ಬಜೆಟ್‌, ಚುನಾವಣೆ ಹಿನ್ನೆಲೆ: ವರ್ಗಾವಣೆ ಸ್ಥಗಿತ, ಸಿಎಂ ಬೊಮ್ಮಾಯಿ

By Kannadaprabha News  |  First Published Jan 24, 2023, 6:28 AM IST

ಸಾರ್ವತ್ರಿಕ ವಿಧಾನಸಭೆ ಚುನಾವಣೆಯು ಸಹ ಎದುರಾಗುತ್ತಿದೆ. ಇಂತಹ ಸಮಯದಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕಾಗಿ ವರ್ಗಾವಣೆ ಪ್ರಸ್ತಾವನೆಗಳು ಸಲ್ಲಿಕೆಯಾದರೆ ಅದಕ್ಕೆ ಹಿನ್ನಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ವರ್ಗಾವಣೆ ಅಥವಾ ನಿಯೋಜನೆ ಪ್ರಸ್ತಾವನೆಗಳನ್ನು ಸಲ್ಲಿಕೆ ಮಾಡಬಾರದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 


ಬೆಂಗಳೂರು(ಜ.24): ಸಾರ್ವತ್ರಿಕ ವಿಧಾನಸಭೆ ಚುನಾವಣೆ ಮತ್ತು ಬಜೆಟ್‌ ಅಧಿವೇಶನ ಇರುವ ಹಿನ್ನೆಲೆಯಲ್ಲಿ ಯಾವುದೇ ವರ್ಗಾವಣೆ ಅಥವಾ ನಿಯೋಜನೆ ಪ್ರಸ್ತಾವನೆಗಳನ್ನು ಸಲ್ಲಿಸದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಈ ಸಂಬಂಧ ಸೋಮವಾರ ಮುಖ್ಯಮಂತ್ರಿಗಳು ಪ್ರಮುಖ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದಾರೆ. ಬರುವ ಫೆ.17ರಂದು ಬಜೆಟ್‌ ಮಂಡಿಸಲು ಮುಖ್ಯಮಂತ್ರಿಗಳು ಸಿದ್ಧತೆ ಕೈಗೊಂಡಿದ್ದಾರೆ. 

Tap to resize

Latest Videos

ರಾಜ್ಯದ ಇತಿಹಾಸದಲ್ಲೇ ದಾಖಲೆ ಸೃಷ್ಟಿಸಿದ ಶಿವಮೊಗ್ಗದ ಸೊರಬದಲ್ಲಿನ ತಹಶೀಲ್ದಾರ್ ವರ್ಗಾವಣೆ!

ಇಲಾಖಾವಾರು ಬೇಡಿಕೆಗಳ ಮೇಲೆ ಸಭೆಗಳನ್ನು ನಡೆಸುತ್ತಿದ್ದಾರೆ. ಅಲ್ಲದೇ ಸಾರ್ವತ್ರಿಕ ವಿಧಾನಸಭೆ ಚುನಾವಣೆಯು ಸಹ ಎದುರಾಗುತ್ತಿದೆ. ಇಂತಹ ಸಮಯದಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕಾಗಿ ವರ್ಗಾವಣೆ ಪ್ರಸ್ತಾವನೆಗಳು ಸಲ್ಲಿಕೆಯಾದರೆ ಅದಕ್ಕೆ ಹಿನ್ನಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ವರ್ಗಾವಣೆ ಅಥವಾ ನಿಯೋಜನೆ ಪ್ರಸ್ತಾವನೆಗಳನ್ನು ಸಲ್ಲಿಕೆ ಮಾಡಬಾರದು ಎಂದು ಹೇಳಿದ್ದಾರೆ ಎನ್ನಲಾಗಿದೆ.

click me!