ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನ ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು (ಜು.4): ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನ ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.
ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನವರಾದ ನ್ಯಾ.ವೀರಪ್ಪ ಅವರು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾಗಿದ್ದಾರೆ ರಾಜ್ಯದಲ್ಲಿ ಎರಡು ಉಪಲೋಕಾಯುಕ್ತ ಹುದ್ದೆಗಳಿಎ ಆ ಪೈಕಿ ಎರಡನೇ ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ಸೇವೆ ಸಲ್ಲಿಸಲಿದ್ದಾರೆ.
ಡೆಂಗ್ಯೂ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿಗಳಿಗೆ ಸಚಿವ ದಿನೇಶ್ ಸೂಚನೆ
ಕರ್ನಾಟಕ ಉಪ ಲೋಕಾಯುಕ್ತ - 2 ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಈ ಹಿಂದೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಆಗಿದ್ದ ಅವರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್‌ಸ್ಥಾಪನೆ ಮಾಡಿದ್ದರು. ಇದೀಗ ಅವರೇ ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.