ಕಾಂಗ್ರೆಸ್‌ ವಿರುದ್ಧ ಸಿಎಂ ಬಿಎಸ್‌ವೈ ಕಿಡಿ

Kannadaprabha News   | Asianet News
Published : Aug 22, 2020, 09:42 AM IST
ಕಾಂಗ್ರೆಸ್‌ ವಿರುದ್ಧ ಸಿಎಂ ಬಿಎಸ್‌ವೈ ಕಿಡಿ

ಸಾರಾಂಶ

ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಿಡಿ ಕಾರಿದ್ದಾರೆ.  ಶೀಘ್ರವೇ ಎಲ್ಲಾ ಸತ್ಯಸಂಗತಿಗಳು ಬಯಲಿಗೆ ಬರಲಿವೆ ಎಂದು ಹೇಳಿದ್ದಾರೆ.

ಬೆಂಗಳೂರು (ಆ.22): ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಸತ್ಯ ಸಂಗತಿಗಳು ಮತ್ತಷ್ಟುಹೊರಬಂದ ಮೇಲೆ ರಾಜಕಾರಣ ಮಾಡುತ್ತಿರುವವರು ಯಾರು ಎಂಬುದು ಗೊತ್ತಾಗುತ್ತದೆ ಎಂದು ಕಾಂಗ್ರೆಸ್‌ ಪಕ್ಷದ ವಿರುದ್ಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಿಡಿಕಾರಿದ್ದಾರೆ.

 ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಲಭೆ ವಿಚಾರದಲ್ಲಿ ಇನ್ನಷ್ಟುಸತ್ಯ ಸಂಗತಿಗಳು ತನಿಖೆಯ ಬಳಿಕ ಬರಲಿವೆ. ಆಗ ರಾಜಕಾರಣ ಮಾಡುತ್ತಿರುವುದು ನಾವಾ ಅಥವಾ ಅವರಾ ಎಂಬುದು ಗೊತ್ತಾಗುತ್ತದೆ ಎಂದು  ಹೇಳಿದರು. 

ಸಚಿವರ ಕಾರ್ಯವೈಖರಿ ಮೇಲೆ ಪಕ್ಷ ನಿಗಾ, ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ...

ಜನರಿಗೆ ಗಲಭೆ ಪ್ರಕರಣದಲ್ಲಿ ನಡೆದಿರುವ ಸತ್ಯ ಸಂಗತಿಯನ್ನು ತಿಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ತನಿಖೆಯಾಗುತ್ತಿದ್ದಂತೆ ಹಲವು ಸಂಗತಿಗಳು ಹೊರಬರುತ್ತಿವೆ. ಹಲವು ಆರೋಪಿಗಳು ಬೇರೆ ಬೇರೆ ವ್ಯವಹಾರ ಮಾಡುತ್ತಿರುವುದು ಗೊತ್ತಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಾನೂನು ಕ್ರಮ ಜರುಗಿಸಲಿದೆ ಎಂದು ಯಡಿಯೂರಪ್ಪ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ