
- ಮೆನುನಲ್ಲಿ ಟೊಮೆಟೋ ಬಾತ್, ಮೊಸರನ್ನ, ಮೈಸೂರು ಪಾಕ್ । 5 ಊರಿಂದ ಬಂದಿರುವ ಬಾಣಸಿಗರು
ಚಿತ್ರದುರ್ಗ (ಮೇ.9): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವ, ಪುರಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳ ಹಸಿವು ನೀಗಿಸಲು ಟೊಮೆಟೋ ಬಾತ್, ಮೊಸರನ್ನ, ಮೈಸೂರು ಪಾಕ್ ಸಿದ್ಧವಾಗುತ್ತಿದೆ.
ಹತ್ತು ಲಕ್ಷ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡುವುದು ಸವಾಲಿನ ಕೆಲಸವಾಗಿದೆ. ಸರಾಗಗೊಳಿಸುವ ನಿಟ್ಟಿನಲ್ಲಿ ಸರಳ ಊಟದ ವ್ಯವಸ್ಥೆಗೆ ಮೊರೆ ಹೋಗಲಾಗಿದೆ. ಟೊಮೆಟೋ ಬಾತ್, ಮೊಸರನ್ನ ಸೂಕ್ತವೆಂದು ತೀರ್ಮಾನಿಸಲಾಗಿದೆ. ಶುಕ್ರವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಂಸದ ಗೋವಿಂದ ಕಾರಜೋಳ, .ಮೈಸೂರು, ಬೆಂಗಳೂರು, ಚಿತ್ರದುರ್ಗ, ತುಮಕೂರು ಮೊದಲಾದ 5 ಕಡೆಯ ಪ್ರಮುಖ ಅಡುಗೆಯವರಿಗೆ ನಿರ್ವಹಣೆ ಕೊಟ್ಟಿದ್ದೇವೆ. ಊಟ ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗಲಿದೆ. ಅರ್ಧ ಲೀಟರ್ ಕುಡಿಯುವ ನೀರನ್ನೂ ಕೊಡುತ್ತೇವೆ. ಸಂಜೆ 6ರವರೆಗೂ ಊಟ ಮುಂದುವರೆಯುತ್ತದೆ ಎಂದರು.
ಒಂದೊಂದು ಅಡುಗೆ ಮನೆ ಬಳಿ ಬೆಂಗಳೂರಿನ ಶಾಸಕರ ಜೊತೆ 100ರಂತೆ ಸ್ವಯಂಸೇವಕರೂ ಇರುತ್ತಾರೆ. ಹಂತ ಹಂತವಾಗಿ ಬಿಸಿಯೂಟವನ್ನೇ ಕೊಡಲು ಕ್ರಮ ಕೈಗೊಳ್ಳಲಿದ್ದಾರೆ. ಸರತಿ ಸಾಲಿನಲ್ಲೂ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತಾರೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ