
ಬೆಂಗಳೂರು, (ಏ.27): ಕೊರೋನಾ ಲಾಕ್‌ಡೌನ್‌ನಿಂದಾಗಿ ಕೂಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿರುವ ಕಾರ್ಮಿಕರ ಬದುಕು ಮೂರಾಬಟ್ಟೆಯಾಗಿದೆ. ಸುಮಾರು ಒಂದು ತಿಂಗಳಿನಿಂದ ಕೆಲಸವಿಲ್ಲದೆ ಕಾರ್ಮಿಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ.
ಇದರಿಂದ ಎಚ್ಚೆತ್ತ ರಾಜ್ಯ ಕಾರ್ಮಿಕ ಇಲಾಖೆ, ಅವರಿಗಾಗಿಯೇ ಸಹಾಯವಾಣಿಯೊಂದು ಪ್ರಾರಂಭಿಸಿದೆ. ಕಾರ್ಮಿಕ ಇಲಾಖೆಯ ಸಚಿವ ಶಿವರಾಮ್ ಹೆಬ್ಬಾರ್ ಅವರು ಇಂದು (ಸೋಮವಾರ) ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆಯಲ್ಲಿ ಸಹಾಯವಾಣಿಗೆ ಚಾಲನೆ ನೀಡಿದರು.
ಮೇ.3ರ ಬಳಿಕವೂ ಕುಡುಕರಿಗೆ ಲಾಕ್‌ಡೌನ್, ಅಮೀರ್‌ಗೆ ಎಚ್ಚರಿಸಿದ್ದ ಕಿಂಗ್ ಖಾನ್; ಏ.27ರ ಟಾಪ್ 10 ಸುದ್ದಿ!
ಈ ಸಂದರ್ಭದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಮೊದಲಾದವರು ಉಪಸ್ಥಿತರಿದ್ದರು.
ಹೊರರಾಜ್ಯದಲ್ಲಿ ಸಿಲುಕಿರುವ ಕಟ್ಟಡ ಹಾಗೂ ಇತರೆ ಕಾರ್ಮಿಕರು 080 22636800 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಯನ್ನು ತಿಳಿಸಬಹುದು. ಕರೆ ತಂದ ತಕ್ಷಣ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಯನ್ನು ಸಂಪರ್ಕಿಸಿ, ತಮ್ಮ ಸಮಸ್ಯೆಯನ್ನು ಪರಿಹರಿಸಲಾಗುವುದು.
ಇನ್ನು ಲಾಕ್‌ಡೌನ್‌ನಿಂದಾಗಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯದ ಸುಮಾರು 71 ಸಾವಿರ ಕಾರ್ಮಿಕರ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರ ತಲಾ 2,000 ರೂ.ಗಳನ್ನು ರಾಜ್ಯ ಸರ್ಕಾರ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ