ಕಾಂಗ್ರೆಸ್‌ನ ಕೊರೋನಾ ಕಾರ‍್ಯಪಡೆಗೆ ಶ್ರೀನಿವಾಸ್‌ ನೇಮಕ

Kannadaprabha News   | Asianet News
Published : May 12, 2021, 09:09 AM ISTUpdated : May 12, 2021, 09:33 AM IST
ಕಾಂಗ್ರೆಸ್‌ನ ಕೊರೋನಾ ಕಾರ‍್ಯಪಡೆಗೆ ಶ್ರೀನಿವಾಸ್‌ ನೇಮಕ

ಸಾರಾಂಶ

ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌  ಕಾಂಗ್ರೆಸ್‌ನ ರಾಷ್ಟ್ರಮಟ್ಟದ ಕಾರ್ಯಪಡೆಗೆ ನೇಮಕ ದೇಶಾದ್ಯಂತ ಕೊರೋನಾ ಸಂಕಷ್ಟದಲ್ಲಿರುವವರಿಗೆ ನೆರವು ಕಾರ್ಯಪಡೆಯ 13 ಸದಸ್ಯರ ತಂಡದಲ್ಲಿ ಶ್ರೀನಿವಾಸ್‌ಗೆ ಸ್ಥಾನ 

ಬೆಂಗಳೂರು (ಮೇ.12):  ಕೊರೋನಾ ಸಂಕಷ್ಟದಲ್ಲಿ ಜನರ ನೆರವಿಗೆ ನಿಂತಿದ್ದ ಕನ್ನಡಿಗ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ಅವರನ್ನು ಕೊರೋನಾ ಸಂಕಷ್ಟದಲ್ಲಿರುವವರ ನೆರವಿಗಾಗಿ ರಚಿಸಿರುವ ಕಾಂಗ್ರೆಸ್‌ನ ರಾಷ್ಟ್ರಮಟ್ಟದ ಕಾರ್ಯಪಡೆ ಸದಸ್ಯರನ್ನಾಗಿ ನೇಮಿಸಲಾಗಿದೆ.

ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ನೇತೃತ್ವದ ಕಾರ್ಯಪಡೆಯ 13 ಸದಸ್ಯರ ತಂಡದಲ್ಲಿ ಶ್ರೀನಿವಾಸ್‌ಗೆ ಸ್ಥಾನ ಕಲ್ಪಿಸಲಾಗಿದೆ. ಈ ಮೂಲಕ ಅಖಿಲ ಭಾರತ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ದೆಹಲಿ ಸೇರಿದಂತೆ ದೇಶಾದ್ಯಂತ ಕೊರೋನಾ ಸಂಕಷ್ಟದಲ್ಲಿರುವವರಿಗೆ ನೆರವಾದ ಶ್ರೀನಿವಾಸ್‌ ಸೇವೆಯನ್ನು ಗುರುತಿಸಿದೆ.

ರಾಜಕೀಯ ಬೇಡ: ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ ..

ಶ್ರೀನಿವಾಸ್‌ ಅವರು ಒಂದು ಸಾವಿರ ಸದಸ್ಯರ ತಂಡದೊಂದಿಗೆ ಜನರ ಸೇವೆಯಲ್ಲಿ ತೊಡಗಿದ್ದರು. ಆಕ್ಸಿಜನ್‌ ಕೊರತೆ, ಆಸ್ಪತ್ರೆಗಳ ಬೆಡ್‌ ಅಲಭ್ಯತೆ, ಪ್ಲಾಸ್ಮಾ ಬೇಡಿಕೆಗಾಗಿ ಮನವಿ ಸಲ್ಲಿಸುವ ಪ್ರತಿಯೊಬ್ಬರಿಗೂ ನೆರವು ನೀಡಿದ್ದರು. ಇದಕ್ಕಾಗಿಯೇ ಸಾಮಾಜಿಕ ಜಾಲತಾಣದ ಮೂಲಕ ಕಂಟ್ರೋಲ್‌ ರೂಂ ಸ್ಥಾಪಿಸಿದ್ದರು. ತಮ್ಮ ಸೇವೆಗಳ ಮೂಲಕ ಎಲ್ಲೆಡೆ ಪ್ರಶಂಸೆಗೆ ಪಾತ್ರರಾಗಿದ್ದರು.

ಕೊರೋನಾ ನಿರ್ವಹಣೆಯಲ್ಲಿ ವಿಫಲ: ಮೋದಿ ತಿವಿದ ಸೋನಿಯಾಗೆ, ಬಿಜೆಪಿ ಅಧ್ಯಕ್ಷನ ಗುದ್ದು! ...

ದೆಹಲಿ ಮತ್ತು ಹೊರ ವಲಯದಲ್ಲಿ ಸೋಂಕಿನ ಸುನಾಮಿ ಎದ್ದಾಗ ಜನರ ರಕ್ಷಣೆಗೆ ನಿಂತಿದ್ದರು. ಶಿವಮೊಗ್ಗ ಜಿಲ್ಲೆಯ ಮಧ್ಯಮ ವರ್ಗದ ಕುಟುಂಬದಿಂದ ಬಂದಿರುವ ಶ್ರೀನಿವಾಸ್‌ 2014ರಲ್ಲಿ ಭಾರತೀಯ ಯುವ ಕಾಂಗ್ರೆಸ್‌ ಕಾರ್ಯದರ್ಶಿಯಾಗಿ ನೇಮಕಗೊಂಡು ಬಳಿಕ ಪ್ರಧಾನ ಕಾರ್ಯದರ್ಶಿಯಾಗಿ ಇದೀಗ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದಾರೆ. ಕೊರೋನಾ ಸಂಕಷ್ಟದಲ್ಲಿರುವ 20 ಸಾವಿರಕ್ಕೂ ಹೆಚ್ಚು ಜನರಿಗೆ ನೆರವಾಗಿರುವ ಶ್ರೀನಿವಾಸ್‌ ಅವರಿಗೆ ಕಾಂಗ್ರೆಸ್‌ ಹೊಸ ಜವಾಬ್ದಾರಿ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!