
ಆನೇಕಲ್: ಖಾಸಗಿ ಆಸ್ಪತ್ರೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕಳಿಸಿದ ಘಟನೆ ನೆರೆಯ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. ಆಸ್ಪತ್ರೆ ಸಿಬ್ಬಂದಿ ಕೂಡಲೇ ಒಳ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಕಳುಹಿಸಿ ಸಮೀಪದ ಸಿಪ್‌ಕಾಟ್ ಪೊಲೀಸ್ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ಧಾವಿಸಿ ಬಂದ ಪೊಲೀಸರು ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಿ ಕ್ರಮ ವಹಿಸಿದ್ದರು. ಸತತ 3 ಗಂಟೆಗಳ ತಪಾಸಣೆ ನಂತರ ಯಾವುದೇ ಅಪಾಯಕಾರಿ ವಸ್ತು ಇಲ್ಲವೆಂದು ತಿಳಿಸಿದ್ದಾರೆ.
ಬೆಂಗಳೂರು ಕದಂಬ ಹೋಟೆಲ್‌ಗೆ ಬಾಂಬ್ ಬೆದರಿಕೆ ; ರಾಮೇಶ್ವರಂ ಕೆಫೆಗೂ ಬಾಂಬ್ ಇಟ್ಟಿದ್ದು ನಾನೇ ಎಂದ ಅನಾಮಿಕ!
ಹೊಸೂರಿನ ಮಾರುತಿ ನಗರದಲ್ಲಿ ಮಿತ್ರ ಲೀಲಾ(Mitra leela hospital) ಎಂಬ ಖಾಸಗಿ ಮಕ್ಕಳ ಆಸ್ಪತ್ರೆಯಿದ್ದು ಡಿಎಂಕೆ ಪಕ್ಷದ ನವೀನ್ ಕುಮಾರ್(DMK party Naveen kumar ) ಒಡೆತನದ್ದಾಗಿದೆ. ಮಂಗಳವಾರ ಬೆಳಗ್ಗೆ 11.30ಕ್ಕೆ ಆಸ್ಪತ್ರೆಯ ಇ-ಮೇಲ್ ಐಡಿಗೆ ಬೆದರಿಕೆ ಬಂದಿದ್ದು, ಆಸ್ಪತ್ರೆಯಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳಿವೆ. ಅದು ಯಾವುದೇ ನಿಮಿಷದಲ್ಲಿ ಸ್ಫೋಟಗೊಳ್ಳುತ್ತದೆ ಎಂದು ಇ-ಮೇಲ್‌ನಲ್ಲಿ ಬರೆದಿದ್ದರು.
ಮಹದೇವ ಬೆಟ್ಟಿಂಗ್ ಆಪ್ ಹಗರಣ : ಎಕ್ಸ್‌ಕ್ಯೂಸ್ ಮಿ ನಟ ಸಾಹಿಲ್ ಖಾನ್ ಬಂಧನ
ಇನ್‌ಸ್ಪೆಕ್ಟರ್ ಪ್ರಕಾಶ್ ಮತ್ತು ಪೊಲೀಸರ ತಂಡ ಆಸ್ಪತ್ರೆ ಆವರಣದಲ್ಲಿ ಶೋಧ ಮುಂದುವರಿಸಿದ್ದಾರೆ. ಇದೇ ಮಾದರಿಯ ಇ-ಮೇಲ್ ದೇಶದ 64 ಆಸ್ಪತ್ರೆಗಳಿಗೆ ಹೋಗಿದ್ದು, ಗಂಭೀರವಾಗಿ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಹಾಗೂ ಉನ್ನತ ಅಧಿಕಾರಿಗಳು ಭೇಟಿ ನೀಡಿದ್ದರು.
ಬಾಂಬ್ ಸ್ಫೋಟ ಸುದ್ದಿ ಕೆಲ ಕಾಲ ಹೊಸೂರು ಪಟ್ಟಣವನ್ನೇ ಭಯ ಭೀತಗೊಳಿಸಿತ್ತು. ನಗರದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು ಎಂದು ಪೊಲೀಸ್ ವರಿಷ್ಠ ಅಧಿಕಾರಿ ಬಾಬು ಪ್ರಶಾಂತ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ