ಮೀಸಲಾತಿ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸರ್ಕಾರ

By Suvarna News  |  First Published Mar 10, 2021, 10:37 PM IST

ಮೀಸಲಾತಿಗೆ ಒತ್ತಾಯಿಸಿ ವಿವಿಧ ಸಮುದಾಯಗಳು ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ, ವಿವಿಧ ಸಮುದಾಯಗಳ ಬೇಡಿಕೆ ಕುರಿತು ಪರಿಶೀಲಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಿತಿಯೊಂದನ್ನು ರಚಿಸಿದ್ದಾರೆ.


ಬೆಂಗಳೂರು, (ಮಾ.10): ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ಕೋರಿ ಹೋರಾಟಗಳನ್ನು ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ.

 ಈ ಕುರಿತು ಮುಖ್ಯಮಂತ್ರಿಗಳ ಕಚೇರಿ ಅಧಿಕೃತ ಟ್ವಿಟರ್ ಮೂಲಕ ಮಾಹಿತಿ ನೀಡಿದೆ. ಈ ಸಮತಿಗೆ ನಿವೃತ್ತ ನ್ಯಾಯಾಧೀಶರಾದ ಸುಭಾಷ್ ಆಡಿಯವರನ್ನ ಅಧ್ಯಕ್ಷರನ್ನಾಗಿ ನೇಮಿಸಿದ್ದು ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಮತ್ತು ಮೈಸೂರು ಮಹಾರಾಣಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಬಿ.ವಿ. ವಸಂತಕುಮಾರ್ ಅವರನ್ನ ಸದಸ್ಯರನ್ನಾಗಿಸಿದೆ.

Tap to resize

Latest Videos

ಪಂಚಮಸಾಲಿಗೆ ಮೀಸಲಾತಿ: ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಸ್ವಾಮೀಜಿ 

ಸಚಿವ ಸಂಪುಟದ ತೀರ್ಮಾನದಂತೆ ಮೀಸಲಾತಿ ಬಗ್ಗೆ ಇರುವ ವಿವಿಧ ಬೇಡಿಕೆಗಳನ್ನು ಸಂವಿಧಾನಾತ್ಮಕ, ಕಾನೂನಾತ್ಮಕವಾಗಿ ಚೌಕಟ್ಟಿನಲ್ಲಿ ಪರೀಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ

ಮೈಸೂರು ಮಹಾರಾಣಿ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ|| ಬಿ.ವಿ.ವಸಂತಕುಮಾರ್ ಸದಸ್ಯರಾಗಿರುವ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. (2/2)

— CM of Karnataka (@CMofKarnataka)

ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಇತ್ತ ಪಂಚಮಸಾಲಿ ಸಮುದಾಯ 2ಎ ಮೀಸಲಾತಿ ಬೇಡಿಕೆಯಿಟ್ಟು ನಗರದ ಫ್ರೀಡಂ ಪಾರ್ಕ್​ನಲ್ಲಿ ಸುದೀರ್ಘ ಧರಣಿ ನಡೆಸುವ ಮೂಲಕ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರುತ್ತಿದೆ. ಈಗಾಗಲೇ ವಾಲ್ಮೀಕಿ ಸಮುದಾಯ ಮೀಸಲಾತಿ ಹೆಚ್ಚಿಸಬೇಕೆನ್ನುತ್ತಿದ್ದರೆ, ಕುರುಬ ಸಮುದಾಯ ಎಸ್‌ಟಿ ಸೇರ್ಪಡೆಗೆ ಆಗ್ರಹಿಸುತ್ತಿದೆ. 

click me!