ಬಿಪಿಎಲ್‌ ಕಾರ್ಡ್‌ದಾರರಿಗೆ ಸಂತಸದ ಸುದ್ದಿ ನೀಡಿದ ಸಿದ್ದು ಸರ್ಕಾರ..!

Published : Aug 27, 2023, 04:42 AM IST
ಬಿಪಿಎಲ್‌ ಕಾರ್ಡ್‌ದಾರರಿಗೆ ಸಂತಸದ ಸುದ್ದಿ ನೀಡಿದ ಸಿದ್ದು ಸರ್ಕಾರ..!

ಸಾರಾಂಶ

ಬಿಪಿಎಲ್‌ ಕಾರ್ಡ್‌ ಹೊಂದಿರುವವರಲ್ಲೂ ಕೆಲವರು ಸಣ್ಣ ಕಾರು ಇಟ್ಟುಕೊಂಡಿರುತ್ತಾರೆ. ಇದು ನಮ್ಮ ಗಮನಕ್ಕೂ ಬಂದಿದೆ. ಕಾರು ಇಟ್ಟುಕೊಂಡವರ ಕುಟುಂಬದ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸಬೇಕೇ, ಬೇಡವೇ ಎಂಬ ಕುರಿತು ಚರ್ಚೆ ನಡೆಯುತ್ತಿದೆಯಷ್ಟೆ. ಸದ್ಯಕ್ಕೆ ಕಾರು ಇಲ್ಲದವರ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲ್ಲ: ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ 

ಹಾಸನ(ಆ.27):  ಸಣ್ಣ ಕಾರು ಹೊಂದಿರುವವರ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಪಿಎಲ್‌ ಕಾರ್ಡ್‌ ಹೊಂದಿರುವವರಲ್ಲೂ ಕೆಲವರು ಸಣ್ಣ ಕಾರು ಇಟ್ಟುಕೊಂಡಿರುತ್ತಾರೆ. ಇದು ನಮ್ಮ ಗಮನಕ್ಕೂ ಬಂದಿದೆ. ಕಾರು ಇಟ್ಟುಕೊಂಡವರ ಕುಟುಂಬದ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸಬೇಕೇ, ಬೇಡವೇ ಎಂಬ ಕುರಿತು ಚರ್ಚೆ ನಡೆಯುತ್ತಿದೆಯಷ್ಟೆ. ಸದ್ಯಕ್ಕೆ ಕಾರು ಇಲ್ಲದವರ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲ್ಲ. ಕಾರು ಇದ್ದೂ ಅರ್ಹತೆ ಇದ್ದಗೆ ಬಿಪಿಎಲ್‌ ಕಾರ್ಡ್‌ ನೀಡುವ ಕುರಿತು ಪರಿಶೀಲಿಸಲಾಗುವುದು. ಈವರೆಗೆ ನಾವು ಯಾರ ಬಿಪಿಎಲ್‌ ಕಾರ್ಡ್‌ ಅನ್ನೂ ರದ್ದು ಮಾಡಿಲ್ಲ. ಕೆಲವರ ಕಾರ್ಡ್‌ ರದ್ದು ಮಾಡಬೇಕೆಂಬುದು ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವಷ್ಟೆಎಂದು ಸ್ಪಷ್ಟಪಡಿಸಿದರು.

ಯಾರು ಬಿಪಿಎಲ್‌, ಯಾರು ಎಪಿಎಲ್‌ ಅಡಿ ಬರುತ್ತಾರೆ ಎಂಬುದನ್ನು ನೋಡಿಕೊಂಡು ಅವರಿಗೆ ಸೂಕ್ತ ಕಾರ್ಡ್‌ ನೀಡಲಾಗುವುದು. ಪರಿಷ್ಕರಣೆ ನಂತರವಷ್ಟೇ ನಾವು ಸ್ಪಷ್ಟತೀರ್ಮಾನಕ್ಕೆ ಬರುತ್ತೇವೆ. ಯಾರಿಗೆ ಅರ್ಹತೆ ಇದೆಯೋ ಅವರಿಗೆ ತೊಂದರೆ ಆಗಲ್ಲ. ಸದ್ಯಕ್ಕೆ ಯಾವುದೇ ಕಾರ್ಡ್‌ ರದ್ದು ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು.

BPL ಕಾರ್ಡ್‌ದಾರರಿಗೆ ಮತ್ತೊಂದು ಶಾಕ್: ಸರ್ಕಾರದಿಂದ ಸರ್ವೆ ಆರಂಭ !

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಕಾರ್ಡ್‌ ಅರ್ಜಿ ವಿಲೇವಾರಿ ಬಾಕಿ ಇದೆ. ಈಗಾಗಲೇ ಅರ್ಜಿ ಹಾಕಿರುವವರಲ್ಲಿ ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ನೀಡುತ್ತೇವೆ ಎಂದು ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ ಹತ್ತು ಕೆ.ಜಿ ಕೊಡುತ್ತೇವೆ ಎಂದು ನಾವು ಹೇಳಿದ್ದೇವೆ. ಅಕ್ಕಿಗಾಗಿ ಆಂಧ್ರ ಮತ್ತು ತೆಲಂಗಾಣ ರಾಜ್ಯಕ್ಕೆ ಹೋಗಿ ಬಂದಿದ್ದೇನೆ. ಅಕ್ಕಿಯ ದರದ ವಿಚಾರದಲ್ಲಿ ಚರ್ಚೆ ನಡೆಯುತ್ತಿದೆ. ನಾವು ಕೊಟ್ಟಭರವಸೆ ಈಡೇರಿಸುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್