ನನಗೆ ಯಾರೂ ಲಂಚ ಕೊಡಬೇಕಿಲ್ಲ, ನಾನು ಭ್ರಷ್ಟಅಧಿಕಾರಿಯಾಗಲಾರೆ: ಸರ್ಕಾರಿ ಕಚೇರಿಗಳಲ್ಲಿ ಬೋರ್ಡ್‌ ಹಾಕಲು ಆದೇಶ

By Kannadaprabha NewsFirst Published Sep 26, 2022, 8:37 AM IST
Highlights
  • ಲಂಚ ವಿರುದ್ಧ ಸರ್ಕಾರಿ ಕಚೇರಿಗಳಲ್ಲಿ ಬೋರ್ಡ್‌
  • ನನಗೆ ಯಾರೂ ಲಂಚ ಕೊಡಬೇಕಿಲ್ಲ, ನಾನು ಭ್ರಷ್ಟಅಧಿಕಾರಿಯಾಗಲಾರೆ:ಫಲಕ ಅಳವಡಿಕೆ
  • ಅ.2ರಿಂದ 20ರವರೆಗೆ ನಾಮಫಲಕ
  • ಖಾಸಗಿ ಸಂಸ್ಥೆ ಮನವಿಯಂತೆ ಸಿಎಂ ಕಚೇರಿ ಆದೇಶ

ಬೆಂಗಳೂರು (ಸೆ.26) : ಖಾಸಗಿ ಸಂಸ್ಥೆಯೊಂದು ಭ್ರಷ್ಟಾಚಾರ ಮುಕ್ತ ಅಭಿಯಾನದ ಅಂಗವಾಗಿ ಅಕ್ಟೋಬರ್‌ 2ರಿಂದ 20ರವರೆಗೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ‘ನನಗೆ ಯಾರು ಲಂಚ ಕೊಡಬೇಕಿಲ್ಲ. ನಾನು ಭ್ರಷ್ಟಅಧಿಕಾರಿಯಾಗಲಾರೆ’ ಎಂಬ ನಾಮಫಲಕ ಅಳವಡಿಸಿಕೊಳ್ಳುವಂತೆ ಮನವಿ ಮಾಡಿದ್ದು, ಈ ಸಂಬಂಧ ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಅವರ ಕಚೇರಿಯು ಆಡಳಿತ ಮತ್ತು ಸುಧಾರಣಾ ಇಲಾಖೆಗೆ ಸೂಚನೆ ನೀಡಿದೆ.

ಬಿಜೆಪಿ ಲಿಂಗಾಯತ ವಿರೋಧಿ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಜಾತಿ ಬಣ್ಣ: ಸಿದ್ದು

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌ ಪ್ರಸಾದ್‌ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಟಿಪ್ಪಣಿ ಹೊರಡಿಸಿದ್ದು, ಸಿಟಿಜನ್‌ ಎನ್‌ಕ್ವೈರಿ ಕೌನ್ಸಿಲ… ಮತ್ತು ಸಿಇಸಿ ಟ್ರಸ್ವ್‌ ವತಿಯಿಂದ ಅ.2ರಿಂದ 20ರ ವರೆಗೆ ಭ್ರಷ್ಟಾಚಾರ ನಿರ್ಮೂಲನೆ ಅಭಿಯಾನ ಆಯೋಜಿಸಿದ್ದು ಈ ಅವಧಿಯಲ್ಲಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳಿಂದ ನನಗೆ ಯಾರು ಲಂಚ ಕೊಡಬೇಕಿಲ್ಲ. ನಾನು ಭ್ರಷ್ಟಅಧಿಕಾರಿಯಾಗಲಾರೆ ಎಂಬ ನಾಮಫಲಕ ಅಳವಡಿಸಲು ಆದೇಶ ಹೊರಡಿಸುವ ಮೂಲಕ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅಭಿಯಾನ ಯಶಸ್ವಿಗೊಳಿಸಲು ಮನವಿ ಮಾಡಿದೆ. ಈ ಮನವಿ ಪತ್ರವು ಸ್ವಯಂವೇದ್ಯವಾಗಿದ್ದು ಅದರಂತೆ ಮುಂದಿನ ಅಗತ್ಯ ಕ್ರಮ ವಹಿಸಬೇಕೆಂದು ಸೂಚಿಸಿದ್ದಾರೆ.

ಕಾಮನ್‌ ಮ್ಯಾನ್‌ ಸಿಎಂಗೆ ನಮ್ಮ ಬೆಂಬಲ:

ಕಾಂಗ್ರೆಸ್‌ ಪಕ್ಷ ರಾಜ್ಯಾದ್ಯಂತ ನಡೆಸುತ್ತಿರುವ ‘ಪೇ ಸಿಎಂ’ ಪೋಸ್ಟರ್‌ ಅಭಿಯಾನಕ್ಕೆ ಪ್ರತಿಯಾಗಿ ಇದೀಗ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚದಿಂದ ಮುಖ್ಯಮಂತ್ರಿಯನ್ನು ಬೆಂಬಲಿಸುವ ಪೋಸ್ಟರ್‌ ಅಭಿಯಾನ ಆರಂಭವಾಗಿದೆ. ‘ಜನಸಾಮಾನ್ಯರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಮ್ಮ ಬೆಂಬಲ’ ಎಂಬ ಬರಹವುಳ್ಳ ಪೋಸ್ಟರ್‌ ಅನ್ನು ಭಾನುವಾರ ಉಡುಪಿ ನಗರದೆಲ್ಲೆಡೆ ಹಚ್ಚಲಾಗಿದೆ. ಕಾಂಗ್ರೆಸ್ಸಿಗರು ಆಲಿಬಾಬಾ ಚಾಲೀಸ್ ಪರ್ ಚಾರ್ ಚೋರ್‌ಗಳಿದ್ದಂತೆ: ಸಚಿವ ಶ್ರೀರಾಮುಲು ವ್ಯಂಗ್ಯ

ಕಾಂಗ್ರೆಸ್‌ ಆರಂಭಿಸಿರುವ ಪೋಸ್ಟರ್‌ ವಾರ್‌ಗೆ ಪ್ರತಿಯಾಗಿ ಮುಖ್ಯಮಂತ್ರಿ ಬೆಂಬಲಿಸುವ ಪೋಸ್ಟರ್‌ಗಳನ್ನು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಕ್ಲಾಕ್‌ ಟವರ್‌ ಬಳಿ ಪ್ರದರ್ಶಿಸಿದರು. ಬಳಿಕ ನಗರದ ವಿವಿಧೆಡೆ ಈ ಪೋಸ್ಟರ್‌ಗಳನ್ನು ಹಚ್ಚುವ ಮೂಲಕ ಕಾಂಗ್ರೆಸ್‌ ಅಭಿಯಾನಕ್ಕೆ ಠಕ್ಕರ್‌ ನೀಡಿ, ಮುಖ್ಯಮಂತ್ರಿಗೆ ಬೆಂಬಲ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಈ ಪೋಸ್ಟರ್‌ ಅಭಿಯಾನವನ್ನು ಜಿಲ್ಲಾದ್ಯಂತ ವಿಸ್ತರಿಸುವುದಾಗಿ ಇದೇ ವೇಳೆ ಘೋಷಿಸಿದರು.ಈ ಸಂದರ್ಭ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶರತ್‌ ಶೆಟ್ಟಿಉಪ್ಪುಂದ ಇತರರು ಇದ್ದರು.

click me!