
ಬೆಂಗಳೂರು (ಫೆ.8) : ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಡಬ್ಬಲ್ ಡೆಕ್ಕರ್ ಬಸ್‌ಗಳನ್ನು ಬೆಂಗಳೂರಿನ ರಸ್ತೆಗಿಳಿಸಲು ಸಿದ್ಧತೆ ನಡೆಸಿರುವ ಬಿಎಂಟಿಸಿ, 10 ಎಲೆಕ್ಟ್ರಿಕ್ ಡಬ್ಬಲ್ ಡೆಕ್ಕರ್ ಬಸ್‌ಗಳನ್ನು ಗ್ರಾಸ್ ಕಾಂಟ್ರ್ಯಾಂಕ್ಟ್ ಕ್ಯಾರೇಜ್ (ಜಿಸಿಸಿ) ಮಾದರಿಯಲ್ಲಿ ಪಡೆಯಲು ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಿದೆ.
ನಗರದಲ್ಲಿ ಡಬ್ಬಲ್ ಡೆಕ್ಕರ್ ಬಸ್ ಸೇವೆ ಆರಂಭಿಸುವುದಾಗಿ ಬಿಎಂಟಿಸಿ ಕಳೆದ ಕೆಲ ವರ್ಷಗಳ ಹಿಂದೆಯೇ ಘೋಷಿಸಿತ್ತು. ಆದರೆ, ಬಸ್ ಪೂರೈಕೆ ಸಂಸ್ಥೆ ಸಿಗದಿರುವುದು ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಈ ಬಸ್‌ಗಳನ್ನು ರಸ್ತೆಗಿಳಿಸಲು ಸಾಧ್ಯವಾಗಿರಲಿಲ್ಲ. ಇದೀಗ ಜಿಸಿಸಿ ಮಾದರಿಯಲ್ಲಿ 10 ಎಲೆಕ್ಟ್ರಿಕ್ ಬಸ್ ಪಡೆಯಲು ಮುಂದಾಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಬಿಎಂಟಿಸಿ ನಿಗದಿ ಮಾಡಿದ ದರಕ್ಕೆ ಬಸ್‌ಗಳನ್ನು ಬಾಡಿಗೆಗೆ ನೀಡುವ ಸಂಸ್ಥೆಗೆ ಬಸ್ ಪೂರೈಸಲು ಕಾರ್ಯಾದೇಶ ನೀಡಲಾಗುತ್ತದೆ. ಈ ಬಸ್‌ಗಳನ್ನು ರಾಷ್ಟ್ರೀಯ ಶುದ್ಧ ಗಾಳಿ ಯೋಜನೆ ಹಾಗೂ ನಗರ ಭೂಸಾರಿಗೆ ನಿರ್ದೇಶನಾಲಯದ ರಾಜ್ಯ ನಗರ ಸಾರಿಗೆ ನಿಧಿಯ ಅನುದಾನದಿಂದ ಪಡೆಯಲು ಬಿಎಂಟಿಸಿ(Bengaluru BMTC) ಮುಂದಾಗಿದೆ.
ಇತಿಹಾಸದ ಪುಟ ಸೇರಿದ ಮುಂಬೈ ಡಬ್ಬಲ್ ಡೆಕ್ಕರ್ ಬಸ್: ಕೆಂಪು ಸುಂದರಿಗೆ ಮುಂಬೈ ಜನರ ಭಾವುಕ ವಿದಾಯ
ಬಿಎಂಟಿಸಿ ಸಿದ್ಧಪಡಿಸಿರುವ ಯೋಜನೆಯಂತೆ ಪ್ರತಿದಿನ 150 ಕಿ.ಮೀ.ವರೆಗೆ ಸಂಚರಿಸುವ ಸಾಮರ್ಥ್ಯ ಹೊಂದಿರುವ ಬಸ್‌ಗಳನ್ನು ಮಾತ್ರ ಪಡೆಯಲಾಗುತ್ತದೆ. ಈ ಬಸ್‌ಗಳು ಮೆಜೆಸ್ಟಿಕ್‌ನ ಸುಭಾಷ್‌ನಗರ ಡಿಪೋದಿಂದಲೇ ಕಾರ್ಯಾಚರಣೆ ಮಾಡಲಾಗುತ್ತದೆ. ಈ ಬಸ್‌ಗಳು ಹೊರವರ್ತುಲ ರಸ್ತೆ ಸೇರಿದಂತೆ ಮರಗಳು, ಕೇಬಲ್‌ಗಳು ಅಡ್ಡ ಬರದಿರುವ ಮಾರ್ಗಗಳಲ್ಲಿ ಮಾತ್ರ ಸಂಚರಿಸಲಿವೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ