
ಕೋಲಾರ (ಆ.18) ರಾಜ್ಯದಲ್ಲಿ ಒಂದೆಡೆ ಭಾರಿ ಮಳೆ ಪರಿಣಾಮ ಹಲವು ಅವಾಂತರ ಸಂಭವಿಸಿದ್ದರೆ, ಮತ್ತೊಂದೆಡೆ ರಸ್ತೆ ಅಪಘಾತಗಳು ವರದಿಯಾಗಿದೆ. ಇದೀಗ ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಓವರ್ ಟೇಕ್ ವೇಳೆ ಇನ್ನೋವಾ ಕಾರಿಗೆ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಅಣ್ಣ ಹಾಗೂ ತಂಗಿ ಇಬ್ಬರು ಮೃತಪಟ್ಟಿದ್ದಾರೆ. ಕೋಲಾರ ತಾಲ್ಲೂಕು ಮೂರಾಂಡಹಳ್ಳಿ ಬಳಿಯ ಮಹರ್ಷಿ ಶಾಲೆ ಬಳಿ ಈ ಅಪಘಾತ ಸಂಭವಿಸಿದೆ.
ಶ್ರೀನಿವಾಸಪುರ ತಾಲ್ಲೂಕಿನ ಕೊಂಡೇನಹಳ್ಳಿ ನಿವಾಸಿಗಳಾದ 16 ವರ್ಷದ ಯಶಸ್ವಿನಿ ಬಾಯಿ ಹಾಗೂ 20 ವರ್ಷದ ಹರ್ಷಿತ್ ಸಿಂಗ್ ಮೃತಪಟ್ಟಿದ್ದಾರೆ. ಕೋಲಾರದಿಂದ ಶ್ರೀನಿವಾಸಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಓವರ್ ಚೇಕ್ ಮಾಡುವಾಗ ಈ ಅಪಘಾತ ಸಂಭವಿಸಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣ ವ್ಯಾಪ್ತಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ತುಮಕೂರಿನ ಶಿರಾ ತಾಲೂಕಿನ ಕೊಟ್ಟ ರಂಗಾಪುರ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಶಿರಾದಿಂದ ಪಟ್ಟನಾಯಕನಹಳ್ಳಿ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಎದುರಿನಲ್ಲಿ ಅತೀ ವೇಗವಾಗಿ ಬೈಕ್ ಆಗಮಿಸಿತ್ತು. ಬೈಕ್‌ಗೆ ಡಿಕ್ಕಿಯಾಗುವುದು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾನೆ. ಇದರ ಪರಿಣಾಮ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣ ಗಾಯವಾಗಿದೆ. ಗಾಯಾಳುಗಳನ್ನು ಶಿರಾ ಆಸ್ಪತ್ಪೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್ಸು ರಸ್ತೆ ಪಕ್ಕದ ದಿಬ್ಬಕ್ಕೆ ಗುದ್ದಿದ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ಸಮೀಪದ ಮುಟ್ಲು ಗ್ರಾಮದಲ್ಲಿ ನಡೆದಿದೆ. ಸೋಮವಾರಪೇಟೆಯಿಂದ ಸೂರ್ಲಬಿ ಮಾರ್ಗವಾಗಿ ಮಡಿಕೇರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮುಟ್ಲು ಗ್ರಾಮದ ಸುಬ್ರಮಣ್ಯ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಸಮೀಪ ದಿಬ್ಬಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಸಣ್ಣ ಗಾಯಗಳಾಗಿದೆ. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರತಿದಿನ ಬಸ್ ನಲ್ಲಿ ನೂರಾರು ಮಂದಿ ಪ್ರಯಾಣಿಸುತ್ತಿದ್ದರು. ಆದ್ರೆ ಇಂದು ಶಾಲೆಗಳಿಗೆ ರಜೆ ಇದ್ದ ಹಿನ್ನಲೆ ಹೆಚ್ಚಿನ ವಿದ್ಯಾರ್ಥಿಗಳು ಅಥವಾ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಭಾರಿ ಅನಾಹುತ ತಪ್ಪಿದಂತಾಗಿದೆ. ಬಸ್ಸು ಸೋಮವಾರಪೇಟೆ ಸೂರ್ಲಬ್ಬಿ ಮೂಲಕ ಮಡಿಕೇರಿಗೆ ಬರುತ್ತಿತ್ತು. ಸದ್ಯ ಬಸ್ಸಿನಲ್ಲಿದ್ದವರು ಖಾಸಗಿ ವಾಹನಗಳ ಮೂಲಕ ತಮ್ಮ ಗ್ರಾಮಗಳ ತಲುಪಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ