ಕೆಂಪೇಗೌಡ ಏರ್‌ಪೋರ್ಟ್ ಬಳಿ ಬಸ್ ಅಪಘಾತ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Published : Jun 18, 2023, 11:48 AM ISTUpdated : Jun 18, 2023, 01:24 PM IST
ಕೆಂಪೇಗೌಡ ಏರ್‌ಪೋರ್ಟ್ ಬಳಿ ಬಸ್ ಅಪಘಾತ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಸಾರಾಂಶ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಬಸ್ ಅಪಘಾತಕ್ಕೀಡಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ

ಬೆಂಗಳೂರು (ಜೂ.18) : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಬಸ್ ಅಪಘಾತಕ್ಕೀಡಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(Kempegowda International Airport). T1 T2 ನಡುವೆ ಸಂಚಾರ ಮಾಡುತ್ತಿದ್ದ ಶಟಲ್ ಸರ್ವಿಸ್ ಬಸ್.  ಟರ್ಮಿನಲ್- 2ರಲ್ಲಿನ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ನಡೆದಿರುವ ದುರ್ಘಟನೆ.

ಬಸ್‌ ಚಾಲಕನ ನಿರ್ಲಕ್ಷ್ಯತನದಿಂದ ಸಂಭವಿಸಿರುವ ಅಪಘಾತ.  ಅಪಘಾತಕ್ಕೆ ಬಸ್ಸಿನ ಮುಂಭಾಗ ಪೂರ್ಣ ಜಖಂ ಗೊಂಡಿದೆ. ಅದೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಏರ್‌ಪೋರ್ಟ್ ಬಳಿಯಿರುವ ಆಸ್ಪತ್ರೆಗೆ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಕೆಐಎಬಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣ

ಭೀಕರ ರಸ್ತೆ ದುರಂತ: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಸ್ಥಳದಲ್ಲೇ ಸಾವು!

ಕೊಲ್ನಾಡು ಸ್ಕೂಟರ್‌ ಡಿಕ್ಕಿ ಪಾದಾಚಾರಿ ಮಹಿಳೆ ಗಂಭೀರ

ಮೂಲ್ಕಿ ಮೂಲ್ಕಿಯ ಕೊಲ್ನಾಡು ಕೈಗಾರಿಕಾ ಪ್ರದೇಶದ ಒಳ ರಸ್ತೆಯಲ್ಲಿ ಸ್ಕೂಟರ್‌ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಗೀತಾ ಶೆಟ್ಟಿಗಾರ್‌ (61) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಗೀತಾ ಶೆಟ್ಟಿಗಾರ್‌ ಅವರು ತಮ್ಮ ತಾಯಿ ಮನೆಗೆ ಹೋಗಿದ್ದವರು ವಾಪಸ್ಸು ಮನೆ ಕಡೆಗೆ ನಡೆದುಕೊಂಡು ಬರುತ್ತಿರುವಾಗ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ ದುರ್ಗಾ ಫ್ಯಾಬ್ರಿಕೇಷನ್ಸ್‌ ಕಟ್ಟಡದ ಎದುರು ಭಾಗದಲ್ಲಿ ಲಿಂಗಪ್ಪಯ್ಯ ಕಾಡು ಕಡೆಯಿಂದ ವೇಗವಾಗಿ ಬಂದ ಸ್ಕೂಟರ್‌ ಡಿಕ್ಕಿ ಹೊಡೆದಿದ್ದು ಗಂಭೀರ ಗಾಯಗೊಂಡ ಗೀತಾ ಶೆಟ್ಟಿಗಾರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಕೂಟರ್‌ ಸವಾರ ಆಶ್ರಫ್‌ ವಿರುದ್ಧ ಮಂಗಳೂರು ಉತ್ತರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್