ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಜಲಮಂಡಳಿ ಅನುಮತಿ ಕಡ್ಡಾಯವೆಂದು ಬಿಡಬ್ಲ್ಯೂಎಸ್‌ಎಸ್‌ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹತ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು (ಮಾ.10): ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೊಳವೆಬಾವಿಗಳನ್ನು ಕೊರೆಯವವರು ಅನುಮತಿ ಪಡೆದಿರುವ ಜಾಗದಲ್ಲಿ ಮಾತ್ರ ಕೊಳವೆ ಬಾವಿಗಳನ್ನು(Borewell) ಕೊರೆಯತಕ್ಕದ್ದು. ಒಂದು ವೇಳೆ ಅನುಮತಿ ಪಡೆಯದೇ ಇರುವ ಸ್ಥಳಗಳಲ್ಲಿ ಕೊಳವೆ ಬಾವಿಗಳನ್ನು ಕೊರೆದಲ್ಲಿ ಅಂತಹ ಕೊಳವೆಬಾವಿ ಕೊರೆಯುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಎಚ್ಚರಿಕೆ ನೀಡಿದೆ.
ಅಂತರ್ಜಲವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡು ಆದೇಶ ಹೊರಡಿಸಿರುವ ಮಂಡಳಿಯು ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 17 ರ ಅಧಿಕಾರದನ್ವಯ ನಿಯಮಾನುಸಾರ ರಿಗ್ ಪಡೆಯಲು ನೀಡಿರುವ ಅನುಮತಿಯನ್ನು ಕೂಡಲೇ ರದ್ದುಪಡಿಸಲು ಕ್ರಮವಹಿಸುವುದು ಮತ್ತು ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
undefined
ಬೆಂಗಳೂರಿಗೆ ಬೇಕಿರೋದು 8 ಟಿಎಂಸಿ, ಕೆಆರ್‌ಎಸ್ ಡ್ಯಾಂನಲ್ಲಿ 34 ಟಿಎಂಸಿ ನೀರಿದೆ: ರಾಮ್ ಪ್ರಸಾತ್ ಮನೋಹರ್
ಹಾಗೆಯೇ, ಇನ್ನು ಮುಂದೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನೆ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 11 ರನ್ವಯ ಎಲ್ಲಾದರು ಸಂಬಂಧಪಟ್ಟ ಪ್ರಾಧಿಕಾರಿಯಿಂದ ಅನುಮತಿ ಪಡೆಯದೇ ಕೊಳವೆ ಬಾವಿಗಳನ್ನು ಕೊರೆದಲ್ಲಿ ಕೊಳವೆಬಾವಿಯನ್ನು ಕೊರೆಸುವ ಮಾಲೀಕರ ವಿರುದ್ಧ ನಿಯಮ ಉಲ್ಲಂಘನೆ ಮಾಡಿರುವುದ್ದಾಗಿ ದೂರು ಹಾಗೂ ಅಂತವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರೂಗಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.
ಈ ಆದೇಶವು ಇದೇ ಮಾ.15 ರಿಂದ ಜಾರಿಗೆ ಬರಲಿದೆ. ಮಾ.15 ರಿಂದ ಬೆಂಗಳೂರು ಜಲಮಂಡಳಿ ಜಾಲತಾಣದಲ್ಲಿ ಕೊಳವೆಬಾವಿ ಕೊರೆಸಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ತಾವು ಅನುಮತಿ ಕೇಳಿದಲ್ಲಿ ಸಾರ್ವಜನಿಕ ಕೊಳವೆ ಬಾವಿಗಳಿಗೆ ಪ್ರಥಮ ಆಧ್ಯತೆ ನೀಡಲಾಗುವುದು ಹಾಗೂ ಖಾಸಗಿ ಕೊಳವೆಬಾವಿಗಳಿಗೆ ಅಂತರ್ಜಲ ಮಟ್ಟ, ಅವಶ್ಯಕತೆ ಹಾಗೂ ತಜ್ಞರ ವರದಿ ಆಧಾರಿಸಿ ಸಂಬಂಧಪಟ್ಟವರಿಂದ ಸ್ಥಳ ಪರಿಶೀಲಿಸಿ ನಂತರ ನಿಯಮಾನುಸಾರ ಸೂಕ್ತ ಪ್ರಾಧಿಕಾರದಿಂದ ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು ಮಹಾನಗರದಲ್ಲಿ ಮಳೆ ನೀರಿನ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು ನಗರದಲ್ಲಿನ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಅಂತರ್ಜಲ ನೀರಿನ ಮಟ್ಟ ಕಡಿಮೆಯಾಗಿದೆ. ಬೆಂಗಳೂರು ನಗರದಲ್ಲಿ ವೈಯಕ್ತಿಕ ಅಥವಾ ಇನ್ನಿತರೆ ಬಳಕೆಗೆ ಕೊಳವೆ ಬಾವಿಗಳನ್ನು ಕೊರೆಯುವ ಮುನ್ನ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 11 ರಂತೆ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
ವಿಜಯಪುರ: 1100 ಅಡಿ ಆಳ ಕೊರೆದರೂ ಸಿಗ್ತಿಲ್ಲ ಜೀವಜಲ, ನೀರಿಗಾಗಿ ಹಾಹಾಕಾರ..!
ಅವೈಜ್ಞಾನಿಕವಾಗಿ ಕೊಳವೆ ಬಾವಿಗಳನ್ನು ಕೊರೆಯುತ್ತಿರುವುದು ಹಾಗೂ ನಿಯಮಾನುಸಾರ ಕೊಳವೆ ಬಾವಿಗಳನ್ನು ಕೊರೆಯುವ ಮುನ್ನ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿ ಪಡೆಯದೇ ಇರುವುದರಿಂದ ಬೆಂಗಳೂರು ನಗರದ ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಅಂತರ್ಜಲವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.