
ಬೆಂಗಳೂರು, (ಜೂನ್.02): ಇದೇ ಜೂನ್ 07ರ ಬಳಿಕೆ ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡಬೇಕೋ? ಬೇಡವೋ ಎನ್ನುವ ಬಗ್ಗೆ ಚರ್ಚಿಸಲು ಸಿಎಂ ಬಿಎಸ್‌ವೈ ಕರೆದಿದ್ದ ಸಭೆ ಅಂತ್ಯವಾಗಿದೆ.
ಇಂದು (ಬುಧವಾರ) ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಲಾಕ್ ಡೌನ್ ಒಂದು ವಾರ ಮುಂದುವರೆಸುವ ಕುರಿತು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಲಾಕ್‌ಡೌನ್ ಬಗ್ಗೆ ಸಿಎಂ ಹೇಳಿಕೆ...ಜನಾಭಿಪ್ರಾಯ... ಮತ್ತೆ ಸಂಪುಟ ವಿಸ್ತರಣೆ:3 ಮಹತ್ವದ ಸುದ್ದಿಗಳು
ಜೂನ್ 07 ಬಳಿಕೆ ಒಂದು ವಾರ ಲಾಕ್‌ಡೌನ್ ವಿಸ್ತರಣೆ ಮಾಡಲು ಸಭೆಯಲ್ಲಿ ನಿರ್ಧಾರವಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಾಳೆ (ಗುರುವಾರ) ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಗಳಿವೆ.
ಸಭೆಯಲ್ಲಿ ಕೊರೋನಾ 3ನೇ ಅಲೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಕುರಿತಂತೆ ರಚಿಸಲಾಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯೊಂದಿಗೆ ಸಭೆ ನಡೆಸಿ, ಚರ್ಚಿಸಿದರು. ಸಭೆಯಲ್ಲಿ ಕೋವಿಡ್ ಉಸ್ತುವಾರಿಗಳು, ಸಚಿವರು, ಅಧಿಕಾರಿಗಳು ಭಾಗಿಯಾಗಿದ್ದರು.
ಲಾಕ್‌ಡೌನ್ ಕೊಂಚ ಸಡಿಲಿಕೆ
ಮತ್ತೊಂದೆಡೆ ರಾಜ್ಯ ಸರ್ಕಾರ ಆರ್ಥಿಕ ಚಟುವಟಿಕೆ ಚುರುಕಿಗೆ ಹೊಸ ಪ್ಲ್ಯಾನ್ ಮಾಡಿದ್ದು, ಅದರ ಅನ್ವಯ ಲಾಕ್‌ಡೌನ್ ಮಾರ್ಗಸೂಚಿಯಲ್ಲಿ ಕೊಂಚ ಸಡಿಲಿಕೆ ಮಾಡಿದೆ.
ರಫ್ತು ಆಧಾರಿತ ಕೈಗಾರಿಕೆಗಳಿಗೆ ಸರ್ಕಾರದಿಂದ ಅವಕಾಶ ಲಭ್ಯವಾಗಿದೆ. ಶೇಕಡಾ 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಣೆ ಮಾಡಬಹುದು ಎಂದು ಸರ್ಕಾರ ಆದೇಶ ಹೊರಡಿಸಿದೆ. ನಾಳೆಯಿಂದಲೇ ಈ ನಿಯಮ ಅನ್ವಯ ಆಗುವಂತೆ ಸರ್ಕಾರ ಆದೇಶ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ