ಬೆಂಗಳೂರು, ಬೆಳಗಾವಿ ಏರ್ಪೋರ್ಟ್‌ಗೆ ಬಾಂಬ್‌ ಬೆದರಿಕೆ

Published : Oct 21, 2024, 11:17 AM IST
ಬೆಂಗಳೂರು, ಬೆಳಗಾವಿ ಏರ್ಪೋರ್ಟ್‌ಗೆ ಬಾಂಬ್‌ ಬೆದರಿಕೆ

ಸಾರಾಂಶ

ದೇಶದ ಇತರೆಡೆಯಂತೆ ರಾಜ್ಯದ ಬೆಂಗಳೂರು ಮತ್ತು ಬೆಳಗಾವಿಯ ವಿಮಾನ ನಿಲ್ದಾಣಗಳಿಗೂ ಕೆಲ ಕಿಡಿಗೇಡಿಗಳು ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದು, ಇದೊಂದು ಹುಸಿ ಬಾಂಬ್‌ ಬೆದರಿಕೆ ಸಂದೇಶ ಎಂಬುದು ನಂತರ ಖಚಿತವಾಗಿದೆ.   

ಬೆಂಗಳೂರು/ಬೆಳಗಾವಿ (ಅ.21): ದೇಶದ ಇತರೆಡೆಯಂತೆ ರಾಜ್ಯದ ಬೆಂಗಳೂರು ಮತ್ತು ಬೆಳಗಾವಿಯ ವಿಮಾನ ನಿಲ್ದಾಣಗಳಿಗೂ ಕೆಲ ಕಿಡಿಗೇಡಿಗಳು ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದು, ಇದೊಂದು ಹುಸಿ ಬಾಂಬ್‌ ಬೆದರಿಕೆ ಸಂದೇಶ ಎಂಬುದು ನಂತರ ಖಚಿತವಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ವಿಮಾನ ನಿಲ್ದಾಣದ ಕಮಾಂಡ್‌ ಸೆಂಟರ್‌ಗೆ ಅನಾಮಧೇಯ ಎಕ್ಸ್‌ ಖಾತೆಯಿಂದ ಬಾಂಬ್‌ ಬೆದರಿಕೆ ಸಂದೇಶ ಬಂದಿದ್ದರೆ, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಇದರಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಎರಡೂ ವಿಮಾನ ನಿಲ್ದಾಣಗಳಿಗೆ ಬಿಗಿ ಬಂದೋಬಸ್ತ್‌ ಕಲ್ಪಿಸಲಾಗಿದೆ.

ಬಾಂಬರ್‌ಗಳಿದ್ದಾರೆಂದು ಸಂದೇಶ: ಕೆಐಎ ವಿಮಾನ ನಿಲ್ದಾಣದ ಕಮಾಂಡ್‌ ಸೆಂಟರ್‌ಗೆ ಅನಾಮಧೇಯ ಎಕ್ಸ್‌ ಖಾತೆಯಿಂದ ಇಂಡಿಗೋ ಏರ್‌ಲೈನ್ಸ್‌ನ IX 233, IX 375, IX 481, IX 383, IX 549, IX 399 ವಿಮಾನಗಳಲ್ಲಿ ತಲಾ ಇಬ್ಬರಂತೆ 12 ಮಂದಿ ಬಾಂಬರ್‌ಗಳಿರುವುದಾಗಿ ಬೆದರಿಕೆ ಸಂದೇಶಗಳಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬೆದರಿಕೆ ಸಂದೇಶದ ಬೆನ್ನಲ್ಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಕಳೆದೊಂದು ವಾರದಲ್ಲಿ ಕೆಐಎ ವಿಮಾನ ನಿಲ್ದಾಣಕ್ಕೆ 2ನೇ ಬಾರಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಭಾನುವಾರ ಬಂದಿರುವ ಬಾಂಬ್‌ ಬೆದರಿಕೆ ಸಂದೇಶ ಸಂಬಂಧ ಸದ್ಯ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದೇಶದಾದ್ಯಂತ ಒಂದೇ ದಿನ 30 ವಿಮಾನಗಳಿಗೆ ಬಾಂಬ್‌ ಬೆದರಿಕೆ ಸಂದೇಶ!

ಸ್ಫೋಟಿಸುವ ಬೆದರಿಕೆ: ಇನ್ನು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇ-ಮೇಲ್‌ಗೆ ವಿಮಾನ ನಿಲ್ದಾಣ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದೊಂದಿಗೆ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ಸಂಬಂಧ ಮಾಹಿತಿ ನೀಡಿರುವ ಡಿಸಿಪಿ ರೋಹನ್​ ಜಗದೀಶ್​, ಬೆದರಿಕೆ ಇ-ಮೇಲ್‌ಗೆ ಸಂಬಂಧಿಸಿ ತಪಾಸಣೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು, ರಾಸಾಯನಿಕ ಪದಾರ್ಥಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಸಂದೇಶವಾಗಿದ್ದು, ಇದರ ಮೂಲ ಪತ್ತೆಗೆ ಜಾಲ ಬೀಸಿದ್ದೇವೆ. ಹಾಗಾಗಿ, ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡ್ರಗ್ಸ್‌ ಆರ್ಭಟಕ್ಕೆ ಮದ್ಯ ಮಾರಾಟವೇ ಕುಸಿತ!
ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌: ಸಿಎಂ ಬಗ್ಗೆ ಸಚಿವ ಬೈರತಿ ಸುರೇಶ್ ಗುಣಗಾನ