
ಬೆಂಗಳೂರು, (ಏ.24): ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga Airport) ನನ್ನ ಹೆಸರು ಬೇಡ ಎಂದು ಸ್ವತಃ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಅವರು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರ ಬರೆದಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(BS Yediyurappa) ಅವರ ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ್ದು. ಸಚಿವ ಸಂಪುಟದ ತೀರ್ಮಾನವನ್ನು ಅನುಮತಿಗಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯಾಗಿತ್ತು. ಇದರ ಮಧ್ಯೆ ಬಿಎಸ್‌ವೈ ಅವರೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ ಎಂದಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರಿಡಲು ತೀರ್ಮಾನ, ಕೇಂದ್ರಕ್ಕೆ ಶಿಫಾರಸ್ಸು
ಈ ಬಗ್ಗೆ ಪತ್ರ ಬರೆದಿರುವ ಯಡಿಯೂರಪ್ಪ ಅವರು, ನನ್ನ ಹೆಸರು ವಿಮಾನ ನಿಲ್ದಾಣಕ್ಕೆ ಘೋಷಣೆ ಮಾಡಿರೋದನ್ನ ಪುನರ್ ಪರಿಶೀಲಿಸಿ . ರಾಷ್ಟ್ರದ ನಾಡಿನ ಅಭಿವೃದ್ಧಿ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದ ಮಹಾನೀಯರ ಹೆಸರನ್ನ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಿ ಎಂದು ಪತ್ರದ ಮೂಲಕ ಸಿಎಂಗೆ ಸಲಹೆ ನೀಡಿದ್ದಾರೆ.
ಬೊಮ್ಮಾಯಿಗೆ ಬಿಎಸ್‌ವೈ ಬರೆದ ಪತ್ರ
ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚಿಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದ.
ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು, ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾ ನನ್ನದೊಂದು ಅಳಿಲು ಸೇವೆ ಮಾತ್ರವಾಗಿದೆ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾ ಭಾವ ನನ್ನದು. ಈ ಹಿನ್ನಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಈ ಎಲ್ಲಾ ಕಾರಣದಿಂದ ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಪತ್ರದಲ್ಲಿ ಸಲಹೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ