Kannada School in Dubai : ಕನ್ನಡ ಶಾಲೆ ಉದ್ಘಾಟನೆಗೆ ಬಿಎಸ್‌ವೈ ದುಬೈಗೆ

Suvarna News   | Asianet News
Published : Dec 24, 2021, 07:36 AM IST
Kannada School in Dubai : ಕನ್ನಡ ಶಾಲೆ ಉದ್ಘಾಟನೆಗೆ ಬಿಎಸ್‌ವೈ ದುಬೈಗೆ

ಸಾರಾಂಶ

ಕನ್ನಡ ಶಾಲೆ ಉದ್ಘಾಟನೆಗೆ ಬಿಎಸ್‌ವೈ ದುಬೈಗೆ ವಿವಿಧ ಕಾರ್ಯಕ್ರಮಗಳಲ್ಲಿ ಯಡಿಯೂರಪ್ಪ ಭಾಗವಹಿಸಲಿದ್ದಾರೆ. 

ಸುವರ್ಣಸೌಧ (ಡಿ.24): ವಿಧಾನಸಭೆಯಲ್ಲಿ (Karnataka Assembly) ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ದುಬೈ ಪ್ರವಾಸಕ್ಕೆ ತೆರಳಲು ಬೆಂಗಳೂರಿಗೆ ತೆರಳಿದರು.  ಶುಕ್ರವಾರ ಬೆಂಗಳೂರಿನಿಂದ ದುಬೈಗೆ (Dubai) ತೆರಳಲಿದ್ದಾರೆ. ದುಬೈನಲ್ಲಿನ ಕನ್ನಡ ಸಂಘವೊಂದರ ಶಾಲಾ (School) ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಶುಕ್ರವಾರದಿಂದ 6 ದಿನ ದುಬೈನಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಳಗಾವಿಯಿಂದ ಮಧ್ಯಾಹ್ನ 3 ಗಂಟೆಗೆ ಯಡಿಯೂರಪ್ಪ ಬೆಂಗಳೂರಿಗೆ (Bengaluru) ತೆರಳಬೇಕಿತ್ತು. ಆದರೆ ಆಗ ಇನ್ನೂ ಮತಾಂತರ ಮಸೂದೆ ಅಂಗೀಕಾರವಾಗಿರಲಿಲ್ಲ. ಈ ಕಾರಣಕ್ಕಾಗಿ ಅಂಗೀಕಾರವಾಗುವವರೆಗೂ ಸದನದಲ್ಲಿ ಪಾಲ್ಗೊಂಡು ಬಳಿಕ ಬೆಂಗಳೂರಿಗೆ ತೆರಳಿದರು. ಸದನ ಆರಂಭವಾದಾಗಿನಿಂದಲೂ ಯಡಿಯೂರಪ್ಪ (Yediyurappa)  ಅವರು ಪ್ರತಿಕ್ಷಣವೂ ಕಲಾಪದ ಚರ್ಚೆಯಲ್ಲಿ ಪಾಲ್ಗೊಂಡಿದ್ದು ವಿಶೇಷ.

ಯುಎಇ ಉದ್ಯಮಿಗಳಿಂದ ಭಾರೀ ಹೂಡಿಕೆ  : ಸಂಯುಕ್ತ ಅರಬ್ ಸಂಸ್ಥಾನದ (UAE) ಹೂಡಿಕೆದಾರರು ರಾಜ್ಯದಲ್ಲಿ ಭಾರೀ ಬಂಡವಾಳ ಹೂಡಲಿದ್ದು(investment), ಸೂಕ್ತ ಒಡಂಬಡಿಕೆಗಳನ್ನು ಮಾಡಿಕೊಳ್ಳಲು  ಬೆಂಗಳೂರಿಗೆ (Bengaluru) ಬಂದಿಳಿಯಲಿದ್ದಾರೆ ಎಂದು ಐಟಿ, ಬಿಟಿ, ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದರು.

ರಾಜ್ಯ ಸರಕಾರದ ನಿಯೋಗದ ಭಾಗವಾಗಿ ತಾವು ಕೈಗೊಂಡಿದ್ದ ನಾಲ್ಕು ದಿನಗಳ ತಮ್ಮ ದುಬೈ (Dubai) ಪ್ರವಾಸವನ್ನು ಮುಗಿಸಿಕೊಂಡು ಬಂದ ಹಿನ್ನೆಲೆಯಲ್ಲಿ ಅವರು  ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಹೂಡಿಕೆಗೆ ಕರ್ನಾಟಕವು (Karnataka) ಪ್ರಶಸ್ತ ತಾಣವೆನ್ನುವುದು ಯುಎಇ, ಖತಾರ್, ಈಜಿಪ್ಟ್ ಮತ್ತು ಸೌದಿ ಅರೇಬಿಯಾದ ಉದ್ಯಮಿಗಳಿಗೆ ಮನದಟ್ಟಾಗಿದೆ. ಇದರ ಫಲವಾಗಿ ಬೆಂಗಳೂರಿನಲ್ಲಿ ಸದ್ಯದಲ್ಲೇ ಒಂದು ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ವಿಶ್ವ ದರ್ಜೆಯ `ಡಿಸೈನ್ ಡಿಸ್ಟ್ರಿಕ್ಟ್’ ಮೈದಾಳಲಿದೆ. ಇದು ಗುಣಮಟ್ಟದಲ್ಲಿ ದುಬೈ ಕೇಂದ್ರಕ್ಕಿಂತಲೂ ಉತ್ಕೃಷ್ಟವಾಗಿರಲಿದೆ ಎಂದು ಅವರು ಮಾಹಿತಿ ನೀಡಿದ್ದರು. 

ಉದ್ದೇಶಿತ ಡಿಸೈನ್ ಡಿಸ್ಟ್ರಿಕ್ಟ್ 100ರಿಂದ 150 ಎಕರೆ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿದೆ. ಇದರಲ್ಲಿ ಉದ್ಯಮರಂಗಕ್ಕೆ ಬೇಕಾಗುವ ಪ್ರತಿಯೊಂದೂ ವಸ್ತುವನ್ನೂ ಜಾಗತಿಕ ಮಟ್ಟದಲ್ಲಿ ವಿನ್ಯಾಸಗೊಳಿಸಲಾಗುವುದು. ಇದು ಔದ್ಯಮಿಕ ವಿನ್ಯಾಸ, ಕಲೆ ಮತ್ತು ಫ್ಯಾಷನ್ ಸಂಸ್ಕೃತಿಗಳ ಸಂಗಮವಾಗಲಿದ್ದು, ಇಲ್ಲಿ `ಬೆಂಗಳೂರು ಡಿಸೈನ್ ಫೆಸ್ಟಿವಲ್’ ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ವಿವರಿಸಿದ್ದರು.  ಬೆಂಗಳೂರಿನಲ್ಲಿ ವಾಟರ್ ಥೀಮ್ ಪಾರ್ಕ್ ಸ್ಥಾಪಿಸುವ ಸಂಬಂಧ ದುಬೈನ ಭೂ  ಅಭಿವೃದ್ಧಿ ಸಚಿವರೊಂದಿಗೆ ನಡೆಸಿರುವ ಮಾತುಕತೆ ಕೂಡ ಫಲಪ್ರದವಾಗಿದೆ. 

ಕೊಲ್ಲಿ ರಾಷ್ಟ್ರಗಳಲ್ಲಿ ಎವೊಲೆನ್ಸ್ ಸಮೂಹ, ಕ್ರೆಸೆಂಟ್, ಡೆಕರ್ ಅಂಡ್ ಹಲಾಬಿ, ಆಸ್ಟರ್ ಡಿಎಂ ಹೆಲ್ತ್ ಕೇರ್ (Health Care) ಮತ್ತು ಮೈತ್ರಾ ಹೈಟೆಕ್ ಆಸ್ಪತ್ರೆಗಳ ಸಮೂಹಗಳು ರಾಜ್ಯದಲ್ಲಿ ಸದ್ಯದಲ್ಲೇ ಹೂಡಿಕೆ ಮಾಡಲಿವೆ. ಇದರಿಂದ ಸರಕು ಸಾಗಣೆ, ಆರೋಗ್ಯ, ಶಿಕ್ಷಣ, ಬಂದರು, ಯೋಗಕ್ಷೇಮ ಮುಂತಾದ ಕ್ಷೇತ್ರಗಳಲ್ಲಿ ಸಾವಿರಾರು ಸಂಖ್ಯೆಯ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ನುಡಿದರು. 

ಅಲ್ಲಿನ ಇಸ್ಲಾಮಿಕ್ ಇನ್ವೆಸ್ಟ್ಮೆಂಟ್ ಗ್ರೂಪ್ ಸಮೂಹವು ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಹಂತಹಂತವಾಗಿ 3,500 ಕೋಟಿ ರೂ. ಹೂಡಿಕೆ ಮಾಡಲಿದೆ. ಇದರ ಜತೆಗೆ ಈ ಸಮೂಹವು ಬೆಂಗಳೂರಿನಲ್ಲಿ ತನ್ನ ಕಚೇರಿಯನ್ನು ಸದ್ಯದಲ್ಲೇ ಆರಂಭಿಸಲಿದೆ. ಈ ಸಂಬಂಧದ ಒಡಂಬಡಿಕೆಗೆ ದುಬೈನಲ್ಲೇ ಅಂಕಿತ ಹಾಕಲಾಗಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು. 

ಹೆಸರಾಂತ ಮೈತ್ರಾ ಆಸ್ಪತ್ರೆಗಳ ಸಮೂಹವು ಬೆಂಗಳೂರಿನಲ್ಲಿ ರೋಬೋಟಿಕ್ ತಂತ್ರಜ್ಞಾನವುಳ್ಳ ಹೈಟೆಕ್ ಆಸ್ಪತ್ರೆಯನ್ನು ಸ್ಥಾಪಿಸಲು ಮುಂದೆ ಬಂದಿದೆ. ಇದರಿಂದಾಗಿ ಅಮೆರಿಕ ಸೇರಿದಂತೆ ಹಲವು ವಿದೇಶಗಳ ಜನರು ಕೂಡ ಅತ್ಯುತ್ತಮ ಚಿಕಿತ್ಸೆಗಾಗಿ ನಮ್ಮ ರಾಜಧಾನಿಗೆ ಬರುವಂತಾಗುತ್ತದೆ.  ಇದರ ಜತೆಗೆ ಆಸ್ಟರ್ ಸಮೂಹವು ರಾಜ್ಯದ 2 ಮತ್ತು 3ನೇ ಸ್ತರದ ನಗರಗಳಲ್ಲಿ ಅತ್ಯುತ್ತಮ ಆಸ್ಪತ್ರೆಗಳನ್ನು ಸ್ಥಾಪಿಸಲು ಒಲವು ತೋರಿದೆ ಎಂದು ಅವರು ಹೇಳಿದರು. 

ಯುಎಇ ಉದ್ಯಮಿಗಳು ಭಾರತದಲ್ಲಿ (India) ಸದ್ಯದಲ್ಲೇ 125 ಲಕ್ಷ ಕೋಟಿ ರೂಪಾಯಿ ಬಂಡವಾಳವನ್ನು ಹೂಡಲಿದ್ದಾರೆ. ಇದರಲ್ಲಿ ಕರ್ನಾಟಕಕ್ಕೆ ಸಿಂಹಪಾಲು ಹರಿದು ಬರಲಿದೆ. ಈ ಹೂಡಿಕೆದಾರರಲ್ಲಿ ಉದ್ಯಮಿಗಳ ಜೊತೆಗೆ ವೆಂಚರ್ ಕ್ಯಾಪಿಟಲಿಸ್ಟ್ಸ್ ಕೂಡ ಹೆಚ್ಚಿನ ಪ್ರಮಾಣದಲ್ಲಿ ಇದ್ದಾರೆ ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು. 

ಇದಷ್ಟೆ ಅಲ್ಲದೆ, ಶಿಕ್ಷಣ ರಂಗದಲ್ಲಿ ರಾಜ್ಯವು ಮಾಡಿರುವ ಸಾಧನೆಗಳಿಂದ ಹಲವು ವಿದೇಶ ವಿ.ವಿ.ಗಳು ಪ್ರಭಾವಿತವಾಗಿವೆ. ಹೀಗಾಗಿ ಅವು ವಿಶೇಷವಾಗಿ ಬೆಂಗಳೂರಿನಲ್ಲಿ ತಮ್ಮ ಕ್ಯಾಂಪಸ್ ತೆರೆಯಲು ಮುಂದೆ ಬಂದಿವೆ. ಈ ಸಂಬಂಧ ಶೀಘ್ರದಲ್ಲೇ ಒಡಂಬಡಿಕೆಗಳನ್ನು ಅಂತಿಮಗೊಳಿಸಲಾಗುವುದು ಎಂದು ಅವರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ