2028ಕ್ಕೆ ಸಿದ್ದರಾಮಯ್ಯ ಅಲ್ಲ, ಡಿಕೆಶಿನೂ ಅಲ್ಲ, ವಿಜಯೇಂದ್ರ ಸಿಎಂ: ಬಿಜೆಪಿ ಮುಖಂಡನ ಭವಿಷ್ಯವಾಣಿ ನಿಜವಾಗುತ್ತಾ?

Kannadaprabha News, Ravi Janekal |   | Kannada Prabha
Published : Feb 15, 2026, 11:33 AM IST
BY Vijayendra Becoming CM in 2028 Bagalkote BJP leader

ಸಾರಾಂಶ

BY Vijayendra Becoming CM in 2028 ಬೀಳಗಿಯಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಅವರು 2028ಕ್ಕೆ ಬಿ.ವೈ.ವಿಜಯೇಂದ್ರ ರಾಜ್ಯದ ಮುಖ್ಯಮಂತ್ರಿಯಾಗುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಬೀಳಗಿ (ಫೆ.15): ಸೂರ್ಯ-ಚಂದ್ರ ಉದಯಿಸುವುದು ಎಷ್ಟು ಸತ್ಯವೋ, 2028ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈ ರಾಜ್ಯದ ಮುಖ್ಯಮಂತ್ರಿ ಆಗೋದು ಅಷ್ಟೇ ಸತ್ಯ ಎಂದು ಬಾಗಲಕೋಟೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಹೇಳಿದರು.

ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ನಡೆದ ವಿಬಿ ಜಿ ರಾಮ್ ಜಿ ಜನಜಾಗೃತಿ ಸಭೆಯಲ್ಲಿ ಮಾತನಾಡಿ, ನಮ್ಮ ಪಕ್ಷದ ಅಧ್ಯಕ್ಷರು ನಮ್ಮ ಜೊತೆ ಎಲ್ಲ ವಿಷಯವನ್ನು ಹಂಚಿಕೊಳ್ಳುತ್ತಾರೆ. ನಾನು ಎರಡು ದಿನಗಳಿಂದ ಅವರ ಜೊತೆಯಲ್ಲೇ ಇದ್ದೇನೆ. ಎಲ್ಲಿಯೇ ಹೋದರೂ ಇವರು ನಮ್ಮ ಯಡಿಯೂರಪ್ಪನವರ ಮಗ ಅಂತ ಅಭಿಮಾನದಿಂದ ಹೇಳುತ್ತಾರೆ ಎಂದು ಶ್ಲಾಘಿಸಿದರು.

ಸೂರ್ಯ ಉದಯಿಸುವುದು ಎಷ್ಟು ಸತ್ಯವೋ, 2028ಕ್ಕೆ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಆಗೋದು ಅಷ್ಟೇ ಸತ್ಯ. ರಾಜ್ಯದಲ್ಲಿ ಎಲ್ಲಿಯೇ ಹೋದರೂ ಜನರು ಯಡಿಯೂರಪ್ಪನವರು ನಮ್ಮವರು, ನಮ್ಮ ಯಡಿಯೂರಪ್ಪನವರ ಮಗ ವಿಜಯೇಂದ್ರ ನಮ್ಮ ಅಧ್ಯಕ್ಷರು ಎಂದು ಅಭಿಮಾನದಿಂದ ಹೇಳುತ್ತಾರೆ. ಹಿಂದೆ, ನಮ್ಮ ಯಡಿಯೂರಪ್ಪನವರು ಇಲ್ಲಿಗೆ ಬಂದು ಹೋದ ಮೇಲೆ ಮುಖ್ಯಮಂತ್ರಿ ಆಗಿದ್ದರು. ಈಗ ನೀವು (ವಿಜಯೇಂದ್ರ) ಬಂದಿದ್ದೀರಿ, ನೀವು ಮುಖ್ಯಮಂತ್ರಿ ಆಗುತ್ತೀರಿ ಎಂದು ಪ್ರತಿ ಗ್ರಾಮದಲ್ಲಿ ಹೇಳುತ್ತಿದ್ದಾರೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಾಟಾಳ್‌ ನಾಗರಾಜ್‌ ಮೊಮ್ಮಗನ ಮದುವೆ; ಕುದುರಿ ಏರಿ, ಅದ್ದೂರಿಯಾಗಿ ಬಂದ ವಧು-ವರ! PHOTOS
1000 ದಿನ ಪೂರೈಸಿದ ಇದೊಂದು 'ಹೊಲಸು ಸರ್ಕಾರ' ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಗಜಿಣಗಿ ವಾಗ್ದಾಳಿ!