
ಬೆಂಗಳೂರು (ನ.15) : ಅಪ್ರತಿಮ ಸಾಹಸ ತೋರಿದ ಐವರು ಮಕ್ಕಳಿಗೆ 2022-23ನೇ ಸಾಲಿನ ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಬೆಂಗಳೂರಿನ ಕಬ್ಬನ್ ಉದ್ಯಾನದಲ್ಲಿರುವ ಜವಾಹರ ಬಾಲಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜವಾಹರ ಬಾಲಭವನ ಸೊಸೈಟಿ ಆಯೋಜಿಸಿದ್ದ ‘ಮಕ್ಕಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು. ಪ್ರಶಸ್ತಿಯು .10 ಸಾವಿರ ನಗದು, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ಒಳಗೊಂಡಿದೆ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್, ಸಂವಿಧಾನಾತ್ಮಕವಾಗಿ ಕೊಡಲಾಗಿರುವ ಮೂಲಭೂತ ಹಕ್ಕುಗಳು ದೇಶದ ಪ್ರತಿಯೊಂದು ಮಗುವಿಗೂ ಸಿಗುವಂತಾಗಬೇಕು. ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದರು.
ಒಂದು ತಿಂಗಳಲ್ಲಿ 20 ಸಾವಿರ ಮನೆ ನಿರ್ಮಾಣ: ಸಿಎಂ ಬೊಮ್ಮಾಯಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಮಾತನಾಡಿ, ಮಕ್ಕಳಿಗೆ ಪೌಷ್ಟಿಕ ಆಹಾರ, ಶಿಕ್ಷಣ ಒದಗಿಸುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣದ ಗುರಿ ಹೊಂದಲಾಗಿದೆ. ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಿಂದ ಮಕ್ಕಳು ಹಾಗೂ ಮಹಿಳೆಯರಿಗೆ ಸಹಾಯಕವಾಗಿದೆ. ಹೆಣ್ಣು ಮಗುವಿನ ಉಳಿವು ಮತ್ತು ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಬಜೆಟ್‌ನಲ್ಲಿ ಘೋಷಿಸಿದಂತೆ ಮುಂದಿನ ದಿನಗಳಲ್ಲಿ 4,266 ಅಂಗನವಾಡಿಗಳನ್ನು ನಿರ್ಮಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಸಂಸದ ಲೆಹರ್ ಸಿಂಗ್ ಸಿರೋಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ ಎನ್.ಮಂಜುಳಾ, ನಿರ್ದೇಶಕಿ ಡಾ ಕೆ.ಎನ್.ಅನುರಾಧಾ ಉಪಸ್ಥಿತರಿದ್ದರು.
ಪ್ರತಿಭಾ ಪುರಸ್ಕಾರ: 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಬಾಲಮಂದಿರದ ವಿದ್ಯಾರ್ಥಿಗಳಾದ ಜೆ.ಜೆ.ಶ್ರುತಿ ಮತ್ತು ಗಂಗೋತ್ರಿ (ದ್ವಿತೀಯ ಪಿಯು) ಹಾಗೂ ಪ್ರೀತಿ ಘಾಟೆ, ಕೆ.ಆರ್.ರಾಧಿಕಾ, ಆರ್.ನಿರ್ಮಲಾ (ಎಸ್ಸೆಸ್ಸೆಲ್ಸಿ) ಅವರಿಗೆ ಪ್ರತಿಭಾ ಪುರಸ್ಕಾರ ಪತ್ರ ವಿತರಿಸಲಾಯಿತು.
ಮಕ್ಕಳ ಕಲ್ಯಾಣಕ್ಕೆ ಶ್ರಮಿಸಿದವರಿಗೆ ಪ್ರಶಸ್ತಿ:
ಸಂಸ್ಥೆಗಳು: ಕಲಾ ಚೈತನ್ಯ ಸೇವಾ ಸಂಸ್ಥೆ (ಚಿತ್ರದುರ್ಗ), ತವರು ಚಾರಿಟಬಲ್ ಟ್ರಸ್ಟ್ (ಹಾಸನ), ಸ್ಪಂದನ ವಿಶೇಷ ದತ್ತು ಸ್ವೀಕಾರ ಕೇಂದ್ರ(ಹಾವೇರಿ), ಇನ್ನರ್ ವ್ಹೀಲ್ ಕ್ಲಬ್ ಸ್ವಯಂ ಸೇವಾ ಸಂಸ್ಥೆ(ಕೊಪ್ಪಳ)
Connect Karnataka Expo: ಕನೆಕ್ಟ್ ಕರ್ನಾಟಕಕ್ಕೆ ಅಭೂತಪೂರ್ವ ಪ್ರತಿಕ್ರಿಯೆ
ವ್ಯಕ್ತಿಗಳು:
ಯಾರಿಗೆ ಪ್ರಶಸ್ತಿ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ