Bengaluru ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ಗೆ 50,000ರೂ. ದಂಡ ಹಾಕಿದ ಬಿಬಿಎಂಪಿ

Published : Aug 21, 2023, 06:46 PM ISTUpdated : Aug 21, 2023, 07:54 PM IST
Bengaluru ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ಗೆ 50,000ರೂ. ದಂಡ ಹಾಕಿದ ಬಿಬಿಎಂಪಿ

ಸಾರಾಂಶ

ಕಾಂಗ್ರೆಸ್‌ ಕಚೇರಿ ಮುಂದೆ ಬ್ಯಾನರ್‌ ಹಾಕಿದ್ದಕ್ಕೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಸಚಿವ  ಡಿ.ಕೆ. ಶಿವಕುಮಾರ್‌ ಅವರಿಗೆ ಬಿಬಿಎಂಪಿ 50 ಸಾವಿರ ರೂ. ದಂಡ ವಿಧಿಸಿದೆ.

ಬೆಂಗಳೂರು (ಆ.21): ನಗರದ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾ(ಕ್ವೀನ್ಸ್ ರಸ್ತೆ) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯಿಂದ ಅಳವಡಿಸಿದ್ದ ಅನಧಿಕೃತ ಬ್ಯಾನರ್ ಅನ್ನು ತೆರವುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ 50,000 ರೂ. ದಂಡ ವಿಧಿಸಲಾಗಿದೆ.

ವಸಂತನಗರ ವಾರ್ಡ್-93 ವ್ಯಾಪ್ತಿಯ ಕ್ಲೀನ್ಸ್ ರಸ್ತೆಯ ಸ್ವತ್ತಿನ ಸಂಖ್ಯೆ:12/1 ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪಧಾಧಿಕಾರಿಗಳು ರವರುಗಳು ಮಾಜಿ ಪ್ರಧಾನಿ ಆಧುನಿಕ ಭಾರತದ ಹರಿಕಾರ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ದಿ‌. ಡಿ. ದೇವರಾಜ ಅರಸು ರವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಕಛೇರಿಯ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವುದು ಕಂಡುಬಂದಿರುತ್ತದೆ.

ಐಪಿಎಸ್‌ ಡಿ. ರೂಪಾ ಮೌದ್ಗಿಲ್‌ಗೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌: ಐಎಎಸ್‌ ರೋಹಿಣಿ ಸಿಂಧೂರಿಗೆ ಗೆಲುವು

ಸದರಿ ಸ್ವತ್ತಿನಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವ ಬಗ್ಗೆ ಪಾಲಿಕೆವತಿಯಿಂದ ಅಧಿಕೃತವಾಗಿ ಪರವಾನಿಗೆ/ಅನುಮತಿಯನ್ನು ಪಡೆದಿರುವುದಿಲ್ಲ. ಈ ಸಂಬಂಧ ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಬೆಂಗಳೂರು ರವರಿಗೆ 50,000/- ರೂ.ಗಳ ದಂಡವನ್ನು ವಿಧಿಸಲಾಗಿದ್ದು, ಮಾನ್ಯ ಮುಖ್ಯ ಆಯುಕ್ತರು ರವರ ಖಾತೆಗೆ ದಂಡದ ಮೊತ್ತ ಪಾವತಿಸುವಂತೆ ಸೂಚಿಸಲಾಗಿರುತ್ತದೆ.

ಆ.15ರಂದು ಆದೇಶ ಹೊರಡಿಸಿದ್ದ ಬಿಬಿಎಂಪಿ: ರಾಜಧಾನಿ ಬೆಂಗಳೂರಿನಲ್ಲಿ ಅಳವಡಿಸಿರುವ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ಮತ್ತು ಧ್ವಜಗಳನ್ನು ತೆರವುಗೊಳಿಸಲು ವಿಫಲವಾದರೆ, ಸಂಬಂಧಪಟ್ಟವಲಯದ ಅಧಿಕಾರಿಯಿಂದ ತಲಾ .50 ಸಾವಿರ ವಸೂಲಿ ಮಾಡುವ ಆದೇಶವನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೊರಡಿಸಿದ್ದರು.  ಬಿಬಿಎಂಪಿ(BBMP) ಹಾಗೂ ರಾಜ್ಯ ಸರ್ಕಾರ(Karnataka government)ಕ್ಕೆ ಹೈಕೋರ್ಟ್(Karnataka highcourt) ಛೀಮಾರಿ ಹಾಕಿ ಅನಧಿಕೃತ ಫ್ಲೆಕ್ಸ್‌ ಬ್ಯಾನರ್‌(Flex and banner)ಗಳನ್ನು ಮೂರು ವಾರದಲ್ಲಿ ತೆರವಿಗೆ ಸೂಚಿಸಿ ಆದೇಶಿಸಿದೆ. ತೆರವುಗೊಳಿಸುವಲ್ಲಿ ವಿಫಲರಾದ ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್‌ರನ್ನೇ ಹೊಣೆ ಮಾಡಿ ತಲಾ .50 ಸಾವಿರ ಠೇವಣಿಯನ್ನು ಅವರಿಂದ ವಸೂಲಿ ಮಾಡಿ ನ್ಯಾಯಾಲಯದಲ್ಲಿ ಇಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿತ್ತು. 

ನಟ ಸುದೀಪ್‌ ಬಗ್ಗೆ ಹೇಳಿಕೆ ನೀಡದಂತೆ ನಿರ್ಮಾಪಕ ಕುಮಾರ್‌, ಸುರೇಶ್‌ಗೆ ಆದೇಶ ನೀಡಿದ ಕೋರ್ಟ್‌

ವಲಯ ಆಯುಕ್ತರ ದಂಡ ವಸೂಲಿ ಮಾಡುವಂತೆ ಆದೇಶ: ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಫ್ಲೆಕ್ಸ್‌ಗಳು, ಬಂಟಿಂಗ್ಸ್ ಧ್ವಜಗಳು ಮತ್ತು ಬ್ಯಾನರ್‌ಗಳನ್ನು ತೆರವು ಮಾಡಿರುವ ಕುರಿತು ದಾಖಲೆಗಳ ಸಮೇತ ಆಗಸ್ಟ್‌ 16ರ ಒಳಗೆ ಕಡ್ಡಾಯವಾಗಿ ಸಲ್ಲಿಸಬೇಕು. ತಪ್ಪಿದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಎದುರಿಸಬೇಕಾಗುತ್ತದೆ. ಆದ್ದರಿಂದ ಎಲ್ಲ ವಲಯ ಆಯುಕ್ತರು ತಮ್ಮ ವಲಯ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆರವು ಮಾಡಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲಿಯೇ ಮೊದಲನೇಯದಾಗಿ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ 50 ಸಾವಿರ ರೂ. ದಂಡ ವಿಧಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌