ಚಂಡಮಾರುತ ಪ್ರಭಾವ : ಮತ್ತೆ ಮೂರು ದಿನ ರಾಜ್ಯದಲ್ಲಿ ಮಳೆ

By Kannadaprabha NewsFirst Published Nov 8, 2019, 8:54 AM IST
Highlights

 ‘ಬುಲ್ ಬುಲ್’ ಚಂಡಮಾರುತದ ಪ್ರಭಾವದಿಂದ ರಾಜ್ಯದ ಕೆಲವೆಡೆ ಮುಂದಿನ 3 ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು (ನ.08): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಬುಲ್ ಬುಲ್’ ಚಂಡಮಾರುತದ ಪ್ರಭಾವದಿಂದ ರಾಜ್ಯದ ಕೆಲವೆಡೆ ಮುಂದಿನ 3 ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಅರಬ್ಬಿ ಸಮುದ್ರದಲ್ಲಿ ‘ಮಹಾ’ ಚಂಡಮಾರುತ ಹೋದ ಬಳಿಕ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿತ್ತು. ಇದೀಗ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ‘ಬುಲ್ ಬುಲ್’ ಚಂಡಮಾರುತದ ಪ್ರಭಾವ ದಿಂದ ನ. 8 ರಿಂದ 10 ರ ವರೆಗೆ ಕರಾವಳಿ ಹೊರತುಪಡಿಸಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದ ಕೆಲವೆಡೆ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಳಲೂರಿನಲ್ಲಿ ಅತಿ ಹೆಚ್ಚು 8 ಸೆಂ.ಮೀ.ಮಳೆಯಾಗಿದೆ. ಗದಗದ ನರಗುಂದ, ಬಾಗಲಕೋಟೆಯ ಗುಳೇದಗುಡ್ಡದಲ್ಲಿ ತಲಾ 7, ದಕ್ಷಿಣ ಕನ್ನಡದ ಬೆಳ್ತಂಗಡಿ, ಬಾಗಲಕೋಟೆಯ ಬಾದಾಮಿ, ದಾವಣಗೆರೆಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ.

click me!