ವಿಜಯೇಂದ್ರ ಪದಗ್ರಹಣಕ್ಕೆ ಹೋಗಲ್ಲ, ಬಿಜೆಪಿ ಬಿಟ್ಟರೂ ಬೇರೆ ಪಕ್ಷ ಸೇರಲ್ಲ: ಸಿಟಿ ರವಿ

Published : Nov 14, 2023, 04:34 AM IST
ವಿಜಯೇಂದ್ರ ಪದಗ್ರಹಣಕ್ಕೆ ಹೋಗಲ್ಲ, ಬಿಜೆಪಿ ಬಿಟ್ಟರೂ ಬೇರೆ ಪಕ್ಷ ಸೇರಲ್ಲ: ಸಿಟಿ ರವಿ

ಸಾರಾಂಶ

  ‘ನ.15ರ ಸಂಜೆಯವರೆಗೂ ಮಧ್ಯಪ್ರದೇಶ ಚುನಾವಣಾ ಪ್ರಚಾರ ಇರುವ ಕಾರಣ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿಲ್ಲ. ನಾನು ಯಾವತ್ತೂ ಪಕ್ಷದ ಲಕ್ಷ್ಮಣ ರೇಖೆ ದಾಟಿಲ್ಲ. ಒಂದು ವೇಳೆ, ಬೇಡ ಎನಿಸಿದರೆ ರಾಜಕೀಯ ಬಿಟ್ಟು ಸುಮ್ಮನೆ ಕುಳಿತುಕೊಳ್ಳುತ್ತೇನೆ. ಆದರೆ, ಬೇರೆ ಪಕ್ಷಕ್ಕೆ ಹೋಗಿ ರಾಜಕೀಯ ಮಾಡಲ್ಲ’ ಎಂದು ಮಾಜಿ ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.

ಚಿಕ್ಕಮಗಳೂರು (ನ.14) :  ‘ನ.15ರ ಸಂಜೆಯವರೆಗೂ ಮಧ್ಯಪ್ರದೇಶ ಚುನಾವಣಾ ಪ್ರಚಾರ ಇರುವ ಕಾರಣ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿಲ್ಲ. ನಾನು ಯಾವತ್ತೂ ಪಕ್ಷದ ಲಕ್ಷ್ಮಣ ರೇಖೆ ದಾಟಿಲ್ಲ. ಒಂದು ವೇಳೆ, ಬೇಡ ಎನಿಸಿದರೆ ರಾಜಕೀಯ ಬಿಟ್ಟು ಸುಮ್ಮನೆ ಕುಳಿತುಕೊಳ್ಳುತ್ತೇನೆ. ಆದರೆ, ಬೇರೆ ಪಕ್ಷಕ್ಕೆ ಹೋಗಿ ರಾಜಕೀಯ ಮಾಡಲ್ಲ’ ಎಂದು ಮಾಜಿ ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ‘ನಾನು 20 ವರ್ಷ ಶಾಸಕನಾಗಿದ್ದೆ. 35 ವರ್ಷದಿಂದ ಪಕ್ಷದ ಕಾರ್ಯಕರ್ತನಾಗಿ ವಿವಿಧ ಜವಾಬ್ದಾರಿಗಳನ್ನು ಹೊತ್ತು ಕೆಲಸ ಮಾಡಿದ್ದೇನೆ. ಜಗಳವಾಡಿದರೂ ನಮ್ಮ ಮನೆಯೊಳಗೇ ಜಗಳ, ಹೊಸಿಲು ದಾಟಿ ಬೇರೆಯವರ ಮನೆಗೆ ಹೋಗಿ ನಮ್ಮ ಮನೆಯ ಸಮಸ್ಯೆಯನ್ನು ಬಗೆಹರಿಸಿ ಎಂದು ಕೇಳಿಲ್ಲ. ಪಕ್ಷ ಏನೂ ಜವಾಬ್ದಾರಿ ಕೊಟ್ಟಿಲ್ಲ ಎಂದರೂ ಬಿಜೆಪಿಗೆ ಮತ ಕೊಡಿ ಎಂದೇ ಕೇಳುತ್ತೇನೆ. ಬೇರೆ ಪಕ್ಷಕ್ಕೆ ಮತ ಕೊಡಿ ಎಂದು ಕೇಳಲಿಕ್ಕೆ ಆಗುವುದಿಲ್ಲ. ನನಗೆ ಬುದ್ಧಿ ಬಂದಾಗಿನಿಂದ, ಬಿಜೆಪಿಗೆ ಸೇರಿದಾಗಿನಿಂದ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಮತ ಕೇಳಿಲ್ಲ, ಬೇರೆ ಪಕ್ಷಕ್ಕೆ ಮತ ಹಾಕಿಲ್ಲ. ನನಗಿರುವುದು ಒಂದೇ ಪಕ್ಷ ಅದು ಬಿಜೆಪಿ. ಅಕಸ್ಮಾತ್ ರಾಜಕೀಯ ಬೇಡ ಎನಿಸಿದರೆ ರಾಜಕೀಯ ಬಿಟ್ಟು ಸುಮ್ಮನೆ ಕುಳಿತುಕೊಳ್ಳುತ್ತೇನೆ. ಬಿಜೆಪಿಯನ್ನು ಬಿಟ್ಟು ಮತ್ತೊಂದು ಪಕ್ಷಕ್ಕೆ ಹೋಗಿ ರಾಜಕಾರಣ ಮಾಡುವುದಿಲ್ಲ’ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ: ರಾಮ, ಪಾಂಡವರಿಗೂ ವನವಾಸ ತಪ್ಪಲಿಲ್ಲ, ನಾನು ಅವರಿಗಿಂತ ದೊಡ್ಡವನಾ? -ಸಿಟಿ ರವಿ!

ನ.15 ರಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಜವಾಬ್ದಾರಿ ಸ್ವೀಕರಿಸಲಿದ್ದಾರೆ. ಈ ಸಂಬಂಧ ಅವರು ನನ್ನೊಂದಿಗೆ ಎರಡು ಬಾರಿ ಮಾತನಾಡಿ, ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಆದರೆ, ಮಧ್ಯಪ್ರದೇಶದ ಚುನಾವಣಾ ಜವಾಬ್ದಾರಿ ಇರುವುದರಿಂದ ಅಲ್ಲಿಗೆ ಹೊರಡುತ್ತಿದ್ದೇನೆ. ನ.15ರ ರಾತ್ರಿವರೆಗೂ ಪ್ರಚಾರಕ್ಕಾಗಿ ಅಲ್ಲಿಯೇ ಇರಬೇಕಾಗುತ್ತದೆ. ಹಾಗಾಗಿ, ನನಗೆ ಸಮಾರಂಭಕ್ಕೆ ಬರಲು ಆಗುವುದಿಲ್ಲ ಎಂದು ಅವರಿಗೆ ತಿಳಿಸಿದ್ದೇನೆ ಎಂದರು.

ಪಕ್ಷದ ವರಿಷ್ಠರು ವಿಜಯೇಂದ್ರ ಅವರಿಗೆ ಅಧ್ಯಕ್ಷ ಹುದ್ದೆ ನೀಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಏನು ಗೌರವ ಕೊಡಬೇಕೋ ಅದನ್ನು ಕೊಟ್ಟೇ ಕೊಡುತ್ತೇನೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು, ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬ ಒಂದೇ ಗುರಿ ಇಟ್ಟುಕೊಂಡು ನಾನು ಕೆಲಸ ಮಾಡುತ್ತಿದ್ದೇನೆ ಎಂದರು. 

 

ಅವರು ಪ್ರದರ್ಶನ ಮಾಡಿದ್ದು 'ಮರದ ಕತ್ತಿ' ಅನ್ನುವ ಪರಮೇಶ್ವರ ಒಬ್ಬ ಅಸಮರ್ಥ ಗೃಹ ಸಚಿವ: ಸಿಟಿ ರವಿ ವಾಗ್ದಾಳಿ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನ.15ಕ್ಕೆ ಜವಾಬ್ದಾರಿ ಸ್ವೀಕರಿಸಲಿದ್ದಾರೆ. ಅವರು ಎರಡು ಬಾರಿ ಕರೆ ಮಾಡಿ ನನ್ನನ್ನು ಆಹ್ವಾನಿಸಿದ್ದಾರೆ. ಆದರೆ, ನ.15ರ ರಾತ್ರಿವರೆಗೂ ಮಧ್ಯಪ್ರದೇಶ ಚುನಾವಣಾ ಪ್ರಚಾರ ಜವಾಬ್ದಾರಿ ಇರುವುದರಿಂದ ಸಮಾರಂಭಕ್ಕೆ ಬರಲು ಆಗುವುದಿಲ್ಲ ಎಂದು ಅವರಿಗೆ ತಿಳಿಸಿದ್ದೇನೆ.

- ಸಿ.ಟಿ.ರವಿ, ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

-

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್