
ಬೆಂಗಳೂರು(ಜೂ.14): ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು 4 ದಿನಗಳ ಕಾಲಾ ವಕಾಶ ನೀಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಿಐಡಿಗೆ ಪತ್ರ ಬರೆದಿದ್ದಾರೆ.
ನಾನು ಪೂರ್ವನಿಗದಿತ ಕಾರ್ಯಕ್ರಮ ನಿಮಿತ್ತ ದೆಹಲಿಗೆ ತೆರಳುವ ಕಾರಣ ಜೂ.17ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಯಡಿಯೂರಪ್ಪ ಅವರು ತನಿಖಾಧಿಕಾರಿಗೆ ಮನವಿ ಮಾಡಿದ್ದಾರೆ. ಈ ಹಿಂದೆ ನೀಡಿದ್ದ ನೋಟಿಸ್‌ಗಳಿಗೆ ಸಮ್ಮತಿಸಿ ಅದೇ ದಿನ ವಿಚಾರಣೆಗೆ ಸಹ ಹಾಜರಾಗಿ ತನಿಖೆಗೆ ಸಹಕರಿಸಿದ್ದೇನೆ. ಹೀಗಾಗಿ ತಮಗೆ ವಿಚಾರಣೆಗೆ ಹಾಜರಾ ಗಲು ಸಮಯ ನೀಡುವಂತೆ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಪೋಕ್ಸೋ ಪ್ರಕರಣ: ಬಿಎಸ್‌ವೈಗಾಗಿ ದೆಹಲಿಯಲ್ಲಿ ಸಿಐಡಿ ಅಧಿಕಾರಿಗಳ ತಂಡದಿಂದ ತಲಾಶ್!
ಲೈಂಗಿಕ ಕಿರುಕುಳ ಸಂಬಂಧ ಜೂ.12 ರಂದು ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ಸೋಮವಾರ ಸಿಐಡಿ ನೋಟಿಸ್ ಜಾರಿಗೊಳಿಸಿತ್ತು. ಈ ನೋಟಿಸ್ ಅನ್ನು ಸ್ವೀಕರಿಸಿದ್ದ ಯಡಿಯೂರಪ್ಪನವರ ಸಿಬ್ಬಂದಿ, ವಿಚಾರಣೆ ಸಂಗತಿಯನ್ನು ಯಡಿಯೂರಪ್ಪ ನವರಿಗೆ ತಿಳಿಸಿದ್ದರು. ಆದರೆ ತಾವು ದೆಹಲಿ ಪ್ರವಾಸದಲ್ಲಿರುವ ಕಾರಣ ವಿಚಾರಣೆಗೆ ಬರಲು ಸಾಧ್ಯವಿಲ್ಲ ಎಂದು ಹೇಳಿ ಅವರು ಕಾಲಾವಕಾಶ ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ