ಐವಿ ದ್ರಾವಣದಿಂದಲೇ ಸಾವು ಸಂಭವಿಸಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಈ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಈ ಕೈಗೊಳ್ಳಲಾಗಿದೆ. ಅನಾಹುತಕ್ಕೆ ದ್ರಾವಣ ಕಾರಣವೇ ಎಂಬ ಬಗ್ಗೆ ಅನರೋಬಿಕ್ ಟೆಸ್ಟ್ ವರದಿ ಬಳಿಕ ಸ್ಪಷ್ಟತೆ ಸಿಗಲಿದೆ. ಮುಂದಿನ ವಾರ ವರದಿ ಬರಬಹುದು ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು(ಡಿ.01): ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ ಸಂಭವಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ರಾಜ್ಯಾ ದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ರಿಂಗರ್‌ಲ್ಯಾಕ್ಟೇಟ್ ಐವಿ ದ್ರಾವಣ (ಗ್ಲುಕೋಸ್) ಬಳಕೆಯನ್ನು ತಡೆ ಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐವಿ ದ್ರಾವಣದಿಂದಲೇ ಸಾವು ಸಂಭವಿಸಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಈ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಈ ಕೈಗೊಳ್ಳಲಾಗಿದೆ. ಅನಾಹುತಕ್ಕೆ ದ್ರಾವಣ ಕಾರಣವೇ ಎಂಬ ಬಗ್ಗೆ ಅನರೋಬಿಕ್ ಟೆಸ್ಟ್ ವರದಿ ಬಳಿಕ ಸ್ಪಷ್ಟತೆ ಸಿಗಲಿದೆ. ಮುಂದಿನ ವಾರ ವರದಿ ಬರಬಹುದು ಎಂದರು.
undefined
ರಿಂಗರ್‌ಲ್ಯಾಕ್ಟೇಟ್ ಗ್ಲುಕೋಸ್ ಅನ್ನು ಈ ಹಿಂದಿನಿಂದಲೂ ಆಸ್ಪತ್ರೆಗಳಲ್ಲಿ ಬಳಕೆ ಮಾಡಲಾಗುತ್ತಿತ್ತು. ಎಂದಿನಂತೆ ಬಾರಿಯೂ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್‌ಗಳಲ್ಲಿ ಐವಿ ದ್ರಾವಣ ಪೂರೈಕೆಯಾಗಿತ್ತು. ಇದರ ಬಳಕೆ ಸಂದರ್ಭದಲ್ಲಿ ಎರಡು ಬ್ಯಾಚ್ ಗಳ ಬಗ್ಗೆ ಕೆಲವು ಅನುಮಾನಗಳು ವ್ಯಕ್ತವಾದಾಗ ಮುಂಜಾಗ್ರತೆ ದೃಷ್ಟಿಯಿಂದ ಸಂಪೂರ್ಣವಾಗಿ ಎಲ್ಲ 192 ಬ್ಯಾಚ್‌ಗಳ ದ್ರಾವಣವನ್ನು ಆಸ್ಪತ್ರೆಗಳಲ್ಲಿ ಬಳಸದಂತೆ ತಡೆಹಿಡಿಯಲಾಗಿತ್ತು ಎಂದರು.
ಆದರೂ ಘಟನೆ ಹೇಗೆ ನಡೆಯಿತು ಎಂಬ ಪ್ರಶ್ನೆಗೆ, ಆ ಬಳಿಕ ಕಂಪನಿಯವರು ಹೈಕೋಟ್ ಕ್ರಮರ್ ನಿಂದ ಆದೇಶ ಪಡೆದ ಹಿನ್ನೆಲೆ ಡ್ರಗ್ ಲ್ಯಾಬೋರೇಟರಿಯಲ್ಲಿ ಪರೀಕ್ಷೆ ನಡೆಸಲಾಯಿತು. ಈ ವೇಳೆ ದ್ರಾವಣ ಬಳಸಬಹುದು ಎಂಬ ವರದಿ ಬಂತು. ಸಿ.ಡಿ.ಎಲ್. ವರದಿ ಆಧಾರದ ಮೇಲೆ ರಾಜ್ಯದಲ್ಲಿ ತಜ್ಞರ ತಾಂತ್ರಿಕ ಸಮಿತಿ ರಚಿಸಿ ಮತ್ತೊಮ್ಮೆ ಪರೀಕ್ಷಿಸಿ ಸ್ಟಾಂಡರ್ಡ್ ಕ್ವಾಲಿಟಿಯ ಕೆಲವು ಬ್ಯಾಚ್‌ಗಳ ದ್ರಾವಣವನ್ನು ಬಳಸಲು ಅವಕಾಶ ಮಾಡಿಕೊಡಲಾಗಿತ್ತು. ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ದ್ರಾವಣದ ಬಳಕೆಯಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಈ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ತಿಮ ವರದಿ ಬಳಿಕವಷ ಖ ಹೀಗಾಗಿ ಅಂತಿಮ ವರದಿ ಬಳಿಕವಷ್ಟೇ ಖಚಿತ ಮಾಹಿತಿ ತಿಳಿಯಲಿದೆ ಎಂದು ಹೇಳಿದರು.
ಅನರೋಬಿಕ್ ಟೆಸ್ಟ್‌ನಲ್ಲಿ ಸ್ಪಷ್ಟತೆ:
ಬಳ್ಳಾರಿ ಆಸ್ಪತ್ರೆಗೆ ಪೂರೈಕೆಯಾದ ಬ್ಯಾಚ್‌ಗಳನ್ನು ಅನರೋಬಿಕ್ ಟೆಸ್ಟ್‌ಗೆ ಕಳುಹಿಸಲಾಗಿದೆ. ಬಾಣಂತಿಯರ ಸಾವಿಗೆ ಐವಿ ದ್ರಾವಣವೂ ಒಂದು ಕಾರಣವಾಗಿರಬಹುದಾ ಅಥವಾ ಇಲ್ಲವಾ? ಎಂಬುದರ ಬಗ್ಗೆ ಆನರೋಬಿಕ್ ಪರೀಕ್ಷೆಯಲ್ಲಿ ಸ್ಪಷ್ಟತೆ ಸಿಗಲಿದೆ. ಬಳಿಕ ಐವಿ ದ್ರಾವಣ ಬಳಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಮುಂಜಾಗ್ರತ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನು ರಾಜ್ಯಾದ್ಯಂತ ತಡೆ ಹಿಡಿಯಲಾಗಿದೆ ನೀಡಿದರು.
ಬಾಣಂತಿಯರ ಸಾವು: ವರದಿ ಕೇಳಿದ ಉಪಲೋಕಾಯುಕ್ತ
ಬೆಂಗಳೂರು: ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾಸಂಸ್ಥೆಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೋ ಪ್ರಕರಣ ದಾಖಲಿಸಿಕೊಂಡಿರುವ ಉಪ ಲೋಕಾಯುಕ್ತ ನ್ಯಾ.ಜಿ. ವೀರಪ್ಪ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಂಗಳಲ್ಲಿ ವರದಿ ಸಲ್ಲಿಸಲು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
ಇದೇ ವೇಳೆ ಬಳ್ಳಾರಿ ಡೀಸಿ, ಸಿಇಒ ಅವರಿಗೂ ಸಹ ವರದಿ ನೀಡುವಂತೆ ಸೂಚಿಸಿದ್ದಾರೆ. ಮಾಧ್ಯಮಗಳಲ್ಲಿ ಬಾಣಂತಿಯರ ಸಾವು ಪ್ರಕರಣ ಬಿತ್ತರಗೊಂಡ ಬಳಿಕ ತಕ್ಷಣವೇ ಕಾರ್ಯೋ ನ್ನುಖರಾದ ನ್ಯಾ.ಬಿ.ವೀರಪ್ಪ ಅವರು ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಅವರಿಗೆ ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ನೀಡುವಂತೆ ಸೂಚನೆ ನೀಡಿದರು.
ಉಪಲೋಕಾಯುಕ್ತರ ಸೂಚನೆ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸ್ ಅಧಿಕಾರಿಗಳು ಘಟನೆಯ ಕುರಿತು ಪ್ರಾಥಮಿಕ ವರದಿ ವರದಿಯನ್ನು ಪಡೆದುಕೊಂಡರು. ನಂತರ ನ್ಯಾ.ಬಿ.ವೀರಪ್ಪ ಅವರಿಗೆ ಮಾಹಿತಿ ನೀಡಿದರು. ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತಿಂಗಳಲ್ಲಿ ಪ್ರಕರಣದ ದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ವರದಿ ನೀಡುವಂತೆ ಸೂಚಿಸಿದ್ದಾರೆ.