Latest Videos

ಪೋಕ್ಸೋ ಕೇಸ್‌ನಲ್ಲಿ ಯಡಿಯೂರಪ್ಪಗೆ ರಿಲೀಫ್‌: ಕೋಟಿ ಹೃದಯಗಳ ಪ್ರಾರ್ಥನೆ ಫಲಿಸಿದೆ, ವಿಜಯೇಂದ್ರ

By Kannadaprabha NewsFirst Published Jun 15, 2024, 6:58 AM IST
Highlights

ಯಡಿಯೂರಪ್ಪ ಅವರು ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ ಎನ್ನುವ ಮಾತನ್ನು ಉಲ್ಲೇಖಿಸಿರುವುದು ಯಡಿಯೂರಪ್ಪನವರು ಈ ನೆಲದ ಕಾನೂನಿಗೆ ಗೌರವ ಕೊಡುವ ಪರಿಯನ್ನು ಸಾಕ್ಷೀಕರಿಸಿದೆ. ಮುಂದಿನ ದಿನದಲ್ಲಿ ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ಇದೆ ಎಂದ ವಿಜಯೇಂದ್ರ

ಬೆಂಗಳೂರು(ಜೂ.15):  ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಕೂಡದು ಎಂಬುದಾಗಿ ಹೈಕೋರ್ಟ್‌ ಹೇಳಿದ್ದು, ನ್ಯಾಯದ ಹಾದಿಯಲ್ಲಿ ಷಡ್ಯಂತ್ರಗಳನ್ನು ಯಡಿಯೂರಪ್ಪ ಜಯಿಸಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಬಿಜೆಪಿ ನಾಯಕ ಎನ್‌.ರವಿಕುಮಾರ್‌ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದ್ದಾರೆ.

ಯಡಿಯೂರಪ್ಪ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ. ಷಡ್ಯಂತ್ರ, ಪಿತೂರಿ ರಾಜಕಾರಣ ಯಡಿಯೂರಪ್ಪ ಅವರನ್ನು ಹಿಂಬಾಲಿಸಿಕೊಡು ಬರುತ್ತಲೇ ಇದೆ. ಎದೆಗುಂದದೆ ಎದುರಿಸಿ ಜಯಸಿದ್ದಾರೆ. ಯಡಿಯೂರಪ್ಪ ಅವರು ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ ಎನ್ನುವ ಮಾತನ್ನು ಉಲ್ಲೇಖಿಸಿರುವುದು ಯಡಿಯೂರಪ್ಪನವರು ಈ ನೆಲದ ಕಾನೂನಿಗೆ ಗೌರವ ಕೊಡುವ ಪರಿಯನ್ನು ಸಾಕ್ಷೀಕರಿಸಿದೆ. ಮುಂದಿನ ದಿನದಲ್ಲಿ ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ಇದೆ ಎಂದು ವಿಜಯೇಂದ್ರ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ದಾರಿಯಲ್ಲಿ ಹೋಗೋರು ದೂರು ಕೊಟ್ಟ ತಕ್ಷಣ ಅರೆಸ್ಟ್ ಅಂದರೆ ಏನರ್ಥ: ಬಿಎಸ್‌ವೈ ಪರ ಬ್ಯಾಟ್ ಬೀಸಿದ ಶಾಮನೂರು..!

ಇನ್ನು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿಕುಮಾರ್‌, ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಮಾಧ್ಯಮದಲ್ಲಿ ಸುದ್ದಿ ಬರುತ್ತಿತ್ತು. ಆದರೆ, ಯಡಿಯೂರಪ್ಪ ಅವರಿಗೆ 82 ವರ್ಷವಾಗಿದ್ದು, ಅವರು ಓಡಿ ಹೋಗುವ ವ್ಯಕ್ತಿ ಅಲ್ಲ. ನಾಲ್ಕು ಬಾರಿ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ ದೊಡ್ಡ ಜನನಾಯಕ. ಅದೆಲ್ಲ ಇತಿಹಾಸವನ್ನು ಗಮನಿಸಿ ನ್ಯಾಯಾಲಯವು ಈ ಆದೇಶ ನೀಡಿದೆ ಎಂದರು.

ಪ್ರಕರಣವನ್ನು ದಾಖಲಿಸಿದ ಮಹಿಳೆಯು ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ತರಲು ಮತ್ತು ದ್ವೇಷದ ರಾಜಕಾರಣ ಮಾಡುವ ಉದ್ದೇಶ ಹೊಂದಿದ್ದರು. ಈ ಅಂಶವನ್ನು ನ್ಯಾಯಾಲಯವು ಗಮನಿಸಿದೆ. ಯಡಿಯೂರಪ್ಪನವರ ದೀರ್ಘ ಹೋರಾಟಕ್ಕೆ ಸಿಕ್ಕಿದ ಜಯ ಇದಾಗಿದೆ. ಮೂರು ತಿಂಗಳ ಕಾಲ ಏನೂ ಚಟುವಟಿಕೆ ನಡೆಯದೆ, ಚಾರ್ಜ್‍ಶೀಟ್ ಮಾಡದೆ, ಈಗ ಕಾಂಗ್ರೆಸ್‌ನ ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಸುರ್ಜೇವಾಲಾ ಕರ್ನಾಟಕಕ್ಕೆ ಬಂದು ಹೋದ ಮೇಲೆ ಏಕಾಏಕಿ ಅವರನ್ನು ಬಂಧಿಸಲು ಸರ್ಕಾರ ಮುಂದಾಗಿತ್ತು. ಸರ್ಕಾರ ತನ್ನ ಹುಳುಕುಗಳನ್ನು ಮುಚ್ಚಿಹಾಕಲು ಈ ಷಡ್ಯಂತ್ರ ಮಾಡಿತ್ತು ಎಂಬುದಕ್ಕೆ ಯಾವುದೇ ಅನುಮಾನ ಬೇಡ ಎಂದು ತಿಳಿಸಿದರು.

click me!