫಲ್ಯ, ಜನರ ಕಷ್ಟಗಳ ಬಗ್ಗೆ ಸದನದಲ್ಲಿ ಮಾತನಾಡುತ್ತೇವೆ. ಇದಕ್ಕೆ ಅವಕಾಶವನ್ನೂ ಕೋರಿದ್ದೇವೆ. ರಾಜ್ಯ ಸರ್ಕಾರದ ಅನಾಚಾರದ ಬಗ್ಗೆ ದಾಖಲೆಗಳು ಬೇಕಾಗಿಲ್ಲ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎಂಬಂತೆ ಜನಸ್ಪಂದನ ಸಂದರ್ಭದಲ್ಲಿ ಶೋಕಾಚರಣೆ ಇದ್ದರೂ, ಜನರು ಮಳೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದರೂ ಮಂತ್ರಿಗಳು, ಶಾಸಕರು ಡ್ಯಾನ್ಸ್‌ ಮಾಡುತ್ತಾರೆ. ಇದು ವಿಕೃತಿಯ ನಡೆ, ಈ ವಿಕೃತ ಮನೋಭಾವದ ಬಿಜೆಪಿಗರನ್ನು ಜನರು ಧಿಕ್ಕರಿಸಲಿದ್ದಾರೆ ಎಂದು ಹೇಳಿದರು.

ಮನೆಗೆ ಬಂದ ಕಾಂಗ್ರೆಸ್‌ ನಾಯಕರಿಗೆ ಪ್ರವೀಣ್‌ ಬಂಧುಗಳಿಂದ ತರಾಟೆ

ಶಾಸಕ ದಢೇಸೂಗೂರು ಬಂಧನಕ್ಕೆ ಕಾಂಗ್ರೆಸ್‌ ಆಗ್ರಹ: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಪಿಎಸ್‌ಐ ಹಗರಣದ ಕುರಿತಂತೆ ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ದಢೇಸೂಗೂರು ಅವರನ್ನು ಕೂಡಲೆ ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದರು. ಇಲ್ಲಿನ ನವಲಿ ವೃತ್ತದಲ್ಲಿ ಸೇರಿದ ಕಾರಟಗಿ ನಗರ ಹಾಗೂ ಗ್ರಾಮೀಣ ಬ್ಲಾಕ್‌ ಯುವ ಕಾಂಗ್ರೆಸ್‌ ಸಮಿತಿ, ಎನ್‌ಎಸ್‌ಯುಐ ಕಾರ್ಯಕರ್ತರು ಪಟ್ಟಣದ ತಹಸೀಲ್ದಾರ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ವೇಳೆ ಮಾತನಾಡಿದ ಬ್ಲಾಕ್‌ ಅಧ್ಯಕ್ಷ ಶರಣೇಗೌಡ ಮಾಲಿಪಾಟೀಲ್‌, ಕುಷ್ಟಗಿ ತಾಲೂಕಿನ ಶಿರಗುಂಪಿ ಗ್ರಾಮದ ನಿವಾಸಿ ಹಾಗೂ ನಿವೃತ್ತ ಪೊಲೀಸ್‌ ಪೇದೆ ಪರಸಪ್ಪ ತಮ್ಮ ಮಗನಿಗೆ ಪಿಎಸ್‌ಐ ಉದ್ಯೋಗ ಕೊಡಿಸಲು ಶಾಸಕ ದಢೇಸೂಗೂರು ಅವರಿಗೆ .30 ಲಕ್ಷಕ್ಕೆ ಒಪ್ಪಿಸಿ ಮುಂಗಡವಾಗಿ .15 ಲಕ್ಷ ನೀಡಿದ್ದಾರೆ. ಉದ್ಯೋಗ ದೊರೆಯದಿದ್ದಾಗ ಪರಸಪ್ಪನವರು ಹಣ ಹಿಂತಿರುಗಿಸುವಂತೆ ಶಾಸಕರ ಬೆನ್ನು ಬಿದ್ದಿದ್ದಾರೆ. ಹಣ ನೀಡುವ ಬದಲಾಗಿ ಶಾಸಕರು ‘ಈ ಹಣವನ್ನು ಸರ್ಕಾರಕ್ಕೆ ನೀಡಿದ್ದೇನೆ’ ಎಂದು ಹೇಳಿದ್ದಲ್ಲದೇ ಅವರಿಗೆ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಸಹ ಹಾಕಿದ್ದಾರೆ. ಇಂಥ ಶಾಸಕ ಇಡೀ ಕನಕಗಿರಿ ಕ್ಷೇತ್ರಕ್ಕೆ ಕಳಂಕ ತಂದಿದ್ದಾರೆಂದು ತರಾಟೆ ತೆಗೆದುಕೊಂಡರು.

PSI Scam: ಬಂಧಿತ ಗಣಪತಿಗೂ ಆರಗಗೂ ಏನು ಸಂಬಂಧ?: ಹರಿಪ್ರಸಾದ್‌

ಕೆಪಿಸಿಸಿ ಸದಸ್ಯ ಬಸವರಾಜ ನೀರಗಂಟಿ ಮಾತನಾಡಿ, ಕಷ್ಟಪಟ್ಟು ಓದಿ ಹುದ್ದೆ ಪಡೆಯುವ ಬಡಮಕ್ಕಳ ಭವಿಷ್ಯದ ಕನಸಿಗೆ ಶಾಸಕ ದಢೇಸೂಗೂರು ಮತ್ತು ಬಿಜೆಪಿ ಸರ್ಕಾರ ಮೋಸ ಮಾಡಿದೆ. ಇದರಿಂದ ಶಾಸಕ ದಢೇಸೂಗೂರು ಸೇರಿದಂತೆ ಬಿಜೆಪಿ ಸರ್ಕಾರ ಪಿಎಸ್‌ಐ ಹಗರಣದಲ್ಲಿ ಭಾಗಿಯಾಗಿರುವುದ ಇದರಿಂದ ಸ್ಪಷ್ಟವಾಗುತ್ತಿದೆ ಎಂದರು. ಪುರಸಭೆ ಸದಸ್ಯರಾದ ಸೌಮ್ಯ ಕಂದಗಲ್‌ ಮತ್ತು ದೀಪಾ, ತಾಪಂ ಮಾಜಿ ಅಧ್ಯಕ್ಷ ಪ್ರಕಾಶ ಭಾವಿ, ಹಿರಿಯ ಮುಖಂಡ ಕೆ. ಕರಿಯಪ್ಪ ಮಾತನಾಡಿ, ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್‌ ಎಂ. ಬಸವರಾಜ ಅವರಿಗೆ ಸಲ್ಲಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್