
ಬೆಂಗಳೂರು (ಮೇ.3): ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ 50 ವರ್ಷಗಳ ರಾಜಕೀಯ ಪಯಣಕ್ಕೆ ಶುಭ ಕೋರಿದರು.
ಶನಿವಾರ ಬೆಳಗ್ಗೆ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಸಂತೋಷ್ ಅವರು ಉಪಹಾರ ಸೇವಿಸಿ ಇದೇ ತಿಂಗಳ 9ರಂದು ಚಿತ್ರದುರ್ಗದಲ್ಲಿ ನಡೆಯುತ್ತಿರುವ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶುಭ ಕೋರಿ ಪ್ರಸಕ್ತ ರಾಜಕಾರಣದ ಕುರಿತು ಚರ್ಚಿಸಿದರು.
ಇದನ್ನೂ ಓದಿ: BS Yadiyurappa: ಅವರ ಹೋರಾಟವೇ ಪ್ರತ್ಯೇಕ ಇತಿಹಾಸ; ಸಹೃದಯ ರಾಜಕಾರಣದ ಮೇರು ನಾಯಕ ಬಿಎಸ್‌ವೈ
ಈ ಬಗ್ಗೆ ಯಡಿಯೂರಪ್ಪ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತಾಪಿಸಿದ್ದು, ಆತ್ಮೀಯರಾದ ಬಿ.ಎಲ್.ಸಂತೋಷ್ ಅವರು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾಗಿ ಇಡೀ ದೇಶಾದ್ಯಂತ ಪಕ್ಷದ ಸಂಘಟನೆಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ನಮ್ಮ ಮನೆಗೆ ಸೌಹಾರ್ದಯುತ ಭೇಟಿ ನೀಡಿ ನನ್ನೊಂದಿಗೆ ಉಪಹಾರ ಸೇವಿಸಿದರು.
50 ವರ್ಷಗಳ ನನ್ನ ಯಶಸ್ವಿ ರಾಜಕೀಯ ಪಯಣದ ಕುರಿತು ಆತ್ಮೀಯವಾಗಿ ಶುಭಾಶಯ ಸಲ್ಲಿಸಿದರು. ಸಂತೋಷ್ ಜೀ ಅವರ ಸಂಘಟನಾ ಸಾಮರ್ಥ್ಯ-ಚತುರತೆ ಪ್ರತಿಯೊಬ್ಬ ಕಾರ್ಯಕರ್ತನಿಗೂ ಸ್ಪೂರ್ತಿಯ ಸೆಲೆಯಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ